AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಹೈಕಮಾಂಡ್ ನಡೆಗೆ ಕೈ ನಾಯಕರು ಗರಂ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Karnataka News Today Live Updates: ಕಾಂಗ್ರೆಸ್‌ನಲ್ಲಿ ಸಂಪುಟ ಅಸಮಾಧಾನ ಹಾಗೂ ಆಡಿಯೋ ಲೀಕ್ ಸಂಚಲನ. ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ 6 ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ. ತಮಿಳುನಾಡು ಸರ್ಕಾರದ ವಿರುದ್ಧ ಉದಯನಿಧಿ ಸ್ಟಾಲಿನ್ ಆರೋಪ. ದೇಶ-ವಿದೇಶ, ಕ್ರೀಡೆ ಹಾಗೂ ಸಿನಿಮಾದ ಕ್ಷಣಕ್ಷಣದ ಅಪ್ಡೇಟ್ ಇಲ್ಲಿದೆ.

TV9 Kannada News Live: ಹೈಕಮಾಂಡ್ ನಡೆಗೆ ಕೈ ನಾಯಕರು ಗರಂ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಹೈಕಮಾಂಡ್ ನಡೆಗೆ ಕೈ ನಾಯಕರು ಗರಂ!
ಭಾವನಾ ಹೆಗಡೆ
|

Updated on:Aug 05, 2026 | 9:17 AM

Share

LIVE NEWS & UPDATES

  • 05 Aug 2026 09:17 AM (IST)

    2,000 ರೂ. ಮೇಲ್ಪಟ್ಟ UPI ಪಾವತಿಗೆ ಶುಲ್ಕ

    2,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 0.3% ರಿಂದ 0.5% ರಷ್ಟು ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸಲು ಕೇಂದ್ರ ಸರ್ಕಾರ ಕಾನೂನು ತಿದ್ದುಪಡಿಗೆ ಚಿಂತಿಸಿದೆ. ರೂ. 1.5 ಕೋಟಿಗಿಂತ ಹೆಚ್ಚು ವಹಿವಾಟು ನಡೆಸುವ ದೊಡ್ಡ ವ್ಯಾಪಾರಿಗಳಿಗೆ ಮಾತ್ರ ಇದು ಅನ್ವಯಿಸಲಿದ್ದು, ಸಾಮಾನ್ಯ ಗ್ರಾಹಕರು ಮತ್ತು ಸಣ್ಣ ವರ್ತಕರಿಗೆ ಸಂಪೂರ್ಣ ವಿನಾಯಿತಿ ಸಿಗಲಿದೆ.

  • 05 Aug 2026 09:17 AM (IST)

    ಶಾಸಕ ಸುಬ್ಬಾರೆಡ್ಡಿ ಬೆಂಬಲಿಗರಿಂದ 3 ತಾಲೂಕು ಬಂದ್!

    ಬಾಗೇಪಲ್ಲಿ ಶಾಸಕ S.N.ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ಆಕ್ರೋಶಗೊಂಡ ಕಾಂಗ್ರೆಸ್ ಮುಖಂಡರು ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕು ಬಂದ್‌ಗೆ ಕರೆ ನೀಡಿದ್ದಾರೆ. ಪ್ರತಿಭಟನೆ ವೇಳೆ ಅಂಬರೀಶ್ ಎಂಬ ಬೆಂಬಲಿಗ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ಕೂಡಲೇ ಆತನನ್ನು ವಶಕ್ಕೆ ಪಡೆದಿದ್ದಾರೆ.

  • 05 Aug 2026 09:16 AM (IST)

    ಬೋರ್‌ವೆಲ್ ಕೇಬಲ್, ಶೀಟ್ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ!

    ಮೋಜು-ಮಸ್ತಿಗಾಗಿ ಕಟ್ಟಡದ ಸೆಂಟ್ರಿಂಗ್ ಶೀಟ್, ಬೋರ್‌ವೆಲ್ ಕೇಬಲ್ ಹಾಗೂ ಬೈಕ್ ಕಳ್ಳತನ ಮಾಡುತ್ತಿದ್ದ ಬಡಗರಹಳ್ಳಿಯ ಪುನೀತ್ ಗೌಡ ಮತ್ತು ಕುಮಾರ್‌ನನ್ನು ತುರುವೇಕೆರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 5 ಲಕ್ಷ ರೂ. ಮೌಲ್ಯದ 289 ಸೆಂಟ್ರಿಂಗ್ ಶೀಟ್, 40 ಕೆಜಿ ಕೇಬಲ್, ಬೈಕ್ ಮತ್ತು ಗುಡ್ಸ್ ವಾಹನ ಜಪ್ತಿ ಮಾಡಲಾಗಿದ್ದು, ಒಟ್ಟು 7 ಪ್ರಕರಣಗಳು ಬಯಲಾಗಿವೆ.

  • 05 Aug 2026 09:16 AM (IST)

    ಕಾರ್ಖಾನೆಯಲ್ಲಿ ಕೆಮಿಕಲ್ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವು!

    ಯಾದಗಿರಿಯ ಕಡೇಚೂರ್ ಕೈಗಾರಿಕಾ ಪ್ರದೇಶದ ‘ಸಿಲ್ ಲ್ಯಾಬೋರೇಟರಿ’ ಔಷಧ ಕಾರ್ಖಾನೆಯಲ್ಲಿ ಕೆಮಿಕಲ್ ಸೋರಿಕೆಯಾಗಿ, ವಿಷಗಾಳಿ ಉಸಿರಾಡಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಅಸ್ವಸ್ಥಗೊಂಡು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

Breaking News Today Live Updates in Kannada: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಚನೆ ಅಸಮಾಧಾನ ತೀವ್ರಗೊಂಡಿದ್ದು, ಶಾಸಕ ಆರ್. ಬಿ. ತಿಮ್ಮಾಪುರ ಹಾಗೂ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ‘ಪೇಮೆಂಟ್ ಸೀಟ್’ ಕುರಿತ ಆಡಿಯೋ ವೈರಲ್ ಆಗಿದೆ. ಮತ್ತೊಂದೆಡೆ, ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಇಂದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 6 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ನಡುವೆ, ತಮಿಳುನಾಡಿನಲ್ಲಿ ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿರುವ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್, ಟಿವಿಕೆ ಸರ್ಕಾರ ತಮ್ಮನ್ನು ಬಂಧಿಸಿ ಭಯೋತ್ಪಾದಕನಂತೆ ನಡೆಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Published On - Aug 05,2026 9:15 AM

Follow Us
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ