AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಹೋಟೆಲ್​​ನ ಈಜುಕೊಳದಲ್ಲಿ ದುರಂತ: ಎಲೆಕ್ಟ್ರಿಕ್ ಶಾಕ್​​ಗೆ ಇಬ್ಬರು ವಿದೇಶಿಗರು ಬಲಿ, ಮತ್ತಿಬ್ಬರಿಗೆ ಗಂಭೀರ ಗಾಯ

ಬೆಂಗಳೂರಿನ ಖಾಸಗಿ ಹೋಟೆಲ್​​ವೊಂದರ ಈಜುಕೊಳದಲ್ಲಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ವಿದೇಶಿ ಪ್ರವಾಸಿಗರು ಮೃತಪಟ್ಟಿದ್ದು, ರಕ್ಷಣೆಗೆ ತೆರಳಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಸ್ಲೋವೋಕಿಯಾ ಮತ್ತು ಜರ್ಮನ್​​ ಮೂಲದವರು ಎಂದು ಗುರುತಿಸಲಾಗಿದೆ. ಸದ್ಯ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಹೋಟೆಲ್​​ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ.

ಬೆಂಗಳೂರಿನ ಖಾಸಗಿ ಹೋಟೆಲ್​​ನ ಈಜುಕೊಳದಲ್ಲಿ ದುರಂತ: ಎಲೆಕ್ಟ್ರಿಕ್ ಶಾಕ್​​ಗೆ ಇಬ್ಬರು ವಿದೇಶಿಗರು ಬಲಿ, ಮತ್ತಿಬ್ಬರಿಗೆ ಗಂಭೀರ ಗಾಯ
ಬೆಂಗಳೂರಿನ ಖಾಸಗಿ ಹೋಟೆಲ್​​ನ ಈಜುಕೊಳದಲ್ಲಿ ದುರಂತ
ಶಿವಪ್ರಸಾದ್​ ಬಿ.
| Edited By: |

Updated on:Oct 31, 2026 | 11:17 AM

Share

ಬೆಂಗಳೂರು, ಅಕ್ಟೋಬರ್​​ 31: ಖಾಸಗಿ ಹೋಟೆಲ್​​ನ ಈಜುಕೊಳದಲ್ಲಿ ಇಬ್ಬರು ವಿದೇಶಿಗರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಲೆಕ್ಟ್ರಿಕ್ ಶಾಕ್​​ನಿಂದ ದುರ್ಘಟನೆ ನಡೆದಿದ್ದು, ಸ್ಲೋವಾಕಿಯಾ ಮೂಲದ ಓರಿಯಾಟ್ (45) ಮತ್ತು ಜರ್ಮನ್​​ ಮೂಲದ ಅಲೆಕ್ಸಾಂಡರ್ ಮ್ಯಾಕ್ಸಿಲನ್ (59) ಮೃತ ದುರ್ದೈವಿಗಳಾಗಿದ್ದಾರೆ. ಈ ಸಂಬಂಧ ಮೃತ ಅಲೆಕ್ಸಾಂಡರ್ ಪತ್ನಿ ದೂರು ನೀಡಿದ್ದು, ಸ್ಥಳಕ್ಕೆ ಹಲಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ.

ರಕ್ಷಣೆಗೆ ಹೋದ ಇಬ್ಬರಿಗೆ ಗಂಭೀರ ಗಾಯ

ಕಾನ್ರಾಡ್ ಹೋಟೆಲ್‌ನ 3ನೇ ಮಹಡಿಯಲ್ಲಿರುವ ಸ್ವಿಮ್ಮಿಂಗ್ ಪೂಲ್​​ನಲ್ಲಿ ಘಟನೆ ನಡೆದಿದೆ. ಸ್ಲೋವೋಕಿಯಾ ಮತ್ತು ಜರ್ಮನ್ ಮೂಲದ ಇಬ್ಬರು ಕಳೆದ ಕೆಲ ದಿನಗಳಿಂದ ಹೋಟೆಲ್​​ನಲ್ಲಿ ತಂಗಿದ್ದರು. ಘಟನೆ ವೇಳೆ ಇಬ್ಬರನ್ನು ರಕ್ಷಿಸಲು ಅಮೆರಿಕ ಮೂಲದ ವ್ಯಕ್ತಿ ಮತ್ತು ಪೂಲ್​​ ಅಟೆಂಡರ್​​ ಯತ್ನಿಸಿದ್ದು, ಅವರಿಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಹೋಟೆಲ್​​ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಗೋಕರ್ಣದಲ್ಲಿ ಮೂವರು ಮೀನುಗಾರರ ಮರಣದ ಬೆನ್ನಲ್ಲೇ ಮತ್ತೊಂದು ದುರಂತ! ಮೀನಿನ ವಿಷಾನಿಲಕ್ಕೆ ಮತ್ತೆ ಇಬ್ಬರ ಸಾವು

ವರುಣ ನಾಲೆಯಲ್ಲಿ ಈಜಲು ಹೋಗಿ ದುರಂತ

ವರುಣ ನಾಲೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೋಳದ ಪಂಪ್​ಲೈನ್​ ರಸ್ತೆಯಲ್ಲಿ ನಡೆದಿದೆ. ಓರ್ವ ವಿದ್ಯಾರ್ಥಿ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ನಾಪತ್ತೆಯಾಗಿದ್ದಾನೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ 3ನೇ ವರ್ಷದ ಬಿ.ಇ ಓದುತ್ತಿದ್ದ ಅರ್ಜುನ್​​ ಮೃತ ವಿದ್ಯಾರ್ಥಿಯಾಗಿದ್ದು, ಆತನ ಸ್ನೇಹಿತ ಪಾರ್ಥಸಾರಥಿ ಪತ್ತೆಗೆ ಅಗ್ನಿಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ. ನಿನ್ನೆ ಸ್ನೇಹಿತರೊಂದಿಗೆ ವರಣು ನಾಲೆಗೆ ಈಜಲು ಇವರು ಬಂದಿದ್ದರು. ರಭಸವಾಗಿ ನೀರು ಹರಿದಿದ್ದರಿಂದ ಕೊಚ್ಚಿಹೋಗಿದ್ದರು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:11 am, Sat, 31 October 26

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!