AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಕರಪತ್ರಗಳಿದ್ದ 15 ಬಸ್​ಗಳಲ್ಲಿ ಬೆಂಗಳೂರಿನಿಂದ ಕೇರಳಕ್ಕೆ 600 ಜನರ ಸಾಗಾಟ: ಬಿಜೆಪಿ ಆರೋಪ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಜನರನ್ನು ಕೇರಳಕ್ಕೆ ಕರೆದುಕೊಂಡು ಹೋಗುತ್ತಿದ್ದ 15 ಬಸ್​ಗಳನ್ನು ಬಿಜೆಪಿ ಮತ್ತು ಭಜರಂಗದಳ ಕಾರ್ಯಕರ್ತರು ತಡೆದಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಚುನಾವಣಾ ಅಧಿಕಾರಿಗಳು 5 ಬಸ್​ಗಳನ್ನು ಜಪ್ತಿ ಮಾಡಿದ್ದಾರೆ.

ಕಾಂಗ್ರೆಸ್​ ಕರಪತ್ರಗಳಿದ್ದ 15 ಬಸ್​ಗಳಲ್ಲಿ ಬೆಂಗಳೂರಿನಿಂದ ಕೇರಳಕ್ಕೆ 600 ಜನರ ಸಾಗಾಟ: ಬಿಜೆಪಿ ಆರೋಪ
ಕೇರಳಕ್ಕೆ ತರಳಿದ ಬಸ್​
TV9 Web
| Edited By: |

Updated on: Apr 26, 2024 | 8:15 AM

Share

ಬೆಂಗಳೂರು, ಏಪ್ರಿಲ್​ 24: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha Constituency) ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ (Chikkapet Assembly Constituency) ಜನರನ್ನು ಕೇರಳಕ್ಕೆ ಕರೆದುಕೊಂಡು ಹೋಗುತ್ತಿದ್ದ 15 ಬಸ್​ಗಳನ್ನು ಬಿಜೆಪಿ (BJP) ಮತ್ತು ಭಜರಂಗದಳ ಕಾರ್ಯಕರ್ತರು ತಡೆದಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಚುನಾವಣಾ ಅಧಿಕಾರಿಗಳು 5 ಬಸ್​ಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣ ಸಂಬಂಧ ಕಾಂಗ್ರೆಸ್ ಕಾರ್ಯಕರ್ತ ಅಜ್ಮಲ್ ಮಾತನಾಡಿ, ಕೆಲಸಕ್ಕೆ ಅಂತ ಕೇರಳದಿಂದ ಇಲ್ಲಿಗೆ ಬಂದಿದ್ದ ಜನ ಮತ ಹಾಕಲು ಅವರ ಊರಿಗೆ ಹೊರಟಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರಿ ಬಸ್ ಸಿಗುತ್ತಿಲ್ಲ. ಹೀಗಾಗಿ ಅವರು ಸ್ವಂತ ಖರ್ಚಿನಲ್ಲಿ ಕೇರಳಕ್ಕೆ ಹೊರಟಿದ್ದರು ಎಂದು ಹೇಳಿದರು.

ತಮಿಳುನಾಡಿನಲ್ಲಿ ಮತದಾನ ನಡೆದಾಗ ಹೊಸೂರಿನಿಂದ ಬಸ್​ಗಳು ಹೋದವು. ಆವಾಗ ಯಾಕೆ ಚುನಾವಣಾ ಅಧಿಕಾರಿಗಳು ಬಂದಿಲ್ಲ. ಸೌಮ್ಯರೆಡ್ಡಿ ಪರ ಒಳ್ಳೆ ಪ್ರತಿಕ್ರಿಯೆ ಬರುತ್ತಿದೆ. ಹೀಗಾಗಿ ಮೈಂಡ್ ಡೈವರ್ಟ್ ಮಾಡುವುದಕ್ಕಾಗಿ ಪ್ಲಾನ್ ಮಾಡುತ್ತಿದ್ದಾರೆ. ಒಂದು ಟ್ರಸ್ಟ್ ಮೂಲಕ ಕೇರಳಕ್ಕೆ  ಹೋಗುತ್ತಿದ್ದಾರೆ. ಅವರು ಹೋಗುತ್ತಿದ್ದ ಬಸ್​ಗಳನ್ನು ತಡೆದು ಸುಳ್ಳು ಆರೋಪ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಬಸ್​ಗಳಲ್ಲಿ ಕಾಂಗ್ರೆಸ್ ಕರಪತ್ರಗಳನ್ನು ಹಾಕಿದ್ದಾರೆ ಎಂದು ಆರೋಪ ಮಾಡಿದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಕರುನಾಡಿನಲ್ಲಿ ಇಂದು ಮೊದಲ ಹಂತದ ಮತದಾನ, 14 ಕ್ಷೇತ್ರದಲ್ಲಿ ವೋಟಿಂಗ್.. 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!

ಮಲಬಾರ್ ಟ್ರಸ್ಟ್ ಒಳಗಡೆ 600 ಜನ ಸೇರಿದ್ದರು

ಮಲಬಾರ್ ಟ್ರಸ್ಟ್ ಒಳಗಡೆ 600 ಜನ ಸೇರಿದ್ದರು. ಈ ಬಗ್ಗೆ FST ಟೀಂಗೆ ಮಾಹಿತಿ‌ ನೀಡಿದ್ವಿ. ಅರ್ಧ ಗಂಟೆ ಬಿಟ್ಟು ತಂಡ ಸ್ಥಳಕ್ಕೆ ಆಗಮಿಸಿತು. ಕಾಂಗ್ರೆಸ್​​ಗೆ ಸೇರಿದ ಸಾಕಷ್ಟು ವಸ್ತುಗಳು ಇದ್ದವು. ಅವರ ಉದ್ದೇಶ ಏನು ಅಂತ ಅವರೇ ಹೇಳಬೇಕು ಎಂದು ಬಿಜೆಪಿ ಕಾರ್ಯಕರ್ತ ವಸಂತ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಲೋಕಸಭೆ ಚುನಾವಣೆ ಲೈವ್​ ಅಪ್ಡೇಟ್ಸ್​​ಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್