ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ; ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕ

ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಎಸಿಎಸ್ ಆಗಿ ಗೌರವ್ ಗುಪ್ತಾ ವರ್ಗಾವಣೆ ಹೊಂದಿದ್ದಾರೆ. ಜೊತೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಟಿಕೆ ಅನಿಲ್ ಕುಮಾರ್​ಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ; ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕ
Follow us
TV9 Web
| Updated By: sandhya thejappa

Updated on:May 05, 2022 | 4:48 PM

ಬೆಂಗಳೂರು: ಬಿಬಿಎಂಪಿ (BBMP) ಮುಖ್ಯ ಆಯುಕ್ತ ಗೌರವ್ ಗುಪ್ತಾ (Gaurav Gupta) ಅವರನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್​ರನ್ನು (Tushar Girinath) ನೇಮಕ ಮಾಡಿದೆ. ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಎಸಿಎಸ್ ಆಗಿ ಗೌರವ್ ಗುಪ್ತಾ ವರ್ಗಾವಣೆ ಹೊಂದಿದ್ದಾರೆ. ಜೊತೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಟಿಕೆ ಅನಿಲ್ ಕುಮಾರ್​ಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ಮನೋಜ್ ಜೈನ್ ನೇಮಕಗೊಂಡಿದ್ದಾರೆ.

ಇನ್ನು ಮುಖ್ಯಮಂತ್ರಿ ಕಾರ್ಯದರ್ಶಿ ಪೊನ್ನುರಾಜ್ ವರ್ಗಾವಣೆಯಾಗಿದ್ದು, ಪೊನ್ನುರಾಜ್​ಗೆ ಕೆಪಿಸಿಎಲ್ ಎಂಡಿ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಹಾಗೇ, 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಓರ್ವ ಐಎಎಸ್ ಅಧಿಕಾರಿಗೆ ಹೆಚ್ಚುವರಿ ಹೊಣೆಗಾರಿಕೆಗೆ ನೀಡಿದೆ. ದೆಹಲಿ ಕರ್ನಾಟಕ ಭವನದ ಉಪಸ್ಥಾನೀಯ ಆಯುಕ್ತರಾಗಿ ಖುಷ್ಬೂ ಚೌಧರಿ ನೇಮಕಗೊಂಡಿದ್ದಾರೆ. ಕೆಪಿಎಸ್​ಸಿ ಕಾರ್ಯದರ್ಶಿಯಾಗಿ ಕ್ಯಾ.‌ಡಾ.ರಾಜೇಂದ್ರ, ಕೆಆರ್​ಐಡಿಎಲ್ ಎಂಡಿ ಆಗಿ ಎಂ.ಜಿ.ಹಿರೇಮಠ, ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆಗಿ ನಿತೇಶ್ ಪಾಟೀಲ್​, ಧಾರವಾಡ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗ್ಡೆ ವರ್ಗಾವಣೆಯಾಗಿದ್ದಾರೆ.

ಕೆಎಸ್​ಆರ್​ಟಿಸಿ ನಿರ್ದೇಶಕರಾಗಿ ಡಾ. ನವೀನ್ ಭಟ್, ಬಾಗಲಕೋಟೆ ಜಿಲ್ಲಾಧಿಕಾರಿ ಭೂ ಬಾಲನ್ ಟಿ, ಇಡಿಸಿಎಸ್ ನಿರ್ದೇಶಕರಾಗಿ ಡಾ.ದಿನೇಶ್ ಸಸಿ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಎಂಡಿ ಭರತ್ ಎಸ್, ಕೆಯುಐಡಿಎಫ್​ಸಿ ಎಂಡಿಯಾಗಿ ಶಿಲ್ಪಾ ಎಂ, ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಪ್ರಸನ್ನ ಹೆಚ್, ಕಲಬುರಗಿ ಜಿ.ಪಂ. ಸಿಇಒ ಆಗಿದೆ ಡಾ.ಗಿರೀಶ್ ದಿಲೀಪ್ ಬಾಡೋಲೆ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ

ಊಟದ ಮುನ್ನವೇ ಸಿಹಿ ತಿನ್ನಬೇಕೆಂದು ಹೇಳುತ್ತೆ ಆಯುರ್ವೇದ, ಏಕೆ?

‘ಜಯರಾಜ್​ ಒಬ್ಬ ಸಂತ ಅಂತ ತೋರಿಸೋಕೆ ಆಗಲ್ಲ; ಸತ್ಯವನ್ನೇ ತೋರಿಸಿದ್ದೇನೆ’: ಅಗ್ನಿ ಶ್ರೀಧರ್​ ತಿರುಗೇಟು

Published On - 4:17 pm, Thu, 5 May 22

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್