Breaking News In Kannada Live: ಶುದ್ಧೀಕರಣ ಹೇಳಿಕೆ ಹಿನ್ನೆಲೆ ರಾಹುಲ್ ಗಾಂಧಿ ವಿರುದ್ಧ ಅಟ್ರಾಸಿಟಿ ಕೇಸ್! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
TV9 Kannada News Today Live Updates: ಉತ್ತರಾಖಂಡದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾರವಾರ ಸಮುದ್ರದಲ್ಲಿ ಬೋಟ್ ಮುಳುಗಡೆಯಾಗಿ 24 ಮೀನುಗಾರರ ರಕ್ಷಣೆ ಮಾಡಲಾಗಿದ್ದು, 80 ಲಕ್ಷ ರೂ. ನಷ್ಟ ಸಂಭವಿಸಿದೆ. ಇತ್ತ ಬಿಗ್ ಬಾಸ್ 13 ಸಂಭಾವನೆ ವಿಚಾರವಾಗಿ ನಟ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಲೈವ್ ಅಪ್ಡೇಟ್ಸ್ ಇಲ್ಲಿದೆ.

LIVE NEWS & UPDATES
-
ದೊಡ್ಡಬಳ್ಳಾಪುರ: ರೈಲು ಢಿಕ್ಕಿ ಹೊಡೆದು ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ದುರ್ಮರಣ
ದೊಡ್ಡಬಳ್ಳಾಪುರ ರೈಲು ನಿಲ್ದಾಣದಲ್ಲಿ ಸ್ಕೈವಾಕ್ ಇಲ್ಲದ ಕಾರಣ ರೈಲು ಹಳಿ ದಾಟುತ್ತಿದ್ದಾಗ ವೇಗವಾಗಿ ಬಂದ ರೈಲು ಡಿಕ್ಕಿಯಾಗಿ ಪಾಲನಜೋಗಹಳ್ಳಿಯ ಇರ್ಫಾನಾ (46), ಮೊಮ್ಮಕ್ಕಳಾದ ರುಕಿಯಾ (13) ಮತ್ತು ರಾಕಿಯಾ (8) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಜೆ ಮುಗಿಸಿ ಹಿಂದೂಪುರಕ್ಕೆ ವಾಪಸಾಗುತ್ತಿದ್ದಾಗ ಈ ದಾರುಣ ಘಟನೆ ಸಂಭವಿಸಿದೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ನೇಪಾಳ ದುರಂತ: ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿಯ ನೇಮಕ
ನೇಪಾಳ ದುರಂತದಲ್ಲಿ ಸಿಲುಕಿರುವ ಹಾಗೂ ನಾಪತ್ತೆಯಾದ ಕರ್ನಾಟಕದ ಮೂಲದವರ ರಕ್ಷಣೆ ಮತ್ತು ನೆರವಿಗೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಂಡಿದೆ. ಈ ಕಾರ್ಯಾಚರಣೆಯ ಸಮನ್ವಯಕ್ಕಾಗಿ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ (OSD) ಅಭಿಜಿತ್ ಗೌಡ ಅವರನ್ನು ವಿಶೇಷ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
-
-
ದೆಹಲಿಯಲ್ಲಿ ಇಂದು ಹೆಚ್.ಡಿ.ಕುಮಾರಸ್ವಾಮಿ ಸುದ್ದಿಗೋಷ್ಠಿ
ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ 12.30ಕ್ಕೆ ದೆಹಲಿಯ ಕುಶಕ್ ರಸ್ತೆಯಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಪ್ರಮುಖ ಸಭೆ ನಡೆಸಲಿದ್ದಾರೆ. ಈ ಸಭೆಯ ಮುಕ್ತಾಯದ ನಂತರ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.
Breaking News Today Live Updates in Kannada: ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದ ಸ್ಥಳದ ‘ಶುದ್ಧೀಕರಣ’ ಕುರಿತು ಹೇಳಿಕೆ ನೀಡಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಸ್‌ಸಿ/ಎಸ್‌ಟಿ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಜದೀವ್ ದ್ವೀಪದ ಬಳಿ ‘ಶ್ರೀ ಮಾತಾ’ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ. ಸಮೀಪದಲ್ಲಿದ್ದ ಬೋಟ್‌ಗಳ ಸಹಾಯದಿಂದ 24 ಮೀನುಗಾರರನ್ನು ರಕ್ಷಿಸಲಾಗಿದ್ದು, 80 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 13ರ ಮಾಧ್ಯಮಗೋಷ್ಠಿಯಲ್ಲಿ ಸಂಭಾವನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಕಿಚ್ಚ ಸುದೀಪ್, “ನನ್ನ ಯೋಗ್ಯತೆ ಮತ್ತು ಶ್ರಮಕ್ಕೆ ತಕ್ಕಂತೆ ಬಿಎಂಎಸ್‌ಆರ್ ಸಂಸ್ಥೆ ಸೂಕ್ತ ಸಂಭಾವನೆ ನೀಡಿದೆ” ಎಂದು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Aug 31,2026 10:02 AM




