TV9 Kannada News Live: ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕಠಿಣ ಕಾನೂನು ರೂಪಿಸ್ತೇವೆ ಎಂದು ಮೋದಿ ಭರವಸೆ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
Karnataka News Today Live Updates: ನೀಟ್ ಅಕ್ರಮದ ಕುರಿತು ಪ್ರಧಾನಿ ಮೋದಿ ವಿಡಿಯೋ ಸಂದೇಶ ಹಾಗೂ ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯದ ಲೇಟೆಸ್ಟ್ ಅಪ್‌ಡೇಟ್ಸ್ ಇಲ್ಲಿದೆ. ಜೊತೆಗೆ ಉತ್ತರ ಕನ್ನಡದಲ್ಲಿ ಭಾರಿ ಮಳೆ, ಶಾಲೆಗಳಿಗೆ ರಜೆ ಪ್ರಕಟ ಸೇರಿದಂತೆ ರಾಜ್ಯ ಹಾಗೂ ದೇಶದ ಪ್ರಮುಖ ಸುದ್ದಿಗಳ ಕ್ಷಣಕ್ಷಣದ ಲೈವ್ ಅಪ್‌ಡೇಟ್‌ಗಳನ್ನು ಪಡೆಯಿರಿ.

LIVE NEWS & UPDATES
-
ಕೇಂದ್ರ ಸಚಿವರ ಜೊತೆ ಇಂದು ‘ಸಿಜೆಪಿ’ ಭೇಟಿ
ಇಂದು ಮಧ್ಯಾಹ್ನ 12:30ಕ್ಕೆ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಕೇಂದ್ರ ಸಚಿವರನ್ನು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಿಯೋಗ ಭೇಟಿಯಾಗಲಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಶಾಂತಿಯುತ ಧರಣಿ ಜೊತೆಗೆ ದೇಶಾದ್ಯಂತ ಪ್ರತಿಭಟನೆಗೆ CJP ಕರೆ ನೀಡಿದೆ.
-
ನೀಟ್ ಅಕ್ರಮ ತಡೆಗೆ ಕೇಂದ್ರದ ಮಾಸ್ಟರ್ ಪ್ಲಾನ್: ಕಠಿಣ ಮಸೂದೆಗೆ ಇಂದು ಸಂಪುಟ ಸಮ್ಮತಿ!
ನೀಟ್ ಪೇಪರ್ ಲೀಕ್ ತಡೆಯಲು ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಇಂದು ಕಠಿಣ ಕರಡು ಮಸೂದೆಗೆ ಅಂತಿಮ ರೂಪ ಸಿಗಲಿದೆ. ಅಪರಾಧಿಗಳಿಗೆ ತಕ್ಷಣ ಶಿಕ್ಷೆ ನೀಡಲು ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚನೆ ಸಾಧ್ಯತೆಯಿದ್ದು, ಈ ಮುಂಗಾರು ಅಧಿವೇಶನದಲ್ಲೇ ಮಸೂದೆ ಮಂಡಿಸಿ ಪಾಸ್ ಮಾಡಲು ಕೇಂದ್ರ ನಿರ್ಧರಿಸಿದೆ.
-
Breaking News Today Live Updates in Kannada: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET) ಪರೀಕ್ಷಾ ಅಕ್ರಮದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರ ವೇದನೆಗೆ ಧ್ವನಿಯಾಗಿದ್ದಾರೆ. ಇನ್ನೊಂದೆಡೆ, ನೀಟ್ ಅಕ್ರಮ ಖಂಡಿಸಿ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಲಡಾಖ್‌ನ ಸೋನಂ ವಾಂಗ್ಚುಕ್, ಕೇಂದ್ರ ಸಚಿವರ ಸಮ್ಮುಖದಲ್ಲಿ ಸತ್ಯಾಗ್ರಹ ಅಂತ್ಯಗೊಳಿಸಿದ್ದಾರೆ. ಇತ್ತ ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳ ಶಾಲೆ-ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ರಜೆ ಪ್ರಕಟಿಸಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Jul 24,2026 8:22 AM




