ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ 25 ಮರ ಕಟಾವು?; ಏಕಾಏಕಿ ಮರ ಕಡಿಯಲಾಗಿದೆ ಎಂದು ಸಾರ್ವಜನಿಕರ ಆಕ್ರೋಶ

ಮರ ಕಡಿಯುವ ಬದಲು ಸ್ಥಳಾಂತರ ಮಾಡಬಹುದಿತ್ತು. ಮೆಟ್ರೋ ಕಾಮಗಾರಿ ಇಲ್ಲ, ರಸ್ತೆ ಅಗಲೀಕರಣವೂ ಇಲ್ಲ. ಆದರೂ ಮರಗಳನ್ನು ಕಡಿಯುತ್ತಿರುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಏಕಾಏಕಿ ಮರ ಕಡಿದ ಕಾರಣ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ.

ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ 25 ಮರ ಕಟಾವು?; ಏಕಾಏಕಿ ಮರ ಕಡಿಯಲಾಗಿದೆ ಎಂದು ಸಾರ್ವಜನಿಕರ ಆಕ್ರೋಶ
ಬಿಬಿಎಂಪಿ
Follow us
TV9 Web
| Updated By: ganapathi bhat

Updated on:Jan 16, 2022 | 12:51 PM

ಬೆಂಗಳೂರು: ನಗರದಲ್ಲಿ ಅಂಗಡಿಗಳ ನಿರ್ಮಾಣಕ್ಕೆ 25 ಮರ ಕಟಾವು ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಿಬಿಎಂಪಿ ಸುಮಾರು 25 ಮರಗಳನ್ನು ಕಡಿದು ಹಾಕಿರುವ ಬಗ್ಗೆ ತಿಳಿದುಬಂದಿದೆ. ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು ಮರ ಕಡಿದಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮರಗಳನ್ನು ಕಡಿಯುವುದಕ್ಕೆ ಅನುಮತಿಯನ್ನು ಪಡೆದಿಲ್ಲ. ಅರಣ್ಯ ಇಲಾಖೆ ಅನುಮತಿ ಪಡೆದಿಲ್ಲವೆಂದು ಆರೋಪ ಕೇಳಿಬಂದಿದೆ.

ಮರ ಕಡಿಯುವ ಬದಲು ಸ್ಥಳಾಂತರ ಮಾಡಬಹುದಿತ್ತು. ಮೆಟ್ರೋ ಕಾಮಗಾರಿ ಇಲ್ಲ, ರಸ್ತೆ ಅಗಲೀಕರಣವೂ ಇಲ್ಲ. ಆದರೂ ಮರಗಳನ್ನು ಕಡಿಯುತ್ತಿರುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಏಕಾಏಕಿ ಮರ ಕಡಿದ ಕಾರಣ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ. ಫುಟ್‌ಪಾತ್ ಮೇಲೆ ಅಂಗಡಿಗಳ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆಯೇ? ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅಂಗಡಿ ನಿರ್ಮಾಣ ಮಾಡಲಾಗುತ್ತದೆಯೇ? ಮರ ಕಡಿದ ಜಾಗದಲ್ಲಿ ಯಾವ ಚಟುವಟಿಕೆ ನಡೆಸಲು ಬಿಡಲ್ಲ ಎಂದು ಮರ ಕಡಿದ ಹಿನ್ನೆಲೆ ಬಿಬಿಎಂಪಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ತೋಟಗಾರಿಕಾ ಇಲಾಖೆ ಸಚಿವರ ಕ್ಷೇತ್ರದಲ್ಲಿ ಮರಗಳಿಗೆ ಉಳಿಗಾಲ ಇಲ್ಲ. 20 ವರ್ಷಗಳಿಂದ ಇದ್ದ ಮರಗಳಿಗೆ ಕೊಡಲಿ ಪೆಟ್ಟು ಬಿದ್ದಿದೆ ಎಂದು ಸ್ಥಳೀಯ ನಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮಾಹಿತಿ ನೀಡದೆಯೇ ಮರಗಳ ತೆರವು ಮಾಡಲಾಗಿದೆ. ಯಾರಿಗೂ ಗೊತ್ತಿಲ್ಲದೇ ಕರ್ಫ್ಯೂ ಸಮಯದಲ್ಲಿ ಮರ ಕಡಿಯಲಾಗಿದೆ. ಮರ ಕಡಿದ ಜಾಗದಲ್ಲಿ ಯಾವ ಚಟುವಟಿಕೆಗಳನ್ನ ನಡೆಸಲು ಬಿಡೊಲ್ಲ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್

ಇದನ್ನೂ ಓದಿ: Coronavirus: ಬೆಂಗಳೂರು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೊರೊನಾ ಮಾರ್ಗಸೂಚಿ ಬಿಡುಗಡೆ, ಕೊಪ್ಪಳ ಗವಿಮಠ ಜಾತ್ರೆ ರದ್ದು

Published On - 12:11 pm, Sun, 16 January 22

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ