ಎಡಿಜಿಪಿ ಅಲೋಕ್ ಕುಮಾರ್ ಎದುರೇ ಬೈಕ್ ಸವಾರನ ತ್ರಿಬಲ್ ರೈಡಿಂಗ್, ಪೊಲೀಸರಿಗೆ ಕ್ಲಾಸ್
ಕಳೆದ ಒಂದು ವಾರದ ಹಿಂದೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ಸಮೀಪ ವಾಹನ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿ ಇಬ್ಬರು ಪಾದಚಾರಿಗಳು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಅಪಘಾತ ನಡೆದ ಸ್ಥಳ ಪರಿಶೀಲನೆ ನಡೆಸಿದರು.
ಆನೆಕಲ್: ಕಳೆದ ಒಂದು ವಾರದ ಹಿಂದೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ಸಮೀಪ ವಾಹನ ಚಾಲಕನ ಅಜಾಗರೂಕತೆಯಿಂದ ಅಪಘಾತ (Accident) ಸಂಭವಿಸಿ ಇಬ್ಬರು ಪಾದಚಾರಿಗಳು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು (ಆ.11) ಎಡಿಜಿಪಿ ಅಲೋಕ್ ಕುಮಾರ್ (Alok Kumar) ಅವರು ಅಪಘಾತ ನಡೆದ ಸ್ಥಳ ಪರಿಶೀಲನೆ ನಡೆಸುತ್ತಿರುವ ವೇಳೆ ಅವರ ಮುಂದೆಯೇ ಬೈಕ್ ಸವಾರ ತ್ರಿಬಲ್ ರೈಡಿಂಗ್ನಲ್ಲಿ ಬಂದಿದ್ದಾನೆ. ಇದನ್ನು ಕಂಡ ಅಲೋಕ್ ಕುಮಾರ್ ಪೋಲೀಸರ ವಿರುದ್ಧ ಗರಂ ಆದರು.
ಹೆಲ್ಮೆಟ್ ಧರಿಸದೆ ಬೇಕಾಬಿಟ್ಟಿಯಾಗಿ ದ್ವಿಚಕ್ರ ವಾಹನ ಸವಾರರ ಸಂಚರಿಸುತ್ತಿದ್ದಾರೆ. ಸಂಚಾರಿ ನಿಯಮ ಪಾಲನೆ ಮಾಡದಿದ್ದರೇ ಫೈನ್ ಹಾಕಿ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಸೂಚಿಸಿದರು. ಬಳಿಕ ಹೆದ್ದಾರಿಯ ಸರ್ವೀಸ್ ರಸ್ತೆ ಬದಿಯಲ್ಲಿ ಅಂಗಡಿ ಹಾಕಿಕೊಂಡಿರುವ ಸ್ಥಳಕ್ಕೆ ಭೇಟಿ ನೀಡಿದರು.
ಜನರು ಸರ್ವಿಸ್ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ರಸ್ತೆ ಬದಿ ಅಂಗಡಿಗಳನ್ನು ಹಾಕಿಕೊಂಡಿದ್ದನ್ನು ಕಂಡು ಸರ್ವಿಸ್ ರಸ್ತೆ ಮಾರ್ಕೆಟ್ ಆಗಿ ಬಳಕೆಯಾಗುತ್ತಿದೆ. ಕೂಡಲೇ ರಸ್ತೆ ಬದಿಯ ಅಂಗಡಿಗಳನ್ನು ತೆರವು ಮಾಡಿ. ಮತ್ತು ಆಟೋ ಚಾಲಕರಿಗೆ ಬೇರೆಡೆಗೆ ಸ್ಟಾಂಡ್ ಮಾಡಿಕೊಳ್ಳುವಂತೆ ಸೂಚಿಸಿ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ