ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್, ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪೊಲೀಸ್ ವಶಕ್ಕೆ

ಉಡುಪಿ ಕಾಲೇಜು ವಿಡಿಯೋ ವಿವಾದ ವಿರುದ್ಧ ಸಂಬಂಧ ಸಿಎಂ ಸಿದ್ದರಾಮಯ್ಯ ಕುಟುಂಬದ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾಳನ್ನು ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್, ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪೊಲೀಸ್ ವಶಕ್ಕೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jul 28, 2023 | 1:30 PM

ಬೆಂಗಳೂರು, (ಜುಲೈ 28): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ(BJP) ಕಾರ್ಯಕರ್ತೆ ಶಕುಂತಲ ನಟರಾಜ್​ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿಯ(Udupi) ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಕುರಿತು ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆ ಶಕುಂತಲ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇದೀಗ ಇಂದು (ಜುಲೈ 28) ಶಕುಂತಲಾಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ರೈಲು ದುರಂತಕ್ಕೆ ಮಸೀದಿ ಕಾರಣವೆಂದು ಫೋಟೋ ಶೇರ್: ತುಮಕೂರಿನ ಮಹಿಳೆ ಮಾಹಿತಿ ಸಂಗ್ರಹಿಸಿದ ಒಡಿಶಾ ಪೊಲೀಸರು

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ಬಗ್ಗೆ ಟ್ವೀಟ್ ಮಾಡಿದ್ದ ಶಕುಂತಲಾ, ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್​ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ಅವರ ವಿಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? ಎಂದು ಸಿದ್ದರಾಮಯ್ಯನವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು. ಇದರ ವಿರುದ್ಧ ಹೈಗ್ರೌಂಡ್ಸ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು  ಇದೀಗ ಶಕುಂತಲಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಒಡಿಶಾದ ಬಾಲಾಸೋರ್​ನಲ್ಲಿ ಸಂಭವಿಸಿದ್ದ ಭೀಕರ ಸರಣಿ ರೈಲು ಅಪಘಾತ ಘಟನೆಗೆ ಇವರೇ ಕಾರಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಸೀದಿ ಫೋಟೋ ಹಾಕಿದ್ದರು. ಈ ಫೋಸ್ಟ್ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಅಲ್ಲದೇ ಈ ಬಗ್ಗೆ ಒಡಿಶಾ ಪೊಲೀಸರು ಮಾಹಿತಿ ಮಾಹಿತಿ ಸಂಗ್ರಹಿಸಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:12 pm, Fri, 28 July 23