KSRTC Employees Strike: ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ಮುಷ್ಕರಕ್ಕೆ ಕರೆ, ನಾಳೆಯಿಂದ ಸಾರಿಗೆ ಸೇವೆ ಬಂದ್

| Updated By: Digi Tech Desk

Updated on: Mar 23, 2023 | 2:13 PM

ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ನಾಳೆಯಿಂದ(ಮಾರ್ಚ್ 24) ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ಆಗಲಿದೆ

KSRTC Employees Strike: ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ಮುಷ್ಕರಕ್ಕೆ ಕರೆ, ನಾಳೆಯಿಂದ ಸಾರಿಗೆ ಸೇವೆ ಬಂದ್
ಕೆಎಸ್​ಆರ್​ಟಿ ಬಸ್​ (ಸಾಂದರ್ಭಿಕ ಚಿತ್ರ)
Follow us on

ಬೆಂಗಳೂರು: ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ನಾಳೆಯಿಂದ(ಮಾರ್ಚ್ 24) ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ಆಗಲಿದೆ. ನಾಳೆಯಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಹಿಂದೆ ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಮುಷ್ಕರ ಹಿಂಪಡೆಯಲಾಗಿತ್ತು. ಆದ್ರೆ ಈಗ ಮತ್ತೆ ಸಮಾನ‌ ಮನಸ್ಕರ ವೇದಿಕೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದೆ. ಸಾರಿಗೆ ನೌಕರರ ಮುಖಂಡ ಚಂದ್ರು ನಾಲ್ಕು ನಿಗಮದ ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.

ಸಮಾನ ಮನಸ್ಕರ ವೇದಿಕೆಯ ಬೇಡಿಕೆಗಳೇನು?

  • ಸರ್ಕಾರಿ ನೌಕರರ ಸರಿಸಮಾನಾದ ವೇತನ ನೀಡಬೇಕು
  • ನಾಲ್ಕು ನಿಗಮಗಳ ನೌಕರರ ಸಂಘಕ್ಕೆ ಎಲೆಕ್ಷನ್ ಮಾಡಬೇಕು
  • ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರುನೇಮಕಾತಿ ಮಾಡಿಕೊಳ್ಳುವುದು
  • ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು
  • ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡಿರುವ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು
  • ಅವರಿಗೆ ಸರಿಯಾದ ರೀತಿ ಪಿಂಚಣೆ ಸೌಲಭ್ಯವನ್ನು ಒದಗಿಸುವುದುಇದನ್ನೂ ಓದಿ: KSRTC: ಸಾರಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಆದೇಶ

ಅನಂತ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಈ ಹಿಂದೆ ಮಾರ್ಚ್- 21 ರಿಂದ ಸಾರಿಗೆ ಮುಷ್ಕರಕ್ಕೆ ಕರೆ ನೀಡಿತ್ತು. ಈಗಾಗಲೇ ರಾಜ್ಯ ಸರ್ಕಾರ ನೌಕರರಿಗೆ 15% ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರಿಂದ 21 ರ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿತ್ತು. ಆದರೆ ಚಂದ್ರು ನೇತೃತ್ವದ ಸಮಾನ ಮನಸ್ಕರ ವೇದಿಕೆ ಸರ್ಕಾರಿ ನೌಕರರಿಗೆ ನೀಡುವಷ್ಟು ನಮಗೂ ಸಂಬಳ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:14 pm, Thu, 23 March 23