ಬೆಂಗಳೂರಿನಲ್ಲಿನ ರಕ್ಷಣಾ ಇಲಾಖೆಯ ಜಮೀನನ್ನು ಬಿಬಿಎಂಪಿಗೆ ವರ್ಗಾಯಿಸುವಂತೆ ಸಂಸತ್ತಿನಲ್ಲಿ ಪಿ ಸಿ ಮೋಹನ್​ ಮನವಿ

ಬೆಂಗಳೂರಿನಲ್ಲಿ ರಕ್ಷಣಾ ಇಲಾಖೆಯ ಮಾಲಿಕತ್ವದ ಜಮೀನನ್ನು ಬಿಬಿಎಂಪಿಗೆ ವರ್ಗಾಯಿಸುವಂತೆ ಕೇಂದ್ರ ಸಂಸದ ಪಿ ಸಿ ಮೋಹನ್​ ಸಂಸತ್​ನಲ್ಲಿ ಕೇಂದ್ರ ಸಚಿವ ರಾಜನಾಥ್​ ಸಿಂಗ್​ಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿನ ರಕ್ಷಣಾ ಇಲಾಖೆಯ ಜಮೀನನ್ನು ಬಿಬಿಎಂಪಿಗೆ ವರ್ಗಾಯಿಸುವಂತೆ ಸಂಸತ್ತಿನಲ್ಲಿ ಪಿ ಸಿ ಮೋಹನ್​ ಮನವಿ
ಕೇಂದ್ರ ಸಚಿವ ಪಿಸಿ ಮೋಹನ್​
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 19, 2022 | 9:54 PM

ನವದೆಹಲಿ: ಬೆಂಗಳೂರಿನಲ್ಲಿನ (Bengaluru) ರಕ್ಷಣಾ ಇಲಾಖೆಯ ಮಾಲಿಕತ್ವದಲ್ಲಿರುವ ಜಮೀನನ್ನು ಬಿಬಿಎಂಪಿಗೆ (BBMP) ವರ್ಗಾಯಿಸುವಂತೆ ಕೇಂದ್ರ ಸಂಸದ ಪಿ.ಸಿ.ಮೋಹನ್ (PC Mohan), ​ರಕ್ಷಣಾ ಸಚಿವ ರಾಜನಾಥ್​ ಸಿಂಗ್​ (Rajnath Singh) ಅವರಿಗೆ ಮನವಿ ಮಾಡಿದ್ದಾರೆ. ರಾಜ್ಯ ರಾಜಧಾನಿ ಪ್ರತಿದಿನ ತನ್ನ ವಿಸ್ತೀರಣವನ್ನು ಹೆಚ್ಚಿಸಿಕೊಳ್ಳುತ್ತಿದೆ. ದೇಶದ ವಿವಿಧ ನಗರಗಳಿಂದ ಜನರು ಬಂದು ಇಲ್ಲಿ ವಾಸಿಸುತ್ತಿದ್ದಾರೆ. ಇದರಿಂದ ಜನಸಂಖ್ಯೆ ಜಾಸ್ತಿಯಾಗುತ್ತಿದೆ. ಆದರೆ ಇದಕ್ಕೆ ತಕ್ಕ ಹಾಗೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಮತ್ತು ಬಿಬಿಎಂಪಿ ಹೆಣಗಾಡುತ್ತಿದೆ. ಇದಕ್ಕೆ ಕಾರಣ ಸಮರ್ಪಕವಾದ ಭೂಮಿ ಇಲ್ಲ ಎಂದು ಅಸಮಾಧಾನ ಹೊರ ಹಾಕಿದರು.

ಸಂಸತ್​ ಅಧಿವೇಶನದ 13ನೇ ದಿನವಾದ ಇಂದು (ಡಿ.19) ಲೋಕಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು ರಕ್ಷಣಾ ಇಲಾಖೆಯ ಮಾಲಿಕತ್ವದಲ್ಲಿರುವ ಜಮೀನನ್ನು ಬಿಬಿಎಂಪಿಗೆ ವರ್ಗಾಯಿಸಿ. ಇದರಿಂದ ಮೂಲಸೌಕರ್ಯ ಕಾಮಗಾರಿಗಳನ್ನು ಪ್ರಾರಂಭಿಸಲು ಸಹಾಯವಾಗುತ್ತದೆ ಎಂದು ಮನವಿ ಮಾಡಿದ್ದಾರೆ.

ಇದನ್ನೂಓದಿ: ಸಿದ್ದರಾಮಯ್ಯನವರೇ, ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ? ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ

ಇನ್ನೂ ಸ್ಥಳೀಯ ರಕ್ಷಣಾ ಅಧಿಕಾರಿಗಳು ಬೆಂಗಳೂರು ಕೇಂದ್ರ ಸಂಸದರಿಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅನುಮತಿ ನೀಡುತ್ತಿಲ್ಲ. ಈ ಹಿಂದೆ 2018 ರಲ್ಲಿ ಅಂದಿನ ರಕ್ಷಣಾ ಸಚಿವರು ಬೆಂಗಳೂರಿನ 10 ಜಾಗಗಳನ್ನು ಕರ್ನಾಟಕ ಸರ್ಕಾರಕ್ಕೆ ಹಸ್ತಾಂತರಿಸಲು ಒಪ್ಪಿಕೊಂಡಿದ್ದರು. ಆದರೆ ಆ ಬಳಿಕ ಮೂರು ಕಡೆಗಳಲ್ಲಷ್ಟೇ ಜಾಗ ಹಸ್ತಾಂತರ ಆಗಿದೆ. ಇದರಿಂದ ಈ ಮೂರು ಸ್ಥಳಗಳನ್ನು ಹೊರತುಪಡಿಸಿ, ಉಳಿದ ಸ್ಥಳಗಳಲ್ಲಿ ಮೂಲಸೌಕರ್ಯ ಕಾಮಗಾರಿಗಳನ್ನು ಪ್ರಾರಂಭಿಸಲು ರಕ್ಷಣಾ ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ ಎಂದು ಹೇಳಿದರು.

ಇದನ್ನೂಓದಿ: ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚೈ

ಕಾಮಗಾರಿಯನ್ನು ತಡೆಹಿಡಿಯುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದರಿಂದ ಭಾರೀ ಟ್ರಾಫಿಕ್‌ನಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ಜಮೀನು ಹಸ್ತಾಂತರವನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:53 pm, Mon, 19 December 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ