ಪ್ರತಿಸ್ಪರ್ಧಿ ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ರಾಷ್ಟ್ರೀಯತೆಯ ಬಗ್ಗೆ ತರಬೇತಿ

ಮೋದಿ ಆಡಳಿತದ ಸುಮಾರು ಏಳು ವರ್ಷಗಳ ನಂತರ, ಜಾತ್ಯತೀತ ಪಕ್ಷಗಳಿಗೆ ಒಂದು ಟ್ರಿಕಿ ಸವಾಲನ್ನು ಒಡ್ಡಲು ಬಿಜೆಪಿ ರಾಷ್ಟ್ರೀಯತೆ ಮತ್ತು ಹಿಂದುತ್ವ ಎಂಬ ಅಸ್ತ್ರಗಳನ್ನು ಯಶಸ್ವಿಯಾಗಿ ಬಳಸಿದ ನಂತರ, ಕಾಂಗ್ರೆಸ್ ತನ್ನ ಕಾರ್ಯಕರ್ತರನ್ನು ಬೌದ್ಧಿಕವಾಗಿ ಸಜ್ಜುಗೊಳಿಸಿ ಬಿಜೆಪಿಗೆ ಪ್ರತಿಸ್ಪರ್ಧೆ ನೀಡಲು ನಿರ್ಧರಿಸಿದೆ.

ಪ್ರತಿಸ್ಪರ್ಧಿ ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ರಾಷ್ಟ್ರೀಯತೆಯ ಬಗ್ಗೆ ತರಬೇತಿ
ಕಾಂಗ್ರೆಸ್​ ಬಾವುಟ
Follow us
S Chandramohan
| Updated By: preethi shettigar

Updated on: Oct 16, 2021 | 2:34 PM

ಬೆಂಗಳೂರು: ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷಕ್ಕೆ ರಾಷ್ಟ್ರೀಯತೆಯೇ ಚುನಾವಣೆಗಳಲ್ಲಿ ಪ್ರಮುಖ ಅಸ್ತ್ರ. ಈ ಅಸ್ತ್ರವನ್ನು ಬಳಸಿಯೇ ಅಧಿಕಾರಕ್ಕೇರುವ ಕಲೆ ಬಿಜೆಪಿಗೆ ಕರಗತವಾಗಿದೆ. ಈಗ ಇದನ್ನು ಕೌಂಟರ್ ಮಾಡಲು ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕರ್ತರಿಗೆ ತರಬೇತಿ ನೀಡಲು ನಿರ್ಧರಿಸಿದೆ. ಮುಂದಿನ ತಿಂಗಳು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಷ್ಟ್ರೀಯತೆಯ ಬಗ್ಗೆ ಹಾಗೂ ಬಿಜೆಪಿಯ ಅಸ್ತ್ರಗಳನ್ನು ಕೌಂಟರ್ ಮಾಡುವ ಬಗ್ಗೆ ತರಬೇತಿ ನೀಡಲಾಗುತ್ತದೆ.

ಕಾಂಗ್ರೆಸ್ ಶೀಘ್ರದಲ್ಲೇ ತನ್ನ ಕಾರ್ಯಕರ್ತರಿಗೆ “ರಾಷ್ಟ್ರೀಯತೆ” ಅಥವಾ ರಾಷ್ಟ್ರೀಯವಾದ ಎಂಬ ವಿಷಯದ ಬಗ್ಗೆ ತರಬೇತಿ ನೀಡಲಿದ್ದು, ಪ್ರತಿಸ್ಪರ್ಧಿ ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಕಾರ್ಯಕರ್ತರನ್ನು ಅಣಿಗೊಳಿಸಲಿದೆ. ಬಿಜೆಪಿ ಪಕ್ಷವು ಮತದಾರರನ್ನು ಧ್ರುವೀಕರಣಗೊಳಿಸಲು ರಾಷ್ಟ್ರೀಯತೆಯ ವಿಷಯವನ್ನು ತನ್ನ ಪ್ರಬಲ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಇದನ್ನು ಕೌಂಟರ್ ಮಾಡಲು ಈಗ ಕಾಂಗ್ರೆಸ್ ಕೂಡ ರಾಷ್ಟ್ರೀಯವಾದವನ್ನೇ ತನ್ನ ಅಸ್ತ್ರವನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡಲಿದೆ.

ಮೋದಿ ಆಡಳಿತದ ಸುಮಾರು ಏಳು ವರ್ಷಗಳ ನಂತರ, “ಜಾತ್ಯತೀತ” ಪಕ್ಷಗಳಿಗೆ ಒಂದು ಟ್ರಿಕಿ ಸವಾಲನ್ನು ಒಡ್ಡಲು ಬಿಜೆಪಿ “ರಾಷ್ಟ್ರೀಯತೆ” ಮತ್ತು “ಹಿಂದುತ್ವ” ಎಂಬ ಅಸ್ತ್ರಗಳನ್ನು ಯಶಸ್ವಿಯಾಗಿ ಬಳಸಿದ ನಂತರ, ಕಾಂಗ್ರೆಸ್ ತನ್ನ ಕಾರ್ಯಕರ್ತರನ್ನು ಬೌದ್ಧಿಕವಾಗಿ ಸಜ್ಜುಗೊಳಿಸಿ ಬಿಜೆಪಿಗೆ ಪ್ರತಿಸ್ಪರ್ಧೆ ನೀಡಲು ನಿರ್ಧರಿಸಿದೆ. ದೇಶಭಕ್ತಿ, ರಾಷ್ಟ್ರಪ್ರೇಮದ ಬಗ್ಗೆ ಸೈದ್ಧಾಂತಿಕವಾಗಿ ಕಾರ್ಯಕರ್ತರಿಗೆ ತರಬೇತಿ ನೀಡಿ ಕೌಂಟರ್ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.

ಪಕ್ಷದ ಕಾರ್ಯಕರ್ತರಿಗೆ “ನಿಜವಾದ ರಾಷ್ಟ್ರೀಯತೆ” ಮತ್ತು “ಭಾರತದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟ” ಮತ್ತು “ಕಾಂಗ್ರೆಸ್ ಸಿದ್ಧಾಂತ” ಗಳ ಬಗ್ಗೆ ತರಬೇತಿ ನೀಡಲಾಗುತ್ತದೆ. ಸ್ಪಷ್ಟವಾಗಿ, ಆರ್‌ಎಸ್‌ಎಸ್ ನೇತೃತ್ವದ ಆಡಳಿತ ವರ್ಗದ ಪ್ರಬಲ ನಿರೂಪಣೆಯನ್ನು, ಬಿಜೆಪಿ ಅಸ್ತ್ರಗಳನ್ನು ಎದುರಿಸಲು ಕಾಂಗ್ರೆಸ್ ಕಾರ್ಯಕರ್ತರನ್ನು, ತಮ್ಮನ್ನು ತಾವು ಸಜ್ಜುಗೊಳಿಸಬೇಕು ಎಂಬುವುದು ಕಾಂಗ್ರೆಸ್ ಯೋಜನೆಯಾಗಿದೆ.

ಬಿಜೆಪಿ ಪ್ರತಿಪಾದಿಸುವ ದೇಶಭಕ್ತಿಯು ಕಾಂಗ್ರೆಸ್ ಮತ್ತು ಇತರರು ನಂಬಿದ್ದಕ್ಕಿಂತ ಭಿನ್ನವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ತಿಳಿಹೇಳಲಾಗುತ್ತದೆ. ಕಾಂಗ್ರೆಸ್ ಪಕ್ಷವು ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ಪ್ರತಿಪಾದಿಸುತ್ತಿದ್ದು, ದೇಶಭಕ್ತಿಯನ್ನು ಜನರ ಧಾರ್ಮಿಕ ನಂಬಿಕೆಗಳ ಮೇಲೆ ನಿರ್ಧರಿಸಲಾಗಲ್ಲ ಎಂದು ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡಲಿದೆ.

ಕಾಂಗ್ರೆಸ್ ಪಕ್ಷವು ಬಿಜೆಪಿಯು ಬಹುಸಂಖ್ಯಾತ ರಾಜಕೀಯವನ್ನು ಮಾಡುತ್ತಿದೆ. ರಾಷ್ಟ್ರೀಯತೆಯನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸುವ ಮೂಲಕ ಹಲವು ವರ್ಷಗಳಿಂದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈಗ ಈ ವಿಷಯದ ಬಗ್ಗೆ ಔಪಚಾರಿಕವಾಗಿ ತರಬೇತಿ ನೀಡಲು ನಿರ್ಧರಿಸಿದೆ. ಈ ನಿರ್ಧಾರವು ಪ್ರಸ್ತುತ ಪಕ್ಷದ ಕಾರ್ಯಕರ್ತರನ್ನು ಪಕ್ಷದ ಸಿದ್ಧಾಂತದಿಂದ ದೂರವಾಗಿಸಬಹುದು ಎಂಬ ಆತಂಕವು ಕಾಂಗ್ರೆಸ್ ಪಕ್ಷದಲ್ಲಿದೆ.

ಯೋಜನೆಯ ಪ್ರಕಾರ, ಕಾಂಗ್ರೆಸ್ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಿಂದ ಐದು ತರಬೇತುದಾರರಿಗೆ ತರಬೇತಿ ನೀಡುತ್ತದೆ. ನಂತರ ಅವರು ತಮ್ಮ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ವ್ಯಾಪ್ತಿಯಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಪಕ್ಷದ ಪರ ಒಲವು ಹೊಂದಿರುವವರಿಗೆ ಕಾರ್ಯಾಗಾರಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಮಹಾತ್ಮ ಗಾಂಧಿಯೊಂದಿಗೆ ಸಂಬಂಧ ಹೊಂದಿರುವ ಮಹಾರಾಷ್ಟ್ರದ ವಾರ್ಧಾದ ಸೇವಾಗ್ರಾಮದಲ್ಲಿ ತರಬೇತುದಾರರಿಗಾಗಿ ಕಾಂಗ್ರೆಸ್ ಈ ತರಬೇತಿ ಕಾರ್ಯಾಗಾರ ನಡೆಸಲು ಹೊರಟಿದೆ.

ನವೆಂಬರ್ ವೇಳೆಗೆ ತರಬೇತಿಯನ್ನು ಪೂರ್ಣಗೊಳಿಸಲಾಗುವುದು. ನಂತರ ತರಬೇತುದಾರರನ್ನು ತಮ್ಮ ರಾಜ್ಯಗಳಿಗೆ ಯೋಜನೆಯನ್ನು ಜಾರಿಗೊಳಿಸಲು ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಅನುಭವಿ ಪಕ್ಷದ ಕಾರ್ಯಕರ್ತರಿಗೆ ಎಐಸಿಸಿ “ತರಬೇತುದಾರರು” ಎಂದು ನಾಮನಿರ್ದೇಶನ ಮಾಡಲು ಹೆಸರುಗಳನ್ನು ಕಳುಹಿಸಲು ಎಲ್ಲಾ ರಾಜ್ಯಗಳ ಘಟಕಗಳಿಗೆ ಸೂಚಿಸಲಾಗಿದೆ.

ರಾಷ್ಟ್ರೀಯತೆಯ ಕುರಿತು ಸೈದ್ಧಾಂತಿಕ ತರಬೇತಿಯ ಕಲ್ಪನೆಯು ಕೆಲವು ಸಮಯದಿಂದ ಕಾಂಗ್ರೆಸ್ ಪಕ್ಷದಲ್ಲಿ ಇದ್ದರೂ, ಇದು ಸಾವರ್ಕರ್ ಬಗ್ಗೆ ವಿವಾದ ಉಂಟಾದ ಬಳಿಕ ರಾಷ್ಟ್ರೀಯತೆಯ ಕುರಿತು ಮತ್ತೊಮ್ಮೆ ಚರ್ಚೆಗೆ ಬಂದಿದೆ. ಬಿಜೆಪಿ ನಾಯಕ ಹಾಗೂ ಕೇಂದ್ರದ ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್, ಇತ್ತೀಚೆಗೆ ಸಾವರ್ಕರ್, ಮಹಾತ್ಮಾ ಗಾಂಧಿಯವರ ಸಲಹೆ ಮೇರೆಗೆ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದರು ಎಂದು ಹೇಳಿದ್ದರು. ಇದಕ್ಕೆ ಇತಿಹಾಸ ತಜ್ಞರು ಹಾಗೂ ಕಾಂಗ್ರೆಸ್ ಮತ್ತು ಎಡಪಕ್ಷಗಳಿಂದ ಪ್ರಬಲ ಆಕ್ಷೇಪ ವ್ಯಕ್ತವಾಗಿತ್ತು. ಕುತೂಹಲಕಾರಿ ಅಂದರೆ ಕಾಂಗ್ರೆಸ್ ಮಿತ್ರ ಪಕ್ಷಗಳು ಈ ವಿಷಯದಲ್ಲಿ ಮೌನವಾಗಿರಲು ನಿರ್ಧರಿಸಿದ್ದವು.

ಇದನ್ನೂ ಓದಿ: ಕಾಂಗ್ರೆಸ್‌ನ ‘ರಾಜಕೀಯ ನರಮೇಧ’ಕ್ಕೆ ಕಾರಣ ಯಾರು? ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್

ಕಾಂಗ್ರೆಸ್​ ಪಕ್ಷದಿಂದ 6 ವರ್ಷಗಳ ಕಾಲ ಸಲೀಂ ಉಚ್ಚಾಟನೆ; ಶಿಸ್ತು ಸಮಿತಿಯಿಂದ ಕ್ರಮ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ