ಬಿಬಿಎಂಪಿಗೆ ಹೊಸ ಆಯುಕ್ತ ನೇಮಕ: ತುಷಾರ್ ಗಿರಿನಾಥ್ ವರ್ಗಾವಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾಯಿಸಿದೆ. ಅವರನ್ನು ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ತುಷಾರ್ ಗಿರಿನಾಥ್ ಅವರು ಎರಡೂವರೆ ವರ್ಷಗಳ ಕಾಲ ಬಿಬಿಎಂಪಿಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಬೆಂಗಳೂರು, ಏಪ್ರಿಲ್ 28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿದೆ. ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ನೇಮಕ ಮಾಡುವ ಮೂಲಕ ಹೆಚ್ಚುವರಿ ಹೊಣೆ ನೀಡಲಾಗಿದೆ.
ತುಷಾರ್ ಗಿರಿನಾಥ್ ಅವರು ಕಳೆದ ಎರಡೂವರೆ ವರ್ಷಗಳಿಂದ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತುಷಾರ್ ಗಿರಿನಾಥ್ ಅವರು ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಮುಖ್ಯಸ್ಥರಾಗಿದ್ದರು. ನಗರ ಆಡಳಿತದ ಬಗ್ಗೆ ಅವರ ಆಳವಾದ ತಿಳುವಳಿಕೆ, ನಗರಾಭಿವೃದ್ಧಿ ಇಲಾಖೆ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸುವ ಆಶಯ ಜನರಲ್ಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:31 pm, Mon, 28 April 25







