TV9 Impact: ಟಿವಿ9 ವರದಿ ಬೆನ್ನಲ್ಲೇ ಮಕ್ಕಳ ಮೊಬೈಲ್ ಬಳಕೆ ಸಮಸ್ಯೆಗಳ ಬಗ್ಗೆ ಅಧ್ಯಯನಕ್ಕೆ ಇಳಿದ ಸರ್ಕಾರ, ತಜ್ಞರ ಸಮಿತಿ ರಚನೆ

ಮಕ್ಕಳು ಅತಿ ಹೆಚ್ಚು ಮೊಬೈಲ್ ಬಳಸುವುದರಿಂದ ಉಂಟಾಗುವ ಡಿಸಾರ್ಡರ್ ಸಮಸ್ಯೆಗಳ ಕುರಿತು ಟಿವಿ9 ಇದೇ ತಿಂಗಳ 15ರಂದು ಸುದ್ದಿ ಪ್ರಸಾರ ಮಾಡಿತ್ತು. ಈಗ ಮೊಬೈಲ್ ಗೀಳು ಹಾಗೂ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.

TV9 Impact: ಟಿವಿ9 ವರದಿ ಬೆನ್ನಲ್ಲೇ ಮಕ್ಕಳ ಮೊಬೈಲ್ ಬಳಕೆ ಸಮಸ್ಯೆಗಳ ಬಗ್ಗೆ ಅಧ್ಯಯನಕ್ಕೆ ಇಳಿದ ಸರ್ಕಾರ, ತಜ್ಞರ ಸಮಿತಿ ರಚನೆ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ಆಯೇಷಾ ಬಾನು

Updated on:Jul 22, 2023 | 7:57 AM

ಬೆಂಗಳೂರು, ಜುಲೈ 22: ಮೊಬೈಲ್ ಬಳಕೆಯಿಂದ ಮಕ್ಕಳ(Children Mobile Use) ಮೇಲೆ ಉಂಟಾಗುತ್ತಿರುವ ದೈಹಿಕ ಸಮಸ್ಯೆಗಳ ಬಗ್ಗೆ ಕೆಲ ದಿನಗಳ ಹಿಂದೆ ಟಿವಿ9 ಕನ್ನಡ ಮಾಧ್ಯಮ ಸುದ್ದಿ ಪ್ರಸಾರ ಮಾಡಿತ್ತು(Tv9 Kannada). ಈ ಬೆನ್ನಲ್ಲೇ ಈಗ ಮೊಬೈಲ್ ಗೀಳು ಹಾಗೂ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಮಕ್ಕಳ ಹಕ್ಕುಗಳ ಆಯೋಗವು(Karnataka State Commission for Protection of Child Rights) ಮೊಬೈಲ್ ಗೀಳು ಹಾಗೂ ಕ್ರಮಗಳ ಕುರಿತು ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಿದೆ.

ಮಕ್ಕಳು ಅತಿ ಹೆಚ್ಚು ಮೊಬೈಲ್ ಬಳಸುವುದರಿಂದ ಉಂಟಾಗುವ ಡಿಸಾರ್ಡರ್ ಸಮಸ್ಯೆಗಳ ಕುರಿತು ಟಿವಿ9 ಇದೇ ತಿಂಗಳ 15ರಂದು ಸುದ್ದಿ ಪ್ರಸಾರ ಮಾಡಿತ್ತು. ಟಮರ್ಸ್ ಡಿಸಾರ್ಡರ್ ಸೇರಿದಂತೆ ದೈಹಿಕ ಡಿಸಾರ್ಡರ್ ಗೆ ಮಕ್ಕಳು ಬಲಿಯಾಗುತ್ತಿರುವ ಬಗ್ಗೆ ವರದಿ ಪ್ರಸಾರ ಮಾಡಿತ್ತು. ಈ ವರದಿಯ ಬಳಿಕ ಶಿಕ್ಷಣ ಇಲಾಖೆ ಹಾಗೂ ಮಕ್ಕಳ ಹಕ್ಕುಗಳ ಆಯೋಗಕ್ಕೂ ಸಾಕಷ್ಟು ದೂರುಗಳು ಬಂದಿವೆ. ಈ ಹಿನ್ನಲೆ ಈ ಬಗ್ಗೆ ಅಧ್ಯಯನ ನಡೆಸಲು ಇಲಾಖೆ ಮುಂದಾಗಿದೆ. ಅಲ್ಲದೆ ಸಮಸ್ಯೆ ಬಗ್ಗೆ ಎಚ್ಚೆತ್ತುಗೊಂಡ ಸರ್ಕಾರ ಮಕ್ಕಳ ಮೊಬೈಲ್ ಗೀಳು ಕಡಿಮೆ ಮಾಡಲು ಪ್ಲಾನ್ ಮಾಡಿದೆ.

ಇದನ್ನೂ ಓದಿ: Viral Video: ಮೊಬೈಲ್​ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾಬಾಲಕಿ

ಮಕ್ಕಳ ಮೊಬೈಲ್ ಗೀಳಿಗೆ ಕಾರಣ ಏನು? ಮೊಬೈಲ್ ಗೀಳು ಕಂಟ್ರೋಲ್ ಹಾಗು ದೈಹಿಕ ಸಮಸ್ಯೆ ನಿವಾರಿಸಲು ಯಾವೆಲ್ಲ ಪ್ಲಾನ್ ಮಾಡಬಹುದು ಎಂಬ ಬಗ್ಗೆ ವರದಿ ನೀಡಲು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಶಿಕ್ಷಣ ಇಲಾಖೆ, ಮಕ್ಕಳ ಹಕ್ಕುಗಳ ಆಯೋಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ವಿಭಾಗ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ 9 ವಿಭಾಗಗಳ ತಜ್ಞರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ಈ ಸಮಿತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಕ್ಕಳ ಮೊಬೈಲ್ ಗೀಳಿನ ಬಗ್ಗೆ ಅಧ್ಯಯನ ಮಾಡಲಿದೆ. ಸಮಗ್ರ ಅಧ್ಯಯನದ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಮುಂದಿನ ಮೂರು ತಿಂಗಳು ಈ ಸಮಿತಿ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಲಿದೆ. ಮಕ್ಕಳ ಹಕ್ಕುಗಳ ತಜ್ಞರ ವರದಿ ಆಧರಿಸಿ ಮೊಬೈಲ್ ಗೀಳು ಕಡಿಮೆ ಮಾಡಲು ಕ್ರಮಕ್ಕೆ ಅಥವಾ ಸೂಕ್ತ ತಂತ್ರಜ್ಞಾನ ಸಿದ್ಧಪಡಿಸಲು ಸರ್ಕಾರ ಮುಂದಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:32 am, Sat, 22 July 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?