AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗರ್ಭಿಣಿಯ ಅವಳಿ ಮಕ್ಕಳ ಸಾವು, ಮಂಗಳೂರಿನಲ್ಲಿ ಬಾವಿಗೆ ಬಿದ್ದ ಪುಟ್ಟ ಕಂದಮ್ಮ!

ರಾಜ್ಯದಲ್ಲಿ ಸಂಬಂಧಿಗಳ ಗಲಾಟೆ ಹಾಗೂ ದಂಪತಿ ನಡುವಿನ ಜಗಳ ಎರಡು ಭೀಕರ ದುರಂತಗಳಿಗೆ ಸಾಕ್ಷಿಯಾಗಿದೆ. ಬೆಂಗಳೂರಿನ ಕೊತ್ತನೂರಿನಲ್ಲಿ ಗಲಾಟೆಗೆ ಗರ್ಭಿಣಿಯೊಬ್ಬರು ಅವಳಿ ಮಕ್ಕಳನ್ನು ಕಳೆದುಕೊಂಡಿದ್ದರೆ, ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಫೋನ್‌ನಲ್ಲಿ ಗಂಡನ ಜೊತೆ ಜಗಳವಾಡಿದ ಪತ್ನಿ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದಿದ್ದಾಳೆ. ಈ ಘಟನೆಗಳಲ್ಲಿ ಕಂದಮ್ಮಗಳು ಸಾವನ್ನಪ್ಪಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರಿನಲ್ಲಿ ಗರ್ಭಿಣಿಯ ಅವಳಿ ಮಕ್ಕಳ ಸಾವು, ಮಂಗಳೂರಿನಲ್ಲಿ ಬಾವಿಗೆ ಬಿದ್ದ ಪುಟ್ಟ ಕಂದಮ್ಮ!
ಸಾಂದರ್ಭಿಕ ಚಿತ್ರ
ಭಾವನಾ ಹೆಗಡೆ
|

Updated on: Sep 20, 2026 | 7:36 AM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಗಲಾಟೆಗೆ ಪೆಟ್ಟುಬಿದ್ದು 6 ತಿಂಗಳ ಗರ್ಭಿಣಿಯ ಅವಳಿ ಮಕ್ಕಳು ಅಬಾರ್ಷನ್.
  • ಮಂಗಳೂರಿನಲ್ಲಿ ಗಂಡನ ಜೊತೆಗಿನ ಜಗಳಕ್ಕೆ ಇಬ್ಬರು ಮಕ್ಕಳನ್ನು ಬಾವಿಗೆಗೆದ ಪತ್ನಿ.
  • ದಕ್ಷಿಣ ಕನ್ನಡದಲ್ಲಿ ಬಾವಿಗೆ ಬಿದ್ದ ಮಗು ಸಾವು, ಪೊಲೀಸರಿಂದ ತನಿಖೆ ಆರಂಭ.

ಬೆಂಗಳೂರು, ಸೆಪ್ಟೆಂಬರ್ 20: ರಾಜ್ಯದಲ್ಲಿ ಸಂಬಂಧಿಗಳ ನಡುವಿನ ಗಲಾಟೆ ಹಾಗೂ ದಂಪತಿ ನಡುವಿನ ವೈವಾಹಿಕ ಕಲಹವು ಎರಡು ಪ್ರತ್ಯೇಕ ಕ್ರೂರ ದುರಂತಗಳಿಗೆ ಸಾಕ್ಷಿಯಾಗಿದೆ. ಬೆಂಗಳೂರಿನ ಕೊತ್ತನೂರಿನಲ್ಲಿ ನಡೆದ ಕುಟುಂಬಗಳ ನಡುವಿನ ಗಲಾಟೆಯಲ್ಲಿ ೬ ತಿಂಗಳ ಗರ್ಭಿಣಿಗೆ ಪೆಟ್ಟುಬಿದ್ದು ಅವಳಿ ಮಕ್ಕಳು ಗರ್ಭದಲ್ಲೇ ಕೊನೆಯುಸಿರೆಳೆದಿದ್ದರೆ, ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಗಂಡನೊಂದಿಗಿನ ಫೋನ್ ಜಗಳದ ಕೋಪದಲ್ಲಿ ತಾಯಿ ಇಬ್ಬರು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದ ಭೀಕರ ಘಟನೆ ಸಂಭವಿಸಿದೆ. ಈ ಎರಡೂ ಪ್ರಕರಣಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಆಘಾತ ಮೂಡಿಸಿವೆ.

ಗಲಾಟೆಯಲ್ಲಿ 6 ತಿಂಗಳ ಗರ್ಭಿಣಿಯ ಅವಳಿ ಮಕ್ಕಳ ಅಬಾರ್ಷನ್

ಕೊತ್ತನೂರಿನ ಶಬರಿನಗರದಲ್ಲಿ ಸೆಪ್ಟೆಂಬರ್ 6 ರಂದು ಯಾಸಿನ್ ಹಾಗೂ ಜಾಫರ್ ಎಂಬುವವರ ಕುಟುಂಬಗಳ ನಡುವೆ ಸಣ್ಣ ಬೈಕ್ ವಿಚಾರಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ ಮಾರಾಮಾರಿಯಾಗಿದೆ. ಈ ವೇಳೆ ಜಾಫರ್ ಮಗಳು, 6 ತಿಂಗಳ ಗರ್ಭಿಣಿಯಾಗಿದ್ದ ತಾನಿಯಾ ಸಿದ್ದಿಕಿ ಎಂಬುವವರಿಗೆ ತೀವ್ರ ಪೆಟ್ಟುಬಿದ್ದಿದೆ. ಪರಿಣಾಮವಾಗಿ ಗರ್ಭದಲ್ಲಿದ್ದ ಅವಳಿ ಮಕ್ಕಳು ಅಬಾರ್ಷನ್ ಆಗಿದ್ದು, ಕಂದಮ್ಮಗಳನ್ನು ಕಳೆದುಕೊಂಡ ತಾನಿಯಾ ಕಣ್ಣೀರಿಡುತ್ತ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯವರಿಂದ ಕೌಂಟರ್ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಫೋನ್‌ನಲ್ಲಿ ಗಂಡನ ಜೊತೆ ಜಗಳ, ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಪತ್ನಿ!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪೆರ್ನೆ ಎಂಬಲ್ಲಿ ವೈವಾಹಿಕ ಕಲಹ ಭೀಕರ ಸ್ವರೂಪ ಪಡೆದುಕೊಂಡಿದೆ. ಗಂಡ ಸಿನಾನ್ (32) ಹಾಗೂ ಪತ್ನಿ ನೂರುನ್ನಿಸಾ (28) ನಡುವೆ ಫೋನ್‌ನಲ್ಲಿ ಜಗಳ ನಡೆದಿದ್ದು, ಕೋಪಗೊಂಡ ನೂರುನ್ನಿಸಾ ತನ್ನ ಮೂರೂವರೆ ವರ್ಷದ ಮಗಳು ಆಲಿಯಾ ಹಾಗೂ ಗಂಡನ ತಂಗಿಯ ಮೂರು ವರ್ಷದ ಗಂಡು ಮಗು ರಭಿಹ ನನ್ನು ಬಾವಿಗೆ ಎಸೆದಿದ್ದಾಳೆ. ಘಟನೆಯಲ್ಲಿ ಗಂಡನ ತಂಗಿಯ ಮಗು ರಭಿಹ ಮೃತಪಟ್ಟಿದ್ದು, ಬದುಕಿಳಿದ ಆಲಿಯಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಉಪ್ಪಿನಂಗಡಿ ಪೊಲೀಸರು ನೂರುನ್ನಿಸಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವರದಿ: ರಾಚಪ್ಪ, ಬೆಂಗಳೂರು ಮತ್ತು ಪೃಥ್ವಿರಾಜ್, ಮಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು