AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಪೀಣ್ಯ ಫ್ಲೈಓವರ್ ಬಂದ್, ಹೋಟೆಲ್ ತಿಂಡಿ ದುಬಾರಿ! ಇಲ್ಲಿವೆ ಈ ಹೊತ್ತಿನ ಪ್ರಮುಖ ಅಪ್​ಡೇಟ್ಸ್

ಬೆಂಗಳೂರಿನಲ್ಲಿ ಪೀಣ್ಯ ಫ್ಲೈಓವರ್​ನಲ್ಲಿ ಸಂಚಾರಕ್ಕೆ ಇಂದಿನಿಂದ 4 ದಿನಗಳ ಕಾಲ ನಿರ್ಬಂಧ ಹೇರಲಾಗಿದೆ. ಎಲ್​ಪಿಜಿ ದರ ಏರಿಕೆಯಿಂದ ಹೋಟೆಲ್​ಗಳ ಊಟ-ತಿಂಡಿ ದರವೂ ಏರಿಕೆಯಾಗಿದೆ. ಆಟೋ ದರ ಏರಿಕೆಗೆ ಆಗ್ರಹ ವ್ಯಕ್ತವಾಗಿದೆ. ಬೆಂಗಳೂರು ಹಾಗೂ ಕರ್ನಾಟಕದ ಇಂದಿನ ಪ್ರಮುಖ ವಿದ್ಯಮಾನಗಳ ಗುಚ್ಛ ಇಲ್ಲಿದೆ.

TV9 Kannada News Live: ಪೀಣ್ಯ ಫ್ಲೈಓವರ್ ಬಂದ್, ಹೋಟೆಲ್ ತಿಂಡಿ ದುಬಾರಿ! ಇಲ್ಲಿವೆ ಈ ಹೊತ್ತಿನ ಪ್ರಮುಖ ಅಪ್​ಡೇಟ್ಸ್
ಸಾಂದರ್ಭಿಕ ಚಿತ್ರImage Credit source: Google Gemini
ಗಣಪತಿ ಶರ್ಮಾ
|

Updated on:May 05, 2026 | 10:15 AM

Share

ಬೆಂಗಳೂರು, ಮೇ 5: ಬೆಂಗಳೂರು (Bengaluru) ಇನ್ನಷ್ಟು ದುಬಾರಿ ದುನಿಯಾ ಆಗುತ್ತಿದೆಯಾ? ಇಂಥದ್ದೊಂದು ಪ್ರಶ್ನೆ ಇದೀಗ ಬಲವಾಗಲು ಕಾರಣ ಇದೆ. ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ಏರಿಕೆಯ ಕಾರಣ ಹೋಟೆಲ್​ಗಳು ಊಟ-ತಿಂಡಿ, ಕಾಪಿ-ಚಹಾ ದರ ಏರಿಕೆ ಮಾಡಿವೆ. ಮತ್ತೊಂದೆಡೆ, ಆಟೋ ದರ ಹೆಚ್ಚಳಕ್ಕೆ ಆಗ್ರಹ ವ್ಯಕ್ತವಾಗಿದೆ. ಈ ಎಲ್ಲದರ ಮಧ್ಯೆ, ಪೀಣ್ಯ ಫ್ಲೈಓವರ್​ನಲ್ಲಿ ಇಂದಿನಿಂದ (ಮೇ 5) 4 ದಿನ ಸಂಚಾರ ನಿರ್ಬಂಧ ಇದ್ದು, ಗೊರಗುಂಟೆ ಪಾಳ್ಯ ಸಹಿತ ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಾಧ್ಯತೆ ಇದೆ.

ಹೋಟೆಲ್ ಗ್ರಾಹಕರಿಗೆ ದರ ಏರಿಕೆಯ ಶಾಕ್

ಬೆಂಗಳೂರಿನ ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ದರ ಶೇ 20ರಷ್ಟು ಹೆಚ್ಚಳವಾಗಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 3,154 ರೂ.ಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಹೋಟೆಲ್ ಮಾಲೀಕರು ಮುಂದಾಗಿದ್ದಾರೆ. ಊಟ, ದೋಸೆ ಹಾಗೂ ಕಾಫಿ-ಟೀ ಬೆಲೆಗಳಲ್ಲಿ 5 ರಿಂದ 20 ರೂಪಾಯಿಗಳವರೆಗೆ ಏರಿಕೆ ಮಾಡಲಾಗಿದೆ. ಅನಿವಾರ್ಯವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೋಟೆಲ್ ಉದ್ಯಮಿಗಳು ತಿಳಿಸಿದ್ದಾರೆ.

ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್!

ಕೇಬಲ್ ದುರಸ್ತಿ ಮತ್ತು ಲೋಡ್ ಟೆಸ್ಟಿಂಗ್ ಕಾಮಗಾರಿಯ ಕಾರಣ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನಲ್ಲಿ ಮೇ 8ರ ವರೆಗೆ ಸಂಚಾರ ನಿಷೇಧಿಸಲಾಗಿದೆ. ಇದರ ಪರಿಣಾಮವಾಗಿ ಗೊರಗುಂಟೆ ಪಾಳ್ಯ ಸೇರಿದಂತೆ ತುಮಕೂರು, ನೆಲಮಂಗಲ ಕಡೆ ತೆರಳುವ ಸರ್ವಿಸ್ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಆಟೋ ಪ್ರಯಾಣಿಕರಿಗೆ ತಟ್ಟಲಿದೆ ದರ ಏರಿಕೆ ಬಿಸಿ

ಆಟೋ LPG ದರ ಪ್ರತಿ ಲೀಟರ್‌ಗೆ 5.73 ರೂಪಾಯಿ ಏರಿಕೆಯಾಗಿರುವುದರಿಂದ ಆಟೋ ಚಾಲಕರು ಪ್ರಯಾಣ ದರ ಹೆಚ್ಚಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಆಟೋ ಕನಿಷ್ಠ ದರ (2 ಕಿ.ಮೀ ಗೆ) 36 ರೂ. ಹಾಗೂ ನಂತರದ ಪ್ರತಿ ಕಿ.ಮೀ ಗೆ 18 ರೂ. ಇದೆ. ಇದನ್ನು ಕ್ರಮವಾಗಿ 50 ರೂ. ಹಾಗೂ 25 ರೂ. ಏರಿಸಬೇಕೆಂದು ಆಟೋ ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ: ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್! ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Tue, 5 May 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ