
Breaking News Today Live Updates in Kannada: ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ ನೀಡಿ, ಆಲೂಗಡ್ಡೆ ಮೂಟೆ ಮೇಲೆ ಕುಳಿತು ರೈತರು, ವರ್ತಕರು ಹಾಗೂ ಮಹಿಳಾ ಕಾರ್ಮಿಕರ ಸಮಸ್ಯೆ ಆಲಿಸಿದರು. ಇತ್ತ ಮಂಗಳೂರಿನಲ್ಲಿ, ಮತದಾರರ ಪಟ್ಟಿ ವ್ಯತ್ಯಾಸದ ನೆಪದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೀಡಲಾಗಿದ್ದ ಎಸ್‌ಐಆರ್ ನೋಟಿಸ್ ಅನ್ನು ವ್ಯಾಪಕ ಆಕ್ರೋಶದ ಬೆನ್ನಲ್ಲೇ ಅಧಿಕಾರಿಗಳು ನಾಲ್ಕೇ ಗಂಟೆಗಳಲ್ಲಿ ವಾಪಸ್ ಪಡೆದಿದ್ದಾರೆ. ಮತ್ತೊಂದೆಡೆ, ಪ್ಯಾರಿಸ್‌ನ ಐಫೆಲ್ ಟವರ್‌ನಲ್ಲಿ ಹಿಂದೂ ಧಾರ್ಮಿಕ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ನಿರ್ಬಂಧ ವಿಧಿಸಿದ್ದನ್ನು ಖಂಡಿಸಿ ನೌಕರರು ಮುಷ್ಕರ ನಡೆಸಿದ್ದರಿಂದ ಟವರ್ ಬಂದ್ ಆಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಿಂಗ ತಾರತಮ್ಯದ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿಯಿಂದ ಬಳ್ಳಾರಿ ಚಲೋ ಇಂದು (ಸೆಪ್ಟೆಂಬರ್ 08) 8ನೇ ದಿನದ ಪಾದಯಾತ್ರೆ ಕುಡುತಿನಿ ಗ್ರಾಮದಲ್ಲಿ ಅಂತ್ಯವಾಗಿದೆ. ಇಂದು 14 ಕಿಲೋ ಮೀಟರ್ ಕ್ರಮಿಸಿದ ಬಿಜೆಪಿ ನಾಯಕರ ಪಾದಯಾತ್ರೆ, ನಾಳೆ (ಸೆ.09) ಬಳ್ಳಾರಿ ನಗರ ಪ್ರವೇಶಿಸಲಿದೆ.
ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವತಿಯಿಂದ ವಿಶೇಷ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕರು ಮಾರ್ಗಸೂಚಿ ಹೊರಡಿಸಿ ಆದೇಶಿಸಿದ್ದು, ಗಣೇಶ ಪ್ರತಿಷ್ಠಾಪನೆಗಾಗಿ ವಿದ್ಯುತ್ ಸಂಪರ್ಕ ಪಡೆಯಲು ಎನ್‌ಒಸಿ (NOC)ಗಾಗಿ ಅರ್ಜಿ ಸಲ್ಲಿಸಿದ ಬಳಿಕ ಸ್ಥಳೀಯ ಕಾರ್ಯನಿರ್ವಾಹಕ ಇಂಜಿನಿಯರ್‌ಗಳಿಂದ ಸ್ಥಳ ಪರಿಶೀಲನೆ ನಡೆಸಲಾಗುತ್ತದೆ. ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವ ಮುನ್ನ ಸ್ಥಳೀಯ ನಾಗರಿಕ ಪ್ರಾಧಿಕಾರಗಳು ಅಥವಾ ಪಾಲಿಕೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಅನುಮತಿ ಇಲ್ಲದಿದ್ದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ, ಗಣೇಶ ಪ್ರತಿಷ್ಠಾಪನೆ ಸ್ಥಳದ ಪರಿಶೀಲನೆ ಬಳಿಕ ವಿದ್ಯುತ್ ಸಮರ್ಪಕತೆ ಹಾಗೂ ಸುರಕ್ಷತೆಗೆ ಸಂಬಂಧಿಸಿದ ವರದಿ ಸಲ್ಲಿಸುವುದು ಕಡ್ಡಾಯ ಎಂದು ಬೆಸ್ಕಾಂ ಸೂಚಿಸಿದೆ.
ಅಲ್ಪಸಂಖ್ಯಾತರ ಸಮಸ್ಯೆ ಆಲಿಸಲು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಶಿಕ್ಷಣ & ಹಾಸ್ಟೆಲ್ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲು ಸಲಹೆ ಕೊಟ್ಟಿದ್ದಾರೆ. ರೇಷ್ಮೆ ಕೃಷಿ ಯೋಜನೆ ಪುನಃ ರೂಪಿಸಲು ಸೂಚನೆ. ಹಾಗೇ ಮೌಲಾನಾ ಆಜಾದ್ ಶಾಲೆ KPS ಮಾದರಿಗೆ ಉನ್ನತೀಕರಣ, ಹಾಸ್ಟೆಲ್ ಭೋಜನ ಸುಧಾರಣೆ. ಆಯ್ದ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಂದಲೇ ಮೆಸ್ ಹಾಗೂ ಉತ್ತಮ ಯೋಜನೆ ಕಾಲಮಿತಿಯಲ್ಲಿ ಜಾರಿಗೊಳಿಸಲು ಸೂಚನೆ ನೀಡಿದ್ದಾರೆ.
ಮೆಟ್ರೋ ಪ್ರಯಾಣಿಕರಿಗಾಗಿ 200 ಹೊಸ ಎಸಿ ಬಸ್ಸುಗಳ ವ್ಯವಸ್ಥೆ ಮಾಡಲಿರುವ ಬಿಎಂಟಿಸಿ. ಕೇಂದ್ರ ಸರ್ಕಾರದ ಪಿಎಂ ಇ-ಡ್ರೈವ್ ಯೋಜನೆಯಡಿ ಬಿಎಂಟಿಸಿಗೆ ಬರುತ್ತಿರುವ 4500 ಎಲೆಕ್ಟ್ರಿಕ್ ಬಸ್ ಗಳ ಪೈಕಿ 200 ಮಿನಿ ಬಿಎಂಟಿಸಿ ಎಸಿ ಬಸ್ ಗಳನ್ನು ಎಲ್ಲಾ ಮೆಟ್ರೋ ರೈಲು ನಿಲ್ದಾಣಗಳ ಸುತ್ತಮುತ್ತಲಿನ 5 ಕಿಲೋಮೀಟರ್ ವ್ಯಾಪ್ತಿಯಿಂದ ಸಂಪರ್ಕ ಕಲ್ಪಿಸಲು ಬಿಎಂಟಿಸಿ ಪ್ಲ್ಯಾನ್. ಇದರಿಂದ ಬಡಾವಣೆಗಳ ಕಟ್ಟಕಡೆಯ ಸ್ಥಳಗಳಿಂದ ಮೆಟ್ರೋ ರೈಲು ನಿಲ್ದಾಣಗಳಿಗೆ ಈ ಬಸ್ ಗಳು ಸಂಪರ್ಕ ಕಲ್ಪಿಸಲಿವೆ ಮತ್ತು ಇದರಿಂದ ಬೆಂಗಳೂರಿಗರಿಗೆ ಸಹಾಯ ಆಗಲಿದೆ.
ದರ್ಶನ್ ಅಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ರಾವ್ ಮಾಫಿ ಸಾಕ್ಷಿ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ದರ್ಶನ್ ಅರ್ಜಿ ಭಾಗಶಃ ಪುರಸ್ಕರಿಸಿದ ಹೈಕೋರ್ಟ್, 59ನೇ ಸಿಸಿಹೆಚ್ ಕೋರ್ಟ್ ಆದೇಶ ರದ್ದುಪಡಿಸಿದೆ. ಅಲ್ಲದೇ ಒಂದು ವಾರದಲ್ಲಿ ಮರು ಆದೇಶ ಹೊರಡಿಸಲು 59ನೇ ಸಿಸಿಹೆಚ್ ಕೋರ್ಟ್ಗೆ ಹೈಕೋರ್ಟ್ ಸೂಚನೆ ನೀಡಿದೆ. ಹೊಸದಾಗಿ ವಿಚಾರಣೆ ನಡೆಸುವ ಅಗತ್ಯವಿಲ್ಲ. ಕೇವಲ ಹೊಸದಾಗಿ ಆದೇಶವನ್ನಷ್ಟೇ ಮಾಡಬೇಕು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಸ್ಪಷ್ಟನೆ ನೀಡಿದೆ.
ಬಿಜೆಪಿಯ ಬಳ್ಳಾರಿ ಸಮಾವೇಶಕ್ಕೆ ಕೊನೆಗೂ ಜಿಲ್ಲಾಡಳಿತ ಅನುಮತಿ ನೀಡಿದೆ. ಕಾಂಗ್ರೆಸ್ ಸರ್ಕಾರದ ವಿರದ್ಧ ಲಿಂಗಸ್ಗೂರಿನಿಂದ ಬಳ್ಳಾರಿವರೆಗೆ ಬಿಜೆಪಿ ಪಾದಯಾತ್ರೆ ನಡೆಸಿದ್ದು, ಸೆಪ್ಟೆಂಬರ್ 10ರಂದು ಸಮಾರೋಪ ಸಮಾರಂಭಕ್ಕೆ ಶಿಕ್ಷಣ ಇಲಾಖೆ ಅನುಮತಿ ನಿಕಾರಿಸಿತ್ತು. ಇದರಿಂದ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಇದೀಗ ಬಳ್ಳಾರಿಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಸಮಾವೇಶಕ್ಕೆ ಅನುಮತಿ ಜಿಲ್ಲಾಡಳಿ ಅನುಮತಿ ನೀಡಿದೆ. ಕಳೆದ ಒಂದು ವಾರದಿಂದ ಪರ್ಮಿಷನ್ ಕೊಡದೇ ನಿರಾಕರಿಸಿದ್ದ ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಕೆಂಡವಾಗಿದ್ದರು. ಈ ಸಂಬಂಧ ಜನಾರ್ದನ ರೆಡ್ಡಿ ನೆತೃತ್ವದಲ್ಲಿ ಜಿಲ್ಲಾಧಿಕಾರಿ ಅವರನ್ನ ಭೇಟಿ ಮಾಡಿ ಚರ್ಚೆ ಮಾಡಿದ್ದು, ಸಾಕಷ್ಟು ಆಕ್ರೋಶದ ಬಳಿಕ ಅಂತಿಮವಾಗಿ ಅನುಮತಿ ನೀಡಿಲಾಗಿದೆ.
ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮತ್ತೆ ಸಿಡಬ್ಲ್ಯೂಆರ್ ಸಿ ಕರ್ನಾಟಕ್ಕೆ ಸೂಚಿಸಿದೆ. ಇದರಿಂದ ಮಂಡ್ಯದಲ್ಲಿ ಮತ್ತೆ ಸಾರ್ವಜನಿಕರ ಆಕ್ರೋಶದ ಕಟ್ಟೆ ಹೊಡೆದಿದೆ. ಮಂಡ್ಯ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆಗಿಳಿದಿದ್ದು, CWRC, CWMA ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹಾಕುತ್ತಿವೆ. ಅಲ್ಲದೇ ತಮಿಳುನಾಡಿಗೆ ನೀರು ಬಿಡಬಾರದು ಎಂದು ಒತ್ತಾಯಿಸಿ ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆದಿದೆ.
ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆಪ್ಟೆಂಬರ್ 10ಕ್ಕೆ 100 ದಿನಗಳು ಪೂರೈಸಲಿವೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10ರಂದು ಬೆಳಿಗ್ಗೆ 10:30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸರಳ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ 100ರಿಂದ 150 ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ ನಡೆಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಬಳಿ ಕಲ್ಲು ಕ್ವಾರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿಯಾಗಿ ಪಾದಚಾರಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮುದ್ದನಾಯಕನಹಳ್ಳಿ ಮೂಲದ ರವಿ (23) ಎಂದು ಗುರುತಿಸಲಾಗಿದೆ.
‘ಚೌಕಿದಾರ್ ಚೋರ್ ಹೈ’ ಹೇಳಿಕೆ ಸಂಬಂಧ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆ ರದ್ದುಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. 2018ರಲ್ಲಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತ ಮಹೇಶ್ ಶ್ರೀಶ್ರೀಮಾಲ್ ದಾಖಲಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕನಿಗೆ ಹಿನ್ನಡೆಯಾಗಿದೆ.
ಹಿರಿಯ ನಟಿ ಎಂ.ಎನ್. ಲಕ್ಷ್ಮೀದೇವಿ ನಿಧನರಾಗಿದ್ದಾರೆ ಎಂಬುದು ಸುಳ್ಳು ಸುದ್ದಿಯಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ಮೊಮ್ಮಗಳು ದೀಪಿಕಾ ಶರಣ್ ಸ್ಪಷ್ಟಪಡಿಸಿದ್ದಾರೆ. ಏಳು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ಕಲಾವಿದೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಸುಳ್ಳು ವದಂತಿಗಳನ್ನು ಹರಡದಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯು 8ನೇ ದಿನಕ್ಕೆ ಕಾಲಿಟ್ಟಿದ್ದು, ಕುರುಗೋಡು ತಾಲೂಕಿನ ತಿಮ್ಮಲಾಪುರ ತಲುಪಿದೆ. ತಿಮ್ಮಲಾಪುರದಲ್ಲಿ ಪಾದಯಾತ್ರಿಗಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಕುಡಿತಿನಿಯತ್ತ ಪಾದಯಾತ್ರೆ ಮುಂದುವರಿಯಲಿದೆ.
ನೇಪಾಳದಲ್ಲಿ ಸಂಭವಿಸಿದ ರಣಭೀಕರ ಪ್ರವಾಹ ಹಾಗೂ ಭೂಕುಸಿತಕ್ಕೆ ತತ್ತರಿಸಿರುವ ಜನರ ಸ್ಥಿತಿ ಶೋಚನೀಯವಾಗಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 1,357ಕ್ಕೆ ಏರಿಕೆಯಾಗಿದ್ದು, ನಾಪತ್ತೆಯಾಗಿರುವ 5 ಸಾವಿರಕ್ಕೂ ಹೆಚ್ಚು ಜನರಿಗಾಗಿ ರಕ್ಷಣಾ ಪಡೆಗಳು ತೀವ್ರ ಹುಡುಕಾಟ ನಡೆಸುತ್ತಿವೆ. ಬಲಿಪಶುಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಎಂ.ಎನ್. ಲಕ್ಷ್ಮೀದೇವಿ (92) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬ್ಲ್ಯಾಕ್ ಆ್ಯಂಡ್ ವೈಟ್ ಯುಗದಿಂದ ಬಣ್ಣದ ಲೋಕದಲ್ಲಿದ್ದ ಅವರು ‘ಶ್ರೀನಿವಾಸ ಕಲ್ಯಾಣ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿ, ‘ಕಳ್ಳರ ಕಳ್ಳ’ ಚಿತ್ರಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದರು. ‘ಭಕ್ತ ಕನಕದಾಸ’, ‘ಬಂಗಾರದ ಮನುಷ್ಯ’ ಸೇರಿದಂತೆ 1000ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಅವರ ಅಗಲಿಕೆಗೆ ಸ್ಯಾಂಡಲ್‌ವುಡ್ ಕಂಬನಿ ಮಿಡಿದಿದೆ.
ಕಳೆದ 15 ವರ್ಷಗಳಿಂದ ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿಯಾಗಿದ್ದು, 10 ವರ್ಷಗಳಿಂದ ಸ್ಟಾರ್ ಪ್ರಚಾರಕನಾಗಿ ಕೆಲಸ ಮಾಡಿದ್ದೇನೆ ಎಂದು ನಟ ಸಾಧುಕೋಕಿಲ ಹೇಳಿದ್ದಾರೆ. 5 ವರ್ಷಗಳಿಂದ ವಿಧಾನ ಪರಿಷತ್ (ಎಂಡಿಸಿ) ಸದಸ್ಯ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು, ಈ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಖರ್ಗೆ ಅವರಿಗೆ ಮನವಿ ಮಾಡಿದ್ದೇನೆ ಎಂದಿದ್ದಾರೆ.
ಮಾತು ಕೇಳದ ಅಧಿಕಾರಿಗಳಿಗೆ ಫೈರ್ ಮಾಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಯಲಬುರ್ಗಾದಲ್ಲಿ ಎಚ್ಚರಿಸಿದ್ದಾರೆ. ತಾವು ಬ್ಯುಸಿಯಿರುವುದರಿಂದ ತಮ್ಮ ಪಿಆರ್‌ಒ ರೀತಿ ಕೆಲಸ ಮಾಡುವಂತೆ ತಹಶೀಲ್ದಾರ್‌ಗೆ ಸೂಚಿಸಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದರು.
108 ಆ್ಯಂಬುಲೆನ್ಸ್ ತುರ್ತು ಸೇವೆಗೆ ಅಡ್ಡಿಪಡಿಸಿ ಮುಷ್ಕರ ನಡೆಸಿದರೆ ಕಂಪನಿ ಹಾಗೂ ಸಿಬ್ಬಂದಿ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಸಿದ್ದಾರೆ. ನೂತನವಾಗಿ 350 ಆ್ಯಂಬುಲೆನ್ಸ್ ಸೇರ್ಪಡೆಗೊಳಿಸಲಾಗುತ್ತಿದ್ದು, ಸ್ಥಗಿತಗೊಂಡಿರುವ NHM ಸಿಬ್ಬಂದಿ ವೇತನವನ್ನು ವಾರದಲ್ಲಿ ಪಾವತಿಸುವುದಾಗಿ ಭರವಸೆ ನೀಡಿದ್ದಾರೆ.
ಕನ್ನಡ ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ಕ್ಲಾಸಿಕ್ ಸಿನಿಮಾಗಳಲ್ಲೊಂದಾದ ‘ಅಮೆರಿಕ ಅಮೆರಿಕ’ ಚಿತ್ರದ ಸೀಕ್ವೆಲ್ ‘ಅಮೆರಿಕ ಅಮೆರಿಕ 2’ ಈ ವಾರ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ಪೃಥ್ವಿ ಅಂಬರ್, ಶಾನ್ವಿ ಶ್ರೀವಾಸ್ತವ ಹಾಗೂ ನಿರೂಪ್ ಭಂಡಾರಿ ಇದ್ದಾರೆ. ಸಿನಿಮಾ ರಿಲೀಸ್ ಸುದ್ದಿ ಕೇಳಿ ಸಿನಿಪ್ರಿಯರು ಖುಷಿಯಾಗಿದ್ದಾರೆ. ಈ ಚಿತ್ರದ ಪಾತ್ರವರ್ಗ ಈಗ ಎಲ್ಲಿದ್ದಾರೆ ಮತ್ತು ಏನು ಮಾಡುತ್ತಿದ್ದಾರೆ ಎನ್ನುವ ಕುತೂಹಲಕಾರಿ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್‌ನನ್ನು ಕಸ್ಟಡಿಗೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಇಂದು ಬಾಡಿ ವಾರಂಟ್ ಆಧಾರದ ಮೇಲೆ ಇಬ್ಬರನ್ನೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ, ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಕೋರಲಿದ್ದಾರೆ.
ಬೆಂಗಳೂರಿನ ಗಾಂಧಿನಗರದಲ್ಲಿ ಟ್ರಾಲಿ ಬ್ಯಾಗ್‌ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳನ್ನು ಡಿಆರ್‌ಐ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆಮೆ ಇಟ್ಟುಕೊಂಡರೆ ಅದೃಷ್ಟ ಬರಲಿದೆ ಎಂದು ನಂಬಿಸಿ 10,000 ರೂ.ಕ್ಕೆ ಮಾರಾಟ ಮಾಡಲು ಯತ್ನಿಸಿದ್ದ ಒಬ್ಬನನ್ನು ಬಂಧಿಸಲಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್, ಮಾರುಕಟ್ಟೆಯಲ್ಲಿ ಸಣ್ಣ ಮಕ್ಕಳಿಂದ ಕೂಲಿ ಕೆಲಸ ಮಾಡಿಸುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಕ್ಕಳಿಂದ ಕೆಲಸ ಮಾಡಿಸುವವರನ್ನು ಇಂದೇ ಬಂಧಿಸದಿದ್ದರೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನೇ ಅಮಾನತುಗೊಳಿಸುವುದಾಗಿ ಎಚ್ಚರಿಸಿದ ಅವರು, ಬಾಲಕಾರ್ಮಿಕ ಪದ್ಧತಿಯನ್ನು ತಕ್ಷಣವೇ ತಡೆಯಲು ಸೂಚಿಸಿದರು.
ಯಶವಂತಪುರ ಎಪಿಎಂಸಿಗೆ ಭೇಟಿ ನೀಡಿದ್ದ ಸಿಎಂ ಡಿ.ಕೆ. ಶಿವಕುಮಾರ್‌ಗೆ ವಿಜಯಪುರ ಜಿಲ್ಲೆಯ ಹಿಟ್ನಳ್ಳಿ ಗ್ರಾಮದ ರೈತ ಲಾಡ್ಲೆ ಮಶಾಕ್ ತಮ್ಮ ಅಳಲು ತೋಡಿಕೊಂಡರು. ರೈತರು ಸಕಾಲದಲ್ಲಿ ಹಣ ಪಾವತಿಸಿದ್ದರೂ ಸೊಸೈಟಿ ಕಾರ್ಯದರ್ಶಿ ಡಿಸಿಸಿ ಬ್ಯಾಂಕ್‌ಗೆ ಬೆಳೆ ವಿಮೆ ಹಣ ಕಟ್ಟದ ಹಿನ್ನೆಲೆ 93 ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ತಿಳಿಸಿದರು. ವಿಷಯ ಆಲಿಸಿದ ಸಿಎಂ, ಕೂಡಲೇ ಪರಿಶೀಲಿಸಿ ಕ್ರಮಕೈಗೊಳ್ಳಲು ಸೂಚಿಸಿದರು.
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿನ ರೈತರು ಮತ್ತು ವರ್ತಕರ ಬಳಿ ಮಾಹಿತಿ ಪಡೆದು ಅವರ ಸಮಸ್ಯೆಗಳನ್ನು ಆಲಿಸಿದರು. ವೀಡಿಯೋ ನೋಡಿ
ಸೆಪ್ಟೆಂಬರ್ 10ರಂದು ಬಿಜೆಪಿ ನಡೆಸಲು ಉದ್ದೇಶಿಸಿದ್ದ ಬಳ್ಳಾರಿ ಚಲೋ ಪಾದಯಾತ್ರೆಯ ಸಾರ್ವಜನಿಕ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮತಿ ನಿರಾಕರಿಸಿದೆ. ಎಕ್ಸ್ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಲಿಖಿತ ಸ್ಪಷ್ಟನೆ ನೀಡಿದ್ದು, ನಿಯಮ ಉಲ್ಲಂಘಿಸಿದರೆ ಪ್ರಾಂಶುಪಾಲರನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಇಲಾಖೆ ಎಚ್ಚರಿಸಿದೆ.
Published On - 10:49 am, Tue, 8 September 26