AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಲವ್ ಜಿಹಾದ್ ಯತ್ನ: ಮುಸ್ಲಿಂ ಯುವಕನಿಂದ ರಕ್ಷಣೆಗಾಗಿ ಠಾಣೆ ಮೆಟ್ಟಿಲೇರಿದ ಹಿಂದೂ ಯುವತಿ

ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ಲವ್ ಜಿಹಾದ್​ಗೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮುಸ್ಲಿಂ ಯುವಕನಿಂದ ರಕ್ಷಣೆ ಕೋರಿ ಹಿಂದೂ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಬೆಂಗಳೂರಿನಲ್ಲಿ ಲವ್ ಜಿಹಾದ್ ಯತ್ನ: ಮುಸ್ಲಿಂ ಯುವಕನಿಂದ ರಕ್ಷಣೆಗಾಗಿ ಠಾಣೆ ಮೆಟ್ಟಿಲೇರಿದ ಹಿಂದೂ ಯುವತಿ
ಬೆಂಗಳೂರಿನಲ್ಲಿ ಲವ್ ಜಿಹಾದ್​ಗೆ ಯತ್ನಿಸಿದ ಅಸ್ಸಾಂ ಮೂಲದ ಅಲ್ ಮೆಹಪ್ಯೂಸ್ ಬರಪೂಯಾ
Rakesh Nayak Manchi
|

Updated on: Jun 11, 2023 | 6:12 PM

Share

ಬೆಂಗಳೂರು: ಇತ್ತೀಚೆಗಷ್ಟೇ ಕುಂದಾಪುರದಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಬೆನ್ನಲ್ಲೇ ಇದೀಗ ಬೆಂಗಳೂರು (Bengaluru) ನಗರದಲ್ಲಿ ಲವ್ ಜಿಹಾದ್​ಗೆ (Love Jihad) ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಯುವಕನ ಮೋಸದ ಬಗ್ಗೆ ತಿಳಿದು ದೂರವಾದ ಯುವತಿ ಮತ್ತು ಕುಟುಂಬವನ್ನು ಮುಗಿಸುವ ಬೆದರಿಕೆ ಹಾಕಿದ ಮತಾಂಧನೊಂದಿಗೆ ಆಕೆಯನ್ನು ಕೆಲಸದಿಂದ ತೆಗೆದು ಆಕೆ ಕೆಲಸ ಮಾಡುತ್ತಿದ್ದ ಕಂಪನಿಯೇ ಕೈಜೋಡಿಸಿದೆ. ಸದ್ಯ ಕಿರಾತಕನಿಂದ ರಕ್ಷಣೆ ಕೋರಿ ಹಿಂದೂ ಯುವತಿ ಠಾಣೆಗೆ ಮೆಟ್ಟಿಲೇರಿದ್ದಾಳೆ. ಅಷ್ಟಕ್ಕೂ ಯುವಕನ ಲವ್ ಜಿಹಾದ್ ಯತ್ನ ಹೇಗಿತ್ತು? ಕಂಪನಿ ಮಾಡಿದ್ದೇನು? ಇಲ್ಲಿದೆ ನೋಡಿ..

ಲವ್ ಜಿಹಾದ್​ಗೆ ಯತ್ನಿಸಿದ ಅಸ್ಸಾಂ ಮೂಲದ ಅಲ್ ಮೆಹಪ್ಯೂಸ್ ಬರಪೂಯಾ ಗಾರ್ಮೆಂಟ್ಸ್ ರಿಟೇಲ್​ನಲ್ಲಿ ಕೆಲಸ ಮಾಡಿಕೊಂಡಿದ್ದು, ವಂಚನೆಗೊಳಗಾದ ಮಹಾರಾಷ್ಟ್ರ ಮೂಲದ ಯುವತಿ ಬ್ಲಾಕ್ ಬೆರಿಸ್​ನಲ್ಲಿ ಕೆಲಸ ಮಾಡುತ್ತಿದ್ದಾಳೆ. ಕೆಲಸದ ಪ್ರಯುಕ್ತ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಯುವತಿ ಹಾಗೂ ಕೊರಮಂಗಲದಲ್ಲಿ ಯುವಕ ವಾಸವಾಗಿದ್ದರು.

ಪ್ರಾರಂಭದಲ್ಲಿ ಹಿಂದೂ ಯುವತಿಗೆ ತನ್ನ ಹೆಸರು ಮೆಲ್ಬಿನ್, ತಾನೊಬ್ಬ ಕ್ರಿಶ್ಚಿಯನ್ ಎಂದು ಅಲ್ ಮೆಹಪ್ಯೂಸ್ ಪರಿಚಯ ಮಾಡಿಕೊಂಡಿದ್ದನು. ನಂತರ ಇವರ ನಡುವೆ ನಡೆದ ಒಡನಾಟ ಪ್ರೀತಿಗೆ ತಿರುಗಿ ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ಆದರೆ ಆಕಸ್ಮಿಕವಾಗಿ ಅಲ್ ಮೆಹಪ್ಯೂಸ್​ನ ಆಧಾರ್ ಕಾರ್ಡ್​ ಯುವತಿಯ ಕಣ್ಣಿಗೆ ಬಿದ್ದಿದೆ. ಈ ವೇಳೆ ಆತ ಕ್ರಿಶ್ಚಿಯನ್ ಅಲ್ಲ, ಮುಸ್ಲಿಂ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Kundapur News: ಕುಂದಾಪುರದಲ್ಲಿ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಬಿತ್ತು ಚಪ್ಪಲಿಯೇಟು, ವಿಡಿಯೋ ನೋಡಿ

ಕೂಡಲೇ ಎಚ್ಚೆತ್ತ ಯುವತಿ, ಬ್ರೇಕಪ್ ಮಾಡಿಕೊಂಡಿದ್ದಾಳೆ. ಮನೆಯವರಿಗೆ ವಿಚಾರ ಪ್ರಸ್ತಾಪಿಸಿದಾಗಲೂ ಪೋಕಷರು ತಿರಸ್ಕಾರ ಮಾಡಿ ಬುದ್ಧಿವಾದ ಹೇಳಿದ್ದಾರೆ. ಇತ್ತ ಅಲ್ ಮೆಹಪ್ಯೂಸ್ ಯುವತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ರಾತ್ರಿ ವೇಳೆ ಮನೆ ಬಳಿ ಬಂದು ಗಲಾಟೆ ಕೊಲೆ ಬೆದರಿಕೆ ಹಾಕಿದ್ದಲ್ಲದೆ, ಯುವತಿ ಮತ್ತು ಕುಟುಂಬವನ್ನು ಮುಗಿಸುವ ಬೆದರಿಕೆ ಹಾಕಿದ್ದಾನೆ.

ಅಷ್ಟು ಮಾತ್ರವಲ್ಲದೆ, ಯುವತಿ ಕೆಲಸ ಮಾಡುತ್ತಿದ್ದ ಕಂಪನಿ ಮಾಲೀಕರಿಗೆ ಇಲ್ಲಸಲ್ಲದ ಆರೋಪ ಮಾಡಿದ್ದಾನೆ. ನಯವಂಚಕ ಅಲ್ ಮೆಹಪ್ಯೂಸ್ ಬರಪೂಯಾ ಜೊತೆ ಯುವತಿ ಸಹೋದ್ಯೋಗಿಗಳು ಕೂಡ ಸೇರಿರುವುದು ವಿಪರ್ಯಾಸವೇ ಸರಿ. ಕೊರಮಂಗಲ ಬ್ಲಾಕ್ ಬೇರಿಸ್ ಸ್ಟೋರ್ ಟೀಮ್ ಮಹಮದ್ ಸಕ್ಕೈನ್, ಸೈಯ್ಯದ್, ಮುಜಿಬ್ ಸೈಫ್ ಶೇಖ್, ಅಸ್ಲಂ ತಬ್ರೆಜ್ ಇವರೆಲ್ಲರು ಸೇರಿ ಯುವತಿ ವೃತ್ತಿ ಜೀವನವನ್ನು ಹಾಳು ಮಾಡಿದ್ದಾರೆ.

ಅನ್ಯಕೋಮಿನ ಸ್ಟೋರ್ ಟೀಮ್​ನ ಕುಂತತ್ರಕ್ಕೆ ಯುವತಿ ಬಲಿಪಶು

ಕಂಪನಿ ಜಿಎಂ ಸಾಯಾಕ್ ಅರೋರಾ ಅವ್ಯಾಚ ಶಬ್ದಗಳಿಂದ ನಿಂದನೆ ಮಾಡಿದ್ದಲ್ಲದೆ, ನಾಲ್ಕು ಲಕ್ಷ ನೀಡಿ ಕಾಂಪ್ರೊಮೈಸ್ ಮಾಡಿಕೊಳ್ಳುವಂತೆ ಒತ್ತಡ ಹೇರಿದ್ದಾನೆ. ಮೊದಲೇ ಟೈಪ್ ಮಾಡಿದ್ದ ಪ್ರತಿಯನ್ನು ಮುಂದಿಟ್ಟು ಸಹಿ ಹಾಕುವಂತೆ ಹಾಗೂ ಹಣ ನೀಡದಿದ್ದರೆ ಕೆಲಸದಿಂದ ತೆಗೆಯುವುದಾಗಿ ಹೆಚ್​ಆರ್ ಅಂಕುಷ್ ಠಾಕೂರ್, ಎಂಐಎಸ್ ಅವಿನಾಶ್ ವರ್ಮ, ಜಿಎಂ ಸಯಾಕ್ ಆರೋರಾ, ಪ್ರಾಂಚೈಸಿ ಹರೀಶ್ ಎಂಬವರು ಬ್ಲಾಕ್ ಮೇಲ್ ಮಾಡಿದ್ದಾರೆ.

ಕಿರುಕುಳ ಹಾಗೂ ಬ್ಲಾಕ್ ಮೇಲ್​ನಿಂದ ಮನನೊಂದಿರುವ ಯುವತಿ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಮತಾಂಧನ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಂಪನಿ ಆಡಳಿತ ಮಂಡಳಿ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಸ್ಲಿಂ ಯುವಕನಿಂದ ರಕ್ಷಣೆ ಹಾಗೂ ನ್ಯಾಯ ನೀಡುವಂತೆ ದೂರಿನಲ್ಲಿ ಯುವತಿ ಮನವಿ ಮಾಡಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ