ರಾಜ್ಯ ಪೊಲೀಸ್ ಇಲಾಖೆಯಲ್ಲಿನ 108 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ; ರಾಜ್ಯ ಸರ್ಕಾರದಿಂದ ಆದೇಶ
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೋಮವಾರ ಬಹುದೊಡ್ಡ ಬದಲಾವಣೆ ಮಾಡಿದೆ. ಬರೊಬ್ಬರಿ 108 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೋಮವಾರ ಬರೊಬ್ಬರಿ 108 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದಿಂದ ಮಹತ್ತರವಾದ ಆದೇಶ ಹೊರಡಿಸವ ಮೂಲಕ ದೊಡ್ಡ ಶಾಕ್ ನೀಡಿದೆ. ಇನ್ನು ಬೆಂಗಳೂರು ನಗರ ಒಂದರಲ್ಲಿಯೇ 19 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದ್ದು ಪೊಲೀಸ್ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ಮಾಡಿದೆ.
ಬೆಂಗಳೂರು ಟ್ರಾಫಿಕ್ ತಲೆಬಿಸಿ ಕಡಿಮೆ ಮಾಡಲು ಸೃಷ್ಟಿಸಿರುವ ವಿಶೇಷ ಕಮಿಷನರ್ ಹುದ್ದೆಗೆ ಎಂಎ ಸಲೀಂ ನೇಮಕ: 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಟ್ರಾಫಿಕ್ ಸಮಸ್ಯೆ ಮೇರೆಮೀರುತ್ತಿದೆ. ಬೆಂಗಳೂರಿನಲ್ಲಿ ವಾಸಿಸುತ್ತಿರುವ ಜನಸಂಖ್ಯೆಗಿಂತಲೂ ವಾಹನಗಳ ಸಂಖ್ಯೆ ಹೆಚ್ಚಾಗಿರುವ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಬಾರಿ ಆತಂಕ ವ್ಯಕ್ತಪಡಿಸಿದ್ದರು. ನಗರದ ಹಲವೆಡೆ ಮೆಟ್ರೋ ಕಾಮಗಾರಿಯೂ ನಡೆಯುತ್ತಿರುವುದರಿಂದ ಟ್ರಾಫಿಕ್ ಕುಂಟುತ್ತಿದೆ. ಜಾಗತಿಕ ಮಟ್ಟದಲ್ಲಿ ಬೆಂಗಳೂರು ಟ್ರಾಫಿಕ್ ಹಾಸ್ಯದ ವಸ್ತುವಾದ ಹಿನ್ನೆಲೆಯಲ್ಲಿ ‘ಬ್ರ್ಯಾಂಡ್ ಬೆಂಗಳೂರು’ ಗೌರವಕ್ಕೆ ಧಕ್ಕೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆಗಾಗಿ ನಗರ ಪೊಲೀಸ್ ವಿಭಾಗದಲ್ಲಿ ‘ವಿಶೇಷ ಕಮಿಷನರ್’ ಹುದ್ದೆ ಸೃಷ್ಟಿಸಿ ವಾಹನಗಳ ಸುಗಮ ಸಂಚಾರ ಹಾಗೂ ಸಂಚಾರ ನಿಯಮಗಳ ಜಾರಿ ಹೊಣೆ ಹೊರಿಸಲು ನಿರ್ಧರಿಸಿತ್ತು. ಈ ಹುದ್ದೆಗೆ ಮೊದಲ ಅಧಿಕಾರಿಯಾಗಿ ಎಡಿಜಿಪಿ ಎಂ.ಎ.ಸಲೀಂ ಅವರನ್ನು ನೇಮಿಸಲಾಗಿದೆ. ಈ ಆದೇಶವು ಸೋಮವಾರ (ನ 14) ಹೊರಬಿದ್ದಿದೆ.
ಇಷ್ಟು ದಿನ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅಧೀನದಲ್ಲಿ ಡಿಐಜಿ ದರ್ಜೆಯ ಐಪಿಎಸ್ ಅಧಿಕಾರಿ ಟ್ರಾಫಿಕ್ ವಿಭಾಗದ ಹೊಣೆ ಹೊತ್ತುಕೊಂಡಿದ್ದರು. ಈವರೆಗೆ ಈ ಹುದ್ದೆ ನಿರ್ವಹಿಸುತ್ತಿದ್ದ ಜಂಟಿ ಪೊಲೀಸ್ ಕಮಿಷನರ್ ಬಿ.ಆರ್.ರವಿಕಾಂತೇಗೌಡ ಅವರನ್ನು ಇದೀಗ ಸಿಐಡಿಯ ಡಿಐಜಿ ಆಗಿ ವರ್ಗಾಯಿಸಲಾಗಿದೆ.
ಟ್ರಾಫಿಕ್ ವಿಭಾಗದ ವಿಶೇಷ ಕಮಿಷನರ್ ಆಗಿರುವ ಎಂ.ಎ.ಸಲೀಂ ಅವರು ಈ ಹಿಂದೆ ಸಂಚಾರ ವಿಭಾಗದ ಜಂಟಿ ಕಮಿಷನರ್ ಆಗಿ ಕೆಲಸ ಮಾಡಿದ್ದ ಸಂದರ್ಭದಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದ್ದರು. ಅವರ ಸಾಧನೆ ಮತ್ತು ಪರಿಣಾಮಕಾರಿ ಕಾರ್ಯವೈಖರಿಯನ್ನು ಗಮನಿಸಿರುವ ರಾಜ್ಯ ಸರ್ಕಾರವು ನಗರದ ಟ್ರಾಫಿಕ್ ಸವಾಲು ನಿರ್ವಹಣೆಗೆ ಅವರೇ ಸೂಕ್ತ ವ್ಯಕ್ತಿ ಎಂದು ಮನಗಂಡು, ವಿಶೇಷ ಕಮಿಷನರ್ ಆಗಿ ವರ್ಗಾವಣೆ ಮಾಡಿದೆ ಎಂದು ಪೊಲೀಸ್ ಇಲಾಖೆಯ ಉನ್ನತ ಮೂಲಗಳು ಹೇಳಿವೆ.
ಈವರೆಗೆ ಸಂಚಾರ ವಿಭಾಗದ ಜಂಟಿ ಕಮಿನಷರ್ ಆಗಿ ಕಾರ್ಯನಿರ್ವಹಿಸಿದ್ದ ಡಾ ವಿ.ಆರ್.ರವಿಕಾಂತೇಗೌಡ ಅವರು ಸಹ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದ್ದರು. ಪೊಲೀಸರು ರಸ್ತೆಗಳಲ್ಲಿ ವಾಹನ ಅಡ್ಡಕಟ್ಟಿ ದಾಖಲೆ ತಪಾಸಣೆಗೆ ಮುಂದಾಗುವುದು ಸಹ ಟ್ರಾಫಿಕ್ ಜಾಮ್ಗೆ ಕಾರಣ ಎಂಬುದನ್ನು ಅರಿತು, ರಸ್ತೆಗಳಲ್ಲಿ ಅನಗತ್ಯವಾಗಿ ವಾಹನಗಳನ್ನು ಅಡ್ಡಗಟ್ಟಬಾರದು ಎಂದು ಸೂಚನೆ ನೀಡಿದ್ದರು.
11 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕ ಪೊಲೀಸ್ ಇಲಾಖೆಯ 11 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಸೋಮವಾರ ಆದೇಶ ಹೊರಡಿಸಿದೆ. ಎಂ.ಅಬ್ದುಲ್ ಸಲೀಂ (ವಿಶೇಷ ಕಮಿಷನರ್, ಸಂಚಾರ ವಿಭಾಗ, ಬೆಂಗಳೂರು ನಗರ), ಉಮೇಶ್ ಕುಮಾರ್ (ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆಡಳಿತ ವಿಭಾಗ), ದೇವಜ್ಯೋತಿ ರೇ (ಐಜಿಪಿ, ಕುಂದುಕೊರತೆ ಮತ್ತು ಮಾನವ ಹಕ್ಕುಗಳ ವಿಭಾಗ), ರಮಣ ಗುಪ್ತ (ಜಂಟಿ ಪೊಲೀಸ್ ಕಮಿಷನರ್, ಗುಪ್ತಚರ ವಿಭಾಗ, ಬೆಂಗಳೂರು ನಗರ), ಬಿ.ಆರ್. ರವಿಕಾಂತೇಗೌಡ (ಡಿಐಜಿ, ಸಿಐಡಿ).
ರಾಜ್ಯದ ಮತ್ತಷ್ಟು ಸುದ್ದಿಗಳಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:16 pm, Mon, 28 November 22