AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕಿ ಬೈದಿದ್ದಕ್ಕೆ ದುಡುಕಿನ ನಿರ್ಧಾರ: ಪ್ರಾಣ ಕಳೆದುಕೊಂಡ 8ನೇ ತರಗತಿ ವಿದ್ಯಾರ್ಥಿನಿ

Government School Girl Death Case ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ಆನೇಕಲ್‌ನ ಮರಸೂರು ಸರ್ಕಾರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ಬಾಲಕಿ ಬರೆದಿಟ್ಟಿರುವ ಹೃದಯ ವಿದ್ರಾವಕ ಡೆತ್‌ನೋಟ್ ಲಭ್ಯವಾಗಿದ್ದು, ಸೂರ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿಕ್ಷಕಿ ಬೈದಿದ್ದಕ್ಕೆ ದುಡುಕಿನ ನಿರ್ಧಾರ: ಪ್ರಾಣ ಕಳೆದುಕೊಂಡ 8ನೇ ತರಗತಿ ವಿದ್ಯಾರ್ಥಿನಿ
ಮರಸೂರು ಶಾಲೆImage Credit source: Tv9 Kannada
ರಾಮು, ಆನೇಕಲ್​
| Edited By: |

Updated on:Jul 09, 2026 | 4:58 PM

Share

ಬೆಂಗಳೂರು, ಜುಲೈ 09: ಶಿಕ್ಷಕಿ ಬೈದರು ಎಂಬ ಕಾರಣಕ್ಕೆ ಮನನೊಂದ 8ನೇ ತರಗತಿ ವಿದ್ಯಾರ್ಥಿನಿಯೋರ್ವಳು ದುಡುಕಿನ ನಿರ್ಧಾರ ಕೈಗೊಂಡು ಜೀವನವನ್ನೇ ಅಂತ್ಯಗೊಳಿಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ನಡೆದಿದೆ. ಮರಸೂರು ಶಾಲೆಯ ವಿಧ್ಯಾರ್ಥಿನಿ ಮಧುಶ್ರೀ ಮೃತ ದುರ್ದೈವಿಯಾಗಿದ್ದು, ಮನೆಯಲ್ಲಿಯೇ ನೇಣು ಹಾಕಿಕೊಂಡು ಪ್ರಾಣ ಬಿಟ್ಟಿದ್ದಾಳೆ. ಬೆಳಿಗ್ಗೆ ಪೋಷಕರು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿದ್ಯಾರ್ಥಿನಿ ಮಧುಶ್ರೀ ಬರೆದ ಡೆತ್​​ನೋಟ್​​ ಲಭ್ಯ

ಇನ್ನು ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದ ಡೆತ್​​ನೋಟ್​​ ಕೂಡ ಲಭ್ಯವಾಗಿದೆ. ಇದರಲ್ಲಿ ಹಲವು ವಿಚಾರಗಳನ್ನು ಆಕೆ ಉಲ್ಲೇಖಿಸಿರುವುದು ಕಂಡುಬಂದಿದೆ. ಶಾಲೆಯಲ್ಲಿ ನಡೆದ ಘಟನೆ ತನಗೆ ಬಹಳ ನೋವು ತಂದಿದೆ. ತನ್ನ ಮೇಲೆ ಇಲ್ಲಸಲ್ಲದ ಅಪರಾಧವನ್ನ ಹೊರಿಸಿದ್ದಾರೆ. ಈ ಅವಮಾನವನ್ನು ಸಹಿಸಿಕೊಂಡು ಬದುಕಲು ತನ್ನಿಂದ ಆಗುತ್ತಿಲ್ಲ. ಮನಸ್ಸಿಗೆ ತೀವ್ರ ನೋವಾಗಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದಾಕೆ ತಿಳಿಸಿದ್ದಾಳೆ.

ಇದನ್ನೂ ಓದಿ: ಚನ್ನಪಟ್ಟಣ ತಹಶೀಲ್ದಾರ್ ಮೇಲೆ ಹಲ್ಲೆ, ವಿವಸ್ತ್ರಗೊಳಿಸಿ 10 ಲಕ್ಷ ರೂ.ಗೆ ಬ್ಲಾಕ್‌ಮೇಲ್; ರೌಡಿಶೀಟರ್ ಬಂಧನ

ಈ ವಿಚಾರದಲ್ಲಿ ಅಮ್ಮ, ಅಕ್ಕ, ತಂಗಿ ಮತ್ತು ತಮ್ಮ ಯಾರದ್ದು ಕೂಡ ತಪ್ಪಿಲ್ಲ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ. ಅಮ್ಮನನ್ನು ಯಾರು ಕೂಡ ಬೈಯ್ಯಬೇಡಿ. ತನಗೆ ಈ ಭೂಮಿ ಮೇಲೆ ಬದುಕಲು ಆರ್ಹತೆ ಇಲ್ಲ. ಅಮ್ಮ ಮತ್ತು ಎಲ್ಲರೂ ನನ್ನನ್ನ ಕ್ಷಮಿಸಿ ಎಂದು ವಿಧ್ಯಾರ್ಥಿನಿ ಮಧುಶ್ರೀ ಡೆತ್​​ನೋಟ್​​ನಲ್ಲಿ ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:19 pm, Thu, 9 July 26

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ