AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನಲ್ಲಿ ಪ್ರಯಾಣ: ಮಹಿಳೆಯರ ಸಮಸ್ಯೆ ಆಲಿಸಿದ ಬಿಎಂಟಿಸಿ ಬಸ್​​ ಎಂಡಿ ಜಿ‌ ಸತ್ಯವತಿ

ಬಿಎಂಟಿಸಿ(BMTC) ಎಂಡಿ ಜಿ‌. ಸತ್ಯವತಿ ಅವರು ‘ಬನಶಂಕರಿ ಡಿಪೋಗೆ ಭೇಟಿ ನೀಡಿ ಕಂಡಕ್ಟರ್, ಡ್ರೈವರ್ ಮತ್ತು ಮೆಕ್ಯಾನಿಕ್​ಗಳ ಕುಂದುಕೊರತೆಗಳನ್ನು ಆಲಿಸಿದ್ದು, ಬನಶಂಕರಿಯಿಂದ ಕೋಣನಕುಂಟೆ ಮಾರ್ಗವಾಗಿ ಕಾರ್ಯಾಚರಿಸುತ್ತಿರುವ ಬಸ್ಸಿನಲ್ಲಿ ಪ್ರಯಾಣಿಸಿದ್ದಾರೆ.

ಬಸ್​ನಲ್ಲಿ ಪ್ರಯಾಣ: ಮಹಿಳೆಯರ ಸಮಸ್ಯೆ ಆಲಿಸಿದ ಬಿಎಂಟಿಸಿ ಬಸ್​​ ಎಂಡಿ ಜಿ‌ ಸತ್ಯವತಿ
ಬಿಎಂಟಿಸಿ ಎಂಡಿ ಸತ್ಯವತಿ
Kiran Surya
| Edited By: |

Updated on:Nov 04, 2023 | 4:44 PM

Share

ಬೆಂಗಳೂರು, ನ.04: ಬಿಎಂಟಿಸಿ ಎಂಡಿ ಜಿ‌. ಸತ್ಯವತಿ ಅವರು ಇಂದು(ನ.04) ಬಸ್​ನಲ್ಲಿ ಪ್ರಯಾಣ ಮಾಡಿ ತಪಾಸಣೆ ಮಾಡಿದ್ದಾರೆ. ಶಕ್ತಿ ಯೋಜನೆ ಹಿನ್ನೆಲೆಯಲ್ಲಿ ಮಹಿಳೆಯರ ಸಮಸ್ಯೆ ಕೇಳಿದ ಬಿಎಂಟಿಸಿ(BMTC) ಎಂಡಿ ಅವರು ‘ಬನಶಂಕರಿ ಡಿಪೋಗೆ ಭೇಟಿ ನೀಡಿ ಕಂಡಕ್ಟರ್, ಡ್ರೈವರ್ ಮತ್ತು ಮೆಕ್ಯಾನಿಕ್​ಗಳ ಕುಂದುಕೊರತೆಗಳನ್ನು ಆಲಿಸಿದ್ದು, ಬನಶಂಕರಿಯಿಂದ ಕೋಣನಕುಂಟೆ ಮಾರ್ಗವಾಗಿ ಕಾರ್ಯಾಚರಿಸುತ್ತಿರುವ ಬಸ್ಸಿನಲ್ಲಿ ಪ್ರಯಾಣಿಸಿದ್ದಾರೆ. ಈ ವೇಳೆ ಚಾಲಕ ಮತ್ತು ನಿರ್ವಾಹಕರಿಗೆ ತಿಳುವಳಿಕೆ ಕೂಡ ನೀಡಿದ್ದಾರೆ.

ಇನ್ನು ಈ ವೇಳೆ ಪ್ರಯಾಣಿಕರ ಅಹವಾಲುಗಳನ್ನು ಆಲಿಸಿದ ಅವರು, ‘ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿರುತ್ತಾರೆ. ಅಷ್ಟೇ ಅಲ್ಲದೇ ಈ ಕೆಳಕಂಡ ಐದು ಅಂಶಗಳ ಮೇಲೆ ಕಾರ್ಯನಿರ್ವಹಿಸುವ ಚಾಲನಾ ಸಿಬ್ಬಂದಿಗಳನ್ನು ಪ್ರಶಂಸಿದ್ದಾರೆ.

* ನಿರ್ವಾಹಕರು ಶಕ್ತಿ ಯೋಜನೆ ಅಡಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ವಾಹನಗಳಲ್ಲಿ ಚೀಟಿ ವಿತರಣೆ. * ನಿರ್ವಾಹಕರು ಮಹಿಳಾ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತನೆ. * ನಿರ್ವಾಹಕರು ಶಕ್ತಿ ಯೋಜನೆ ಅಡಿಯಲ್ಲಿ ದಾಖಲಾತಿಗಳನ್ನು ಪರಿಶೀಲನೆ. * ನಿರ್ವಾಹಕರು ವಾಹನಗಳಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರಿಗೆ ಚೀಟಿ ವಿತರಣೆ. * ಸಂಸ್ಥೆಯ ವಾಹನಗಳ ಸ್ವಚ್ಛತೆ. ಹೀಗೆ ಹಲವು ಮಾನದಂಡಗಳ ಮೇಲೆ ಚಾಲಕ ಹಾಗೂ ನಿರ್ವಾಹಕರನ್ನು ಬಿಎಂಟಿಸಿ ಎಂಡಿ ಸತ್ಯವತಿಯವರು ಪ್ರಶಂಸೆ ನೀಡಿದ್ದಾರೆ.

ಇದನ್ನೂ ಓದಿ:ಬಿಎಂಟಿಸಿ ಚಾಲಕರ ಹೃದಯಕ್ಕೆ ಆಪತ್ತು, ಜಯದೇವ ಆಸ್ಪತ್ರೆ ವೈದ್ಯರ ವರದಿಯಲ್ಲಿ ಶಾಕಿಂಗ್ ಅಂಶ ಬಯಲು

ಬಿಎಂಟಿಸಿಗೆ ಓರ್ವ  ಮಹಿಳೆ, ವ್ಯಕ್ತಿ ಸಾವು

ಬೆಂಗಳೂರು: ಇಂದು(ನ.04) ಬೆಳಗ್ಗೆ ಹುಳಿಮಾವು ವ್ಯಾಪ್ತಿಯಲ್ಲಿ ಓರ್ವ ಮಹಿಳೆ ಬಿಎಂಟಿಸಿ ಬಸ್​ ಡಿಕ್ಕಿ ಹೊಡೆದು ಮೃತಪಟ್ಟರೆ, ವಿಜಯನಗರದಲ್ಲಿ ಓರ್ವ ವ್ಯಕ್ತಿ ಬಿಎಂಟಿಸಿಗೆ ಬಲಿಯಾಗಿದ್ದಾರೆ. ವಿಜಯನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋವಿಂದರಾಜನಗರ ಬೈ ಟು ಕಾಫಿ ಮುಂಭಾಗ ಕುಮಾರ್ (45) ಎಂಬುವವರು ಬಿಎಂಟಿಸಿ ಬಸ್ ಅಪಘಾತದಲ್ಲಿ ಬಲಿಯಾಗಿದ್ದಾರೆ. ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Sat, 4 November 23

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ