AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​​ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ; ಸಚಿವ ರಾಮಲಿಂಗಾ ರೆಡ್ಡಿ

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಕರ್ನಾಟಕ ಸರ್ಕಾರ ಹೊಸ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದ ಒಂದು ದಿನದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

ಡಿಸೆಂಬರ್​​ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ; ಸಚಿವ ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ
Follow us
Ganapathi Sharma
|

Updated on: Jun 24, 2023 | 3:01 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (BBMP) ಡಿಸೆಂಬರ್‌ನಲ್ಲಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಶನಿವಾರ ಹೇಳಿದ್ದಾರೆ. ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಕರ್ನಾಟಕ ಸರ್ಕಾರ ಹೊಸ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದ ಒಂದು ದಿನದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

ಸರ್ಕಾರದ ಕೋರಿಕೆಯ ಮೇರೆಗೆ ವಾರ್ಡ್ ವಿಂಗಡಣೆಯನ್ನು ಮರುಪರಿಶೀಲಿಸಲು 12 ವಾರಗಳ ಕಾಲಾವಕಾಶವನ್ನು ಜೂನ್ 19 ರಂದು ಹೈಕೋರ್ಟ್ ನೀಡಿತ್ತು. ಈಗಿನ ಮರುವಿಂಗಡಣೆಯಲ್ಲಿ ಲೋಪದೋಷಗಳಿವೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.

ಹೈಕೋರ್ಟ್ ಆದೇಶದ ನಂತರ ಸರ್ಕಾರ ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಆಯೋಗ ರಚಿಸಿ ಆದೇಶ ಹೊರಡಿಸಿದೆ. ಸಮಿತಿಯ ಸದಸ್ಯರು ಬಿಡಿಎ ಆಯುಕ್ತರು, ಬೆಂಗಳೂರು ಉಪ ಆಯುಕ್ತರು ಮತ್ತು ಬಿಬಿಎಂಪಿ ವಿಶೇಷ ಆಯುಕ್ತರು (ಕಂದಾಯ) ಆಗಿದ್ದಾರೆ.

ಸರ್ಕಾರದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವರು, ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಚುನಾವಣೆ ನಡೆಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದೆವು. ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ಬಿಜೆಪಿ ಸರ್ಕಾರ ಅವರ ಇಚ್ಛೆಯಂತೆ ವಾರ್ಡ್‌ ವಿಂಗಡಣೆ ಮಾಡಿತ್ತು. ಈಗ ನಾವು ಸಮಿತಿ ರಚಿಸಿದ್ದೇವೆ ಮತ್ತು ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುತ್ತಾರೆ. ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ರೆಡ್ಡಿ ಹೇಳಿದ್ದಾರೆ. ಹೊಸ ಬಿಬಿಎಂಪಿ ಕಾಯ್ದೆ ಪ್ರಕಾರ 243 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: BBMP Wards: ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆಗೆ ಆಯೋಗ ರಚಿಸಿದ ಸರ್ಕಾರ

ಈ ಮಧ್ಯೆ, ನಾವು ಚುನಾವಣೆ ನಡೆಸುತ್ತೇವೆ ಮತ್ತು ಅದರಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನ್ಯಾಯಾಲಯದ ಆದೇಶವನ್ನು ಪಾಲಿಸುತ್ತೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ನಡೆಸುತ್ತೇವೆ. ಈ ಹಂತದಲ್ಲಿ ಎಷ್ಟು ವಾರ್ಡ್‌ಗಳು ಚುನಾವಣೆ ವೇಳೆಗೆ ಇರಲಿವೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ