Tv9 Impact: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್

2021ರಲ್ಲಿ ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಜಾರಿ ಮಾಡಿದ್ದ ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಆಟೋ ,ಟ್ಯಾಕ್ಸಿ, ಮ್ಯಾಕ್ಸಿ,ಕ್ಯಾಬ್ ಚಾಲಕರು ಬೈಕ್ ಟ್ಯಾಕ್ಸಿ ವಿರುದ್ದ ಸಿಡಿದೆದ್ದಿದ್ದರು.

Tv9 Impact: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್
ಸಾಂದರ್ಭಿಕ ಚಿತ್ರ
Follow us
Kiran Surya
| Updated By: ಆಯೇಷಾ ಬಾನು

Updated on:Mar 08, 2024 | 10:44 AM

ಬೆಂಗಳೂರು, ಮಾರ್ಚ್​.08: ಟಿವಿ9 ನ್ಯೂಸ್​ನ ಬಿಗ್​ ಇಂಪ್ಯಾಕ್ಟ್​. ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ (Karnataka Electric Bike Taxi Scheme). ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ (BJP) ಸರ್ಕಾರ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗೆ 2021ರ ಜುಲೈ 14ರಂದು ಅನುಮತಿ ನೀಡಿತ್ತು. ಆದರೆ ಇಂದಿನ ಕಾಂಗ್ರೆಸ್ (Congress) ಸರ್ಕಾರ ಹಿಂದಿನ ಸರ್ಕಾರ ನೀಡಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ವಾಪಸ್ಸು ಪಡೆದುಕೊಂಡಿದೆ. ಬಿಎಂಆರ್​ಸಿಎಲ್ (BMRCL) ಎಂಡಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯು ಮೋಟಾರ್ ವಾಹನ ಕಾಯ್ದೆಗೆ ಪೂರಕವಾಗಿಲ್ಲ ಎಂದು ತಿಳಿಸಿದೆ. ಹೀಗಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಆಟೋ ,ಟ್ಯಾಕ್ಸಿ, ಮ್ಯಾಕ್ಸಿ,ಕ್ಯಾಬ್ ಚಾಲಕರು ಬೈಕ್ ಟ್ಯಾಕ್ಸಿ ವಿರುದ್ದ ಸಿಡಿದೆದ್ದಿದ್ದರು. ಮಹಿಳೆಯರಿಗೆ ಅಸುರಕ್ಷಿತವಾದ ಯೋಜನೆ ಅಂತಾ ಹೇಳಲಾಗಿತ್ತು. ಸದ್ಯ ಈಗ ಕಾಂಗ್ರೆಸ್ ಸರ್ಕಾರ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಪುತ್ರ ಯತೀಂದ್ರಗೆ ಘೇರಾವ್, ಗ್ರಾಮಸ್ಥರ ಮಾತಿನ ಚಕಮಕಿ

ಏನಿದು ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ 2021?

2021ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌. ಯಡಿಯೂರಪ್ಪ ಅವರು ‘ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ- 2021’ ಅನ್ನು ಪ್ರಾರಂಭಿಸಿದರು. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ಸಾರ್ವಜನಿಕರು ತಮ್ಮ ಮನೆಗಳಿಂದ ಬಸ್ ನಿಲ್ದಾಣಗಳು, ರೈಲ್ವೆ ಮತ್ತು ಮೆಟ್ರೋ ಸ್ಟೇಷನ್‌ಗಳಿಗೆ ಸುಲಭವಾಗಿ ಮತ್ತು ಕಡಿಮೆ ಸಮಯದಲ್ಲಿ ತೆರಳುವಂತೆ ಮಾಡುವುದು. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಪ್ರಯಾಣದ ಸಮಯ ಮತ್ತು ಅನನುಕೂಲತೆ ಕಡಿಮೆ ಮಾಡುವುದು. “ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ 2021 ಸಾರ್ವಜನಿಕ ಸಾರಿಗೆ ಮತ್ತು ದೈನಂದಿನ ಪ್ರಯಾಣಿಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿತ್ತು.

ಆದರೆ ಇತ್ತೀಚೆಗೆ ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ ಮಹಿಳೆಯರಿಗೆ ಅಸುರಕ್ಷಿತ ಎಂಬ ಕೂಗು ಎದ್ದಿತ್ತು. ಈ ಬಗ್ಗೆ ಟಿವಿ9 ಕೂಡ ಸುದ್ದಿ ಬಿತ್ತರಿಸಿ ಸರ್ಕಾರದ ಗಮನ ಸೆಳೆದಿತ್ತು. ಅಲ್ಲದೆ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಸದ್ಯ ಈಗ ಸರ್ಕಾರ ಈ ಯೋಜನೆಯನ್ನು ರದ್ದು ಮಾಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:44 am, Fri, 8 March 24

ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ