ಬೆಂಗಳೂರು: ನಗದರಲ್ಲಿ ಇಂದು ಬೆಳ್ಳಂಬೆಳಗ್ಗೆ ಸರಣಿ ಅಪಘಾತ (Accident) ನಡೆದಿದ್ದು, ಘಟನೆಯಲ್ಲಿ ಇಬ್ಬರು ಬೈಕ್ (Bike) ಸವಾರರು ಮೃತಪಟ್ಟಿದ್ದಾರೆ. ಕುಡಿದ ಮತ್ತಿನಲ್ಲಿ ಟಿಟಿ ವಾಹನ ಚಾಲಕ 5 ವಾಹನಗಳಿಗೆ ಗುದ್ದಿದ್ದಾನೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್ ಬಳಿಯ ಸರ್ಕಲ್ನಲ್ಲಿ ಮೂರು ಗಾಡಿಗಳು ಮತ್ತು ಪಟೇಗಾರಪಾಲ್ಯದಲ್ಲಿ ಎರಡು ದ್ವಿಚಕ್ರ ವಾಹನಗಳಿಗೆ ಟಿಟಿ ವಾಹನ ಚಾಲಕ ಗುದ್ದಿದ್ದಾನೆ. ಟಿಟಿ ಗಾಡಿ ಗುದ್ದಿರುವ ರಭಸಕ್ಕೆ ಇಬ್ಬರು ವಾಹನ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತವಾದರೂ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದ ಚಾಲಕನ್ನು ಹಿಡಿದು ಸ್ಥಳೀಯರು ಥಳಿಸಿದ್ದಾರೆ.
ಮದ್ಯಪಾನ ಸೇವಿಸಿ ವಾಹನ ಚಲಾಯಿಸಿ ಅಪಘಾತ ಮಾಡಿದ್ದ ಚಾಲಕನ ಬಟ್ಟೆ ಬಿಚ್ಚಿ ಸ್ಥಳೀಯರು ಹೊಡೆದಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಚಾಲಕ ಮತ್ತು ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಡಿಕ್ಕಿ:
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಬಸ್ನಲ್ಲಿದ್ದ 10 ಪ್ರಯಾಣಿಕರಿಗೆ ಗಾಯಗಳಾಗಿವೆ.
ಕಾರು-ಬೈಕ್ ನಡುವೆ ಅಪಘಾತ:
ಇಂದು ದೇಶದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಮೋದಿ ಬರುವ ಮುನ್ನ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಹೀಗಿದ್ದೂ, ಮೇಖ್ರಿ ಸರ್ಕಲ್ ಬಳಿ ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿದೆ. ಸಿಗ್ನಲ್ ಬಿಟ್ಟಾಗ ಆತುರದಲ್ಲಿ ಹೋಗುವಾಗ ಅಪಘಾತ ನಡೆದಿದೆ. ಅಪಘಾತದಲ್ಲಿ 2 ವರ್ಷದ ಮಗುವಿಗೆ ಸಣ್ಣ ಗಾಯವಾಗಿದೆ. ಮಗುವನ್ನ ಪೊಲೀಸರು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:28 pm, Mon, 20 June 22