AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Kannada News Live: ಹೇಳಿದಂತೆ ಗುಡ್​​ನ್ಯೂಸ್​​ ಕೊಟ್ಟ ಡಿಕೆಶಿ, ಕೇರಳದಲ್ಲಿ ಕಾಂಗ್ರೆಸ್​​ಗೆ ಕಸಿವಿಸಿ; ಈ ಹೊತ್ತಿನ ಟಾಪ್​​ 5 ಸುದ್ದಿಗಳು ಇಲ್ಲಿವೆ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಮೇ 13ರಂದು ಶುಭಸುದ್ದಿಯೊಂದನ್ನು ನೀಡೋದಾಗಿ ತಿಳಿಸಿದ್ದರು. ಅದರಂತೆ ಇವತ್ತು ಗುಡ್​​ನ್ಯೂಸ್​​ ಕೊಟ್ಟಿದ್ದಾರೆ. ಕೇರಳ ಚುನಾವಣೆಯಲ್ಲಿ ಯುಡಿಎಫ್​​ ಬಹುಮತಗಳಿಸಿದ್ದರೂ ಸಿಎಂ ಆಯ್ಕೆ ವಿಳಂಬಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇತ್ತ ತಮಿಳುನಾಡಲ್ಲಿ ಮೈತ್ರಿ ಪಕ್ಷಗಳ ಟೀಕೆ ಬೆನ್ನಲ್ಲೇ ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ನೇಮಕ ಆದೇಶವನ್ನು  ಸಿಎಂ ವಿಜಯ್​ ಹಿಂಪಡೆದಿದ್ದಾರೆ. ಇವೆಲ್ಲವೂ ಸೇರಿ ಈ ಹೊತ್ತಿನ ಟಾಪ್​​ 5 ಸುದ್ದಿಗಳ ಮಾಹಿತಿ ಇಲ್ಲಿದೆ.

Tv9 Kannada News Live: ಹೇಳಿದಂತೆ ಗುಡ್​​ನ್ಯೂಸ್​​ ಕೊಟ್ಟ ಡಿಕೆಶಿ, ಕೇರಳದಲ್ಲಿ ಕಾಂಗ್ರೆಸ್​​ಗೆ ಕಸಿವಿಸಿ; ಈ ಹೊತ್ತಿನ ಟಾಪ್​​ 5 ಸುದ್ದಿಗಳು ಇಲ್ಲಿವೆ
ಈ ಹೊತ್ತಿನ ಟಾಪ್​​ ಸುದ್ದಿಗಳು
ಪ್ರಸನ್ನ ಹೆಗಡೆ
|

Updated on: May 13, 2026 | 4:03 PM

Share

ಬೆಂಗಳೂರು, ಮೇ 13: ರಾಜಧಾನಿ ಬೆಂಗಳೂರು ನಿವಾಸಿಗರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಗ್​​ ನ್ಯೂಸ್​​ ಒಂದನ್ನು ನೀಡಿದ್ದು, ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ (Property Ownership Drive) ಮಾಡುವುದಾಗಿ ಘೋಷಿಸಿದ್ದಾರೆ. ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಮೇ 16ರಂದು ನಡೆಯುವ ನನ್ನ ಖಾತಾ ನನ್ನ ಹಕ್ಕು ಅಭಿಯಾನ ಘೋಷಿಸಿದ್ದು, ಓಸಿ ಇಲ್ಲದೇ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಸಿಗದೇ ಪರದಾಡುತ್ತಾ ಇದ್ದವರಿಗೆ ಅನುಕೂಲವಾಗಲಿದೆ. ನಗರದಲ್ಲಿ ಕೆಲವರು ಪ್ಲ್ಯಾನ್​ ಇಲ್ಲದೆ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅಂತವರ ಅನುಕೂಲಕಕ್ಕಾಗಿ ಈ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದವರು ತಿಳಿಸಿದ್ದಾರೆ.

ರಾಹುಲ್​​-ಪ್ರಿಯಾಂಕಾ ವಿರುದ್ಧ ಪೋಸ್ಟರ್​​

ವಯನಾಡು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಹೊರಗೆ ಬುಧವಾರ ರಾಹುಲ್​​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧದ ಸಂದೇಶಗಳಿರುವ ಪೋಸ್ಟರ್‌ಗಳು ರಾರಾಜಿಸಿವೆ. ವಿಧಾನಸಭೆ ಚುನಾವಣೆಯಲ್ಲಿ ಯುನೈಟೆಡ್ ಡೆಮೋಕ್ರೆಟಿಕ್​​ ಫ್ರಂಟ್​​ (ಯುಡಿಎಫ್​​) ಭರ್ಜರಿ ಗೆಲುವು ಸಾಧಿಸಿದ್ದರೂ, ಕೇರಳ ಮುಖ್ಯಮಂತ್ರಿಯ ಹೆಸರನ್ನು ಘೋಷಿಸುವಲ್ಲಿ ವಿಳಂಬವಾಗಿರುವುದರಿಂದ ಅಸಮಾಧಾನ ಹೆಚ್ಚಾಗಿದೆ. ರಾಹುಲ್ ಮತ್ತು ಪ್ರಿಯಾಂಕಾ, ವಯನಾಡ್‌ನ್ನು ಮರೆತುಬಿಡಿ. ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಬರೆದಿದೆ. ಮತ್ತೊಂದು ಪೋಸ್ಟರ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ, ವೇಣುಗೋಪಾಲ್​​ ಅವರನ್ನು ಉಲ್ಲೇಖಿಸಿ, ರಾಹುಲ್, ಕೆಸಿ ನಿಮ್ಮ ಬ್ಯಾಗ್ ಹೊರುವವರಾಗಿರಬಹುದು. ಆದರೆ ಕೇರಳದ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಬರೆಯಲಾಗಿದೆ. ಮೂರನೇ ಪೋಸ್ಟರ್‌ನಲ್ಲಿ ಇದು ಎಚ್ಚರಿಕೆ ಅಲ್ಲ. ಈ ತಪ್ಪಿಗಾಗಿ ಕೇರಳ ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಭವಾನಿಪುರ ಕ್ಷೇತ್ರ ಉಳಿಸಿಕೊಂಡು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ಬಂಗಾಳದ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ

ವಿವಾದಿತ ಆದೇಶ ಹಿಂಪಡೆದ ವಿಜಯ್​​

ತಮ್ಮ ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೆಲ್ ಅವರ ನೇಮಕ ಆದೇಶವನ್ನು ತಮಿಳುನಾಡು ಸಿಎಂ ವಿಜಯ್​ ಹಿಂಪಡೆದಿದ್ದಾರೆ. ಮೈತ್ರಿ ಪಕ್ಷಗಳು ಹಾಗೂ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ನೇಮಕಾತಿ ತಮಿಳುನಾಡು ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ದ ವಿಡುತಲೈ ಚಿರುತೈಗಳ್ ಕಚ್ಚಿ (ವಿಸಿಕೆ), ಕಮ್ಯೂನಿಷ್ಟ್​​ ಪಾರ್ಟಿ ಆಫ್​​ ಇಂಡಿಯಾ-ಮ್ಯಾಟ್ರಿಕ್ಸ್​​ (ಸಿಪಿಐಎಂ) ಹಾಗೂ ಕಮ್ಯೂನಿಷ್ಟ್​​ ಪಾರ್ಟಿ ಆಫ್​​ ಇಂಡಿಯಾ (ಸಿಪಿಐ) ಈ ಬಗ್ಗೆ ಟೀಕಿಸಿದ್ದವು. ಸರ್ಕಾರ ವೈಜ್ಞಾನಿಕ ಹಾಗೂ ತಾರ್ಕಿಕ ಚಿಂತನೆಗೆ ಆದ್ಯತೆ ನೀಡಬೇಕು, ಮೂಢನಂಬಿಕೆಗಳಿಗೆ ಅವಕಾಶ ಕೊಡಬಾರದು ಎಂಬ ಮಾತುಗಳು ಕೇಳಿಬಂದಿದ್ದವು.

ಆಸ್ಪತ್ರೆಯಲ್ಲಿ ಔಷಧಗಳ ತೀವ್ರ ಕೊರತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಗಳ ತೀವ್ರ ಕೊರತೆ ಎದುರಾಗಿದ್ದು, ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ತಾಲೂಕು ಆಸ್ಪತ್ರೆಗೆ ಪ್ರತಿದಿನ ನೂರಾರು ರೋಗಿಗಳು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಜ್ವರ, ನೆಗಡಿ ಮತ್ತು ಗ್ಯಾಸ್ಟ್ರಿಕ್ ಮಾತ್ರೆಗಳನ್ನು ಹೊರತುಪಡಿಸಿ ಯಾವುದೇ ಪ್ರಮುಖ ಆಂಟಿಬಯೋಟಿಕ್ ಮಾತ್ರೆಗಳು ಲಭ್ಯವಿಲ್ಲ. ವೈದ್ಯರು ಬರೆದುಕೊಡುವ ಬಹುತೇಕ ಮದ್ದುಗಳು ಆಸ್ಪತ್ರೆಯ ಫಾರ್ಮಸಿಯಲ್ಲಿ ಸಿಗುತ್ತಿಲ್ಲ. ಹೀಗಾಗಿ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಗೆ ಹಣ ಒದಗಿಸುವ ಭರಾಟೆಯಲ್ಲಿ ಆರೋಗ್ಯ ಇಲಾಖೆಯ ಮೆಡಿಸಿನ್‌ಗಳಿಗೆ ಕತ್ತರಿ ಹಾಕಿದೆಯೇ ಎಂಬ ಅನುಮಾನವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

35 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳು ಜಪ್ತಿ

ಕರಾವಳಿಯಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಎಂಬುದಕ್ಕೆ ಸಾಕ್ಷಿಯೆಂಬಂತೆ, ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಸುಹಾನ (21) ಎಂಬಾಕೆಯನ್ನು ಬಂಧಿಸಿದ್ದಾರೆ. ಈಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ ಎಂಬುದು ಗೊತ್ತಾಗಿದ್ದು, ಕುಂದಾಪುರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಂತಿಮ ವರ್ಷದ BCA ವ್ಯಾಸಂಗ ಮಅಡುತ್ತಿದ್ದಾಳೆ ಎಂಬುದು ತಿಳಿದುಬಂದಿದೆ. ಮಂಗಳವಾರ (ಮೇ 12) ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಈಕೆಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?