AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆಗೆ ಬ್ರೇಕ್; ವಿಶೇಷ ತಂಡ ಕಾರ್ಯಾಚರಣೆ

ಇತ್ತೀಚಿಗೆ ಪ್ರೈವೇಟ್ ವೆಹಿಕಲ್​ಗಳ ಮೇಲೆ ಮನಸ್ಸೋ ಇಚ್ಚೆ ಸಿಕ್ಕ ಸಿಕ್ಕ ಸ್ಟೀಕರ್ ಅಂಟಿಸೋ ಹಾವಳಿ ಹೆಚ್ಚಾಗಿದೆ. ಅದ್ರಲ್ಲೂ ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರಿ ಲಾಂಛನ ಚಿಹ್ನೆಗಳನ್ನು ಅಳವಡಿಸಿಕೊಂಡು ತಾವು ವಿಐಪಿಗಳೆಂಬಂತೆ ಕೆಲವೊಬ್ಬರು ವರ್ತಿಸುತ್ತಿದ್ದಾರೆ. ಹೀಗೆ ಮೆರೆಯುತ್ತಿದ್ದವರ ಮೇಲೆ ಸಾರಿಗೆ ಇಲಾಖೆ ಚಾಟಿ ಬೀಸಲು ಮುಂದಾಗಿದೆ.

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆಗೆ ಬ್ರೇಕ್; ವಿಶೇಷ ತಂಡ ಕಾರ್ಯಾಚರಣೆ
ಸಾಂದರ್ಭಿಕ ಚಿತ್ರ
Kiran Surya
| Updated By: ಆಯೇಷಾ ಬಾನು|

Updated on: May 25, 2024 | 7:31 AM

Share

ಬೆಂಗಳೂರು, ಮೇ.25: ರಾಜ್ಯದಲ್ಲಿ ಕೇಂದ್ರ ಹಾಗೂ ಸರ್ಕಾರದ ವಾಹನಗಳಿಗೆ (Government Vehicles) ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಹಾಗೂ ಚಿಹ್ನೆ ಬಳಸಲು ಅವಕಾಶವಿದೆ. ಆದರೆ ಬೆಂಗಳೂರಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದೆ. ಈಗಾಗಲೇ ಸಾರಿಗೆ ಇಲಾಖೆಯಲ್ಲಿ (Transport Department) ಈ ಬಗ್ಗೆ ನೂರಾರು ಪ್ರಕರಣಗಳು ದಾಖಲಾಗಿವೆ. ಇಂತಹ ನೋಂದಣಿ ಫಲಕಗಳನ್ನು ತೆರವುಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಿ, ಜೂನ್ ಒಂದರಿಂದ ಕಾರ್ಯಾಚರಣೆಗೊಳಿಸಲು ಪ್ಲಾನ್ ಮಾಡಿದೆ. ಮೊದಲಿಗೆ 500, ಎರಡನೇ ಬಾರಿ ಒಂದು ಸಾವಿರ ರೂಪಾಯಿ ಅದಾದ ನಂತರ ವಾಹನವನ್ನು ಸೀಜ್ ಮಾಡಲಾಗುತ್ತದೆ.

ಸಾರಿಗೆ ಇಲಾಖೆಯ ನಿಯಮದಂತೆ, ಕೇವಲ ಸರ್ಕಾರಿ ವಾಹನಗಳಿಗೆ ಅಂದರೇ ಜಿ ಸಿರೀಸ್ ಇರೋ ನಂಬರ್ ಪ್ಲೇಟ್ ಇರೋ ವಾಹನಗಳಲ್ಲಿ ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಇರಬೇಕು. ಅದನ್ನು ಹೊರತು ಪಡಿಸಿ, ಸರ್ಕಾರದ ಅಧೀನದಲ್ಲಿ ಬರೋ ಸರ್ಕಾರಿ ನಿಗಮ, ಮಂಡಳಿ, ಸಂಸ್ಥೆ, ಲೋಕಲ್ ಬಾಡಿ, ಮುನ್ಸಿಪಲ್ ವಾಹನಗಳಲ್ಲಿಯೂ ಸರ್ಕಾರದ ಲಾಂಛನ ಬಳಕೆಗೆ ಅವಕಾಶವಿಲ್ಲ‌. ಉದಾಹರಣೆಗೆ ಕೆಎಸ್​ಆರ್​ಟಿಸಿ ನಿಗಮವಾದ್ರೂ ಅಧಿಕಾರಿಗಳು ಸರ್ಕಾರದ ಚಿಹ್ನೆ, ಹೆಸರು ಬಳಸುವಂತಿಲ್ಲ. ಅನಧಿಕೃತವಾದ ಲಾಂಛನ ಅಥವಾ ಚಿಹ್ನೆ ಹೊಂದಿರುವ ವಾಹನಗಳ ವಿರುದ್ಧ ಮೋಟಾರು ವಾಹನಗಳ ಕಾಯ್ದೆಯಡಿ ಕ್ರಮ ಕೈಗೊಂಡು, ಕೇಸ್ ದಾಖಲಿಸಲಿಸುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೀಡಿದೆ.

ಇದನ್ನೂ ಓದಿ: ಕಾವೇರಿ ನದಿಗೆ ಸೇರ್ತಿದೆ ಮೈಸೂರಿನ ಕೊಳಚೆ ನೀರು; ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಜೀವನದಿ ಕಲುಷಿತ

ಕೂಡಲೇ ಇಂತಹ ನಾಮಫಲಗಳನ್ನು ತೆರವುಗೊಳಿಸಬೇಕೆಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಖಾಸಗಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ಖಾಸಗಿ ವಾಹನಗಳ ಮೇಲೆ ಸರ್ಕಾರದ ಯಾವುದೇ ಲಾಂಛನವನ್ನು ಬಳಸುವಂತಿಲ್ಲ ಸರ್ಕಾರಿ ಇಲಾಖೆ ಮತ್ತು ಬ್ಯಾಂಕ್ ಉದ್ಯೋಗಿಗಳು ತಮ್ಮ ಸ್ವಂತ ವಾಹನಗಳ ಮೇಲೆ ಕರ್ನಾಟಕ ಸರ್ಕಾರ, ಭಾರತ ಸರ್ಕಾರ ಎಂದು ಹಾಕಿಕೊಂಡಿರುತ್ತಾರೆ ಅದನ್ನು ಮೊದಲು ತೆರವು ಮಾಡಬೇಕು ಎಂದ್ರು.

ಒಟ್ನಲ್ಲಿ ಇಷ್ಟು ದಿನಗಳ ಕಾಲ ತಮ್ಮ ಸ್ವಂತ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ ಬೋರ್ಡ್ ಹಾಕ್ಕೊಂಡು ಬಿಲ್ಡಪ್ ಕೊಡ್ತಿದ್ದವ್ರಿಗೆ ಸಾರಿಗೆ ಇಲಾಖೆ ಸರಿಯಾಗಿ ಬಿಸಿ ಮುಟ್ಟಿಸಲು ಪ್ಲಾನ್ ಮಾಡ್ತಿದ್ದು ಈ ಕಾರ್ಯಾಚರಣೆ ಎಷ್ಟರಮಟ್ಟಿಗೆ ಯಶಸ್ವಿಯಾಗುತ್ತೆ ಎಂದು ಕಾದು ನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?