ದುಬಾರಿ ಬೆಲೆಗೆ ಟಿಕೆಟ್ ಮಾರಾಟ ದಂಧೆ ವಿಚಾರ: ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಖಡಕ್​ ವಾರ್ನಿಂಗ್

ಖಾಸಗಿ ಬಸ್​ಗಳಿಂದ ದುಬಾರಿ ಬೆಲೆಗೆ ಟಿಕೆಟ್ ಮಾರಾಟ ದಂಧೆ ವಿಚಾರವಾಗಿ ಸಚಿವ ಶ್ರೀರಾಮುಲು ಸರಣಿ ಟ್ವೀಟ್ ಮೂಲಕ ಖಡಕ್ ಎಚ್ಚರಿಕೆ ನೀಡಿದ್ದಾರೆ.

ದುಬಾರಿ ಬೆಲೆಗೆ ಟಿಕೆಟ್ ಮಾರಾಟ ದಂಧೆ ವಿಚಾರ: ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಖಡಕ್​ ವಾರ್ನಿಂಗ್
ಸಾರಿಗೆ ಸಚಿವ ಶ್ರೀರಾಮುಲು
TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Sep 30, 2022 | 11:24 AM

ಬೆಂಗಳೂರು: ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕು. ಇಲ್ಲದಿದ್ದರೆ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ. ಯಾವುದೇ ಕಾರಣಕ್ಕೂ ರಾಜೀ ಇಲ್ಲ ಎಂದು ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಸಚಿವ ಶ್ರೀರಾಮುಲು ವಾರ್ನಿಂಗ್ ನೀಡಿದ್ದಾರೆ. ಖಾಸಗಿ ಬಸ್​ಗಳಿಂದ ದುಬಾರಿ ಬೆಲೆಗೆ ಟಿಕೆಟ್ ಮಾರಾಟ ದಂಧೆ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬಂದ ಹಿನ್ನಲೆಯಲ್ಲಿ ದರ ಹೆಚ್ಚು ಮಾಡುವ ಖಾಸಗಿ ಬಸ್‌ಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಅಧಿಕಾರಿಗಳ ಹತ್ತು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ.

ರಾಜ್ಯಾದ್ಯಂತ ಈ ತಂಡ ತಪಾಸಣೆ ಕಾರ್ಯಚರಣೆ ನಡೆಸಲಿದೆ. ಒಂದು ವೇಳೆ ಹೆಚ್ಚು ಟಿಕೆಟ್‌ ದರ ಕೇಳಿದರೆ ಪ್ರಯಾಣಿಕರು ಸಹಾಯವಾಣಿಗೆ ಕರೆ ಮಾಡಿ ಬಸ್‌ ನಂಬರ್‌, ಮಾರ್ಗ ತಿಳಿಸಿ ದೂರು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು‌. ಇದಕ್ಕಾಗಿ ಸಾರಿಗೆ ಇಲಾಖೆಯು ಸಹಾಯವಾಣಿಯನ್ನು ಆರಂಭಿಸಿದ್ದು 94498 63429 / 94498 63426 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಪರ್ಮಿಟ್ ಹಾಗೂ ಟ್ಯಾಕ್ಸ್ ಇಲ್ಲದೇ ಓಡಾಡುತ್ತಿರುವ ಬಸ್​ಗಳ ಮೇಲೆ ಆರ್​ಟಿಓ ದಾಳಿ

ತುಮಕೂರು: ದಸರಾ ಹಬ್ಬ ಹಿನ್ನೆಲೆಯಲ್ಲಿ ಖಾಸಗಿ ಬಸ್ ಮೇಲೆ ಆರ್​ಟಿಓ ಅಧಿಕಾರಿಗಳ ದಾಳಿ ಮಾಡಿದ್ದು, ಬೆಂಗಳೂರು ಹಾಗೂ ಹೊಸದುರ್ಗಕ್ಕೆ ಓಡಾಡುತ್ತಿದ್ದ Ka41 c8898 ಹಾಗೂ ka41 c 8903 ನಂಬರ್​ನ ಎರಡು‌ ಖಾಸಗಿ ಬಸ್ ವಶಕ್ಕೆ ಪಡೆದಿದ್ದಾರೆ. ತುಮಕೂರು ಆರ್​ಟಿಓ ಇನ್ಸಪೇಕ್ಟರ್ ಷರೀಪ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ದಸರಾ ಹಬ್ಬಕ್ಕೆ ಹೆಚ್ಚಿನ ಶುಲ್ಕ ಪಡೆಯುತ್ತಾರೆಂಬ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಪರ್ಮಿಟ್ ಹಾಗೂ ಟ್ಯಾಕ್ಸ್ ಇಲ್ಲದೇ ಓಡಾಡುತ್ತಿರುವ ಬಸ್​ಗಳ ಮೇಲೂ ದಾಳಿ ಮಾಡಿದ್ದಾರೆ. ಕೇವಲ ಬೆಂಗಳೂರಿನಲ್ಲಿ ಓಡಿಸಲು ಪರ್ಮಿಟ್ ಇರುವ ಬಸ್​ಗಳು, ಆದರೆ ಬೆಂಗಳೂರಿನಿಂದ ಹೊಸದುರ್ಗ ನಡುವೆ ಬಸ್​ಗಳು ಓಡಾಟ ಮಾಡುತ್ತಿದ್ದವು. ಬೆಂಗಳೂರಿನಲ್ಲಿ ಫ್ಯಾಕ್ಟರಿಗಳಿಗೆ ಓಡಾಡಲು ಬಳಸುವ ಬಸ್​ನಲ್ಲಿ ಪ್ರಯಾಣಿಕರಿದ್ದ ಕಾರಣ ದಾಳಿ ಮಾಡಲಾಗಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ನಂಗಲಿ ಆರ್.ಟಿ.ಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದ ತಂಡ ದಾಳಿ ಮಾಡಿದೆ. ಗಡಿ ಭಾಗದಲ್ಲಿ ವಾಹನಗಳಿಂದ ಹಣ ವಸೂಲಿ ಆರೋಪ ಹಿನ್ನೆಲೆ ದಾಳಿ ಮಾಡಿದ್ದು, ಅಧಿಕಾರಿಗಳು ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada