AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಆಟೋ ಎಲ್​​ಪಿಜಿ ಬಿಕ್ಕಟ್ಟಿನ ನಡುವೆ ಮತ್ತೊಂದು ಶಾಕ್​​, ಜನ್ಮದಿನಕ್ಕೆ ಸಿಗುತ್ತಾ ಡಿಕೆಶಿಗೆ ಶುಭ ಸುದ್ದಿ?

ಆಟೋ ಎಲ್ಪಿಜಿಗಳ ಅಲಭ್ಯತೆ ಸಮಸ್ಯೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರು ಮತ್ತೊಂದು ಆಘಾತ ಎದುರಿಸಲು ಸಜ್ಜಾಗಬೇಕಿದ್ಯಾ ಎಂಬ ಅನುಮಾನ ಮೂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ಭಾರೀ ವ್ಯತ್ಯಯ ಉಂಟಾಗಿರುವ ಕಾರಣ ಹೊಸ ಸಮಸ್ಯೆ ಉದ್ಭವಿಸಿದೆ. ಮತ್ತೊಂದೆಡೆ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಬಿರುಸುಗೊಂಡಿದ್ದು, ಡಿಸಿಎಂ ಡಿಕೆಶಿ ಜನ್ಮ ದಿನಕ್ಕೆ ಶುಭ ಸುದ್ದಿ ಸಿಗುವ ನಿರೀಕ್ಷೆಯಲ್ಲಿ ಅವರ ಬೆಂಬಲಿಗರಿದ್ದಾರೆ. ಈ ಎಲ್ಲದರ ಕಿರು ವಿಶ್ಲೇಷಣೆ ಇಲ್ಲಿದೆ.

TV9 Kannada News Live: ಆಟೋ ಎಲ್​​ಪಿಜಿ ಬಿಕ್ಕಟ್ಟಿನ ನಡುವೆ ಮತ್ತೊಂದು ಶಾಕ್​​, ಜನ್ಮದಿನಕ್ಕೆ ಸಿಗುತ್ತಾ ಡಿಕೆಶಿಗೆ ಶುಭ ಸುದ್ದಿ?
ಇಂಧನ ಅಭಾವ (ಸಾಂದರ್ಭಿಕ ಚಿತ್ರ)
ಪ್ರಸನ್ನ ಹೆಗಡೆ
|

Updated on:May 06, 2026 | 3:25 PM

Share

ಬೆಂಗಳೂರು, ಮೇ 06: ಆಟೋ ಎಲ್‌ಪಿಜಿ ಬಿಕ್ಕಟ್ಟಿನ ಬೆನ್ನಲ್ಲೇ ಬೆಂಗಳೂರಲ್ಲೀಗ (Bengaluru) ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದೆ. ಆ ಮೂಲಕ ವಾಹನ ಸವಾರರು ಮತ್ತೊಂದು ಸಂಕಷ್ಟಕ್ಕೆ ಸಿಲುಕುವ ಎಲ್ಲ ಲಕ್ಷಣಗಳು ಗೋಚರಿಸಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ ಮತ್ತು ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಇಂಧನ ದಾಸ್ತಾನು ಖಾಲಿಯಾಗುತ್ತಿದೆ. ತೈಲ ಮಾರಾಟಗಾರರು ಇಂಧನಕ್ಕಾಗಿ ಮುಂಗಡವಾಗಿ ಹಣ ಪಾವತಿಸಿದ್ದರೂ, ಡಿಪೋಗಳಿಂದ ಬಂಕ್‌ಗಳಿಗೆ ಸರಿಯಾದ ಸಮಯಕ್ಕೆ ಸರಬರಾಜು ಆಗುತ್ತಿಲ್ಲವಂತೆ. ಇಂಡಿಯನ್ ಆಯಿಲ್ ಬಂಕ್‌ಗಳಲ್ಲಿ ಸದ್ಯಕ್ಕೆ ಪೂರೈಕೆ ಸುಗಮವಾಗಿದ್ದರೂ, ಎಚ್‌ಪಿ ಮತ್ತು ಭಾರತ್ ಬಂಕ್‌ಗಳಲ್ಲಿ ಪರಿಸ್ಥಿತಿ ಬಿಗಡಾಯಿಸಿರೋದು ಆತಂಕ ಹೆಚ್ಚಿಸಿದೆ.

ಜನ್ಮ ದಿನಕ್ಕೆ ಡಿಕೆಶಿಗೆ ಸಿಗುತ್ತಾ ಶುಭ ಸುದ್ದಿ?

ಪಂಚರಾಜ್ಯಗಳ ಚುನಾವಣೆ ಫಲಿತಾಂಸ ಹೊರಬಿದ್ದ ಬೆನ್ನಲ್ಲೇ ಕರ್ನಾಟಕದಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದಂದು ಹೈಕಮಾಂಡ್‌ನಿಂದ ಶುಭ ಸುದ್ದಿ ಸಿಗಬಹುದೆಂಬ ನಿರೀಕ್ಷೆ ಬೆಂಬಲಿಗರಲ್ಲಿ ಹೆಚ್ಚಿದೆ. ಈ ಕುರಿತು ಮಾತನಾಡಿರುವ ಮಾಜಿ ಸಂಸದ ಡಿ.ಕೆ. ಸುರೇಶ್ , ತಾವು ಕೂಡ ಈ ಶುಭ ಸುದ್ದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಮತ್ತು ತಾಳ್ಮೆ ಮುಖ್ಯ ಎಂದ ಅವರು, ಎಲ್ಲದಕ್ಕೂ ಒಂದು ಕಾಲ ಬರುತ್ತದೆ ಎಂದು ಹೇಳಿರೋದು ಕುತೂಹಲ ಮೂಡಿಸಿದೆ. ಸರ್ಕಾರ ಮತ್ತು ಪಕ್ಷದ ಅಧ್ಯಕ್ಷರು ಎಲ್ಲರನ್ನೂ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕಾದ ಜವಾಬ್ದಾರಿ ಹೊಂದಿರುತ್ತಾರೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿರುವ ಸಂದರ್ಭದಲ್ಲಿ, ಅಧಿಕಾರ ಹಂಚಿಕೆ ಕುರಿತ ನಿರ್ಧಾರಗಳು ಮುಖ್ಯಮಂತ್ರಿಗಳು, ಪಕ್ಷ ಮತ್ತು ಹೈಕಮಾಂಡ್‌ನ ನಡುವೆ ನಡೆಯುತ್ತವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ವಚನಾನಂದ ಶ್ರೀಗೆ ಜಾಮೀನು ಮಂಜೂರು; ಕಾಂಗ್ರೆಸ್​​ ಕೇರಳದಲ್ಲಿ ಗದ್ದುಗೆ, ತಮಿಳುನಾಡಿನಲ್ಲಿ ವಿಜಯ್ ಜೊತೆ ಮೈತ್ರಿ!

ಕಂಡ ಕಂಡಲ್ಲಿ ಮೂತ್ರ ಮಾಡುವ ಮುನ್ನ ಜೋಕೆ!

ಶೌಚಾಲಯಗಳಿಗೆ ತೆರಳುವ ಬದಲು ಪಟ್ಟಣದಲ್ಲಿನ ಖಾಲಿ ಜಾಗ, ಕಾಂಪೌಂಡ್​​ಗಳ ಸಮೀಪ ಮೂತ್ರ ಮಾಡುವವರಿಗೆ ಬ್ರೇಕ್​​ ಹಾಕಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ. ದಂಡಾಸ್ತ್ರಕ್ಕೂ ಜನ ಬಗ್ಗದ ಕಾರಣ, ಈ ಬಗ್ಗೆ ಗಂಭೀರ ಚಿಂತನೆ ನಡೆಸಿರುವ ಪಾಲಿಕೆ ಮಾಸ್ಟರ್​​ ಪ್ಲಾನ್​​ ಮಾಡಿದೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಸುಮಾರು 80 ಮೀಟರ್ ಉದ್ದದ ಕಾಂಪೌಂಡ್ ಗೋಡೆಗೆ ಸ್ಟೇನ್ ಲೆಸ್ ಸ್ಟೀಲ್ ಶೀಟ್‌ಗಳನ್ನು ಅಳವಡಿಸಲಾಗಿದ್ದು, ಇವು ಕನ್ನಡಿಯಂತೆ ಎದುರಿದ್ದವರನ್ನು ಪ್ರತಿಬಿಂಬಿಸಲಿವೆ. ಹೀಗಾಗಿ ಕಾಂಪೌಂಡ್​​ ಎಂದು ಅಲ್ಲಿ ಮೂತ್ರಮಾಡಲು ಹೋದರೆ ಮಾನ ಕಳೆದುಕೊಳ್ಳಬೇಕಾಗಬಹುದು ಜೋಕೆ!. ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ಮಾಡುವವರಿಗೆ ಮುಜುಗರ ಉಂಟು ಮಅಡುವ ಮೂಲಕ ಈ ಚಾಳಿಗೆ ಬ್ರೇಕ್​​ ಹಾಕಲು ಮೈಸೂರು ಪಾಲಿಕೆ ಮುಂದಾಗಿದ್ದು, ಇದು ಎಷ್ಟರ ಮಟ್ಟಿಗ ಯಶಸ್ಸು ಕಾಣುತ್ತೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:23 pm, Wed, 6 May 26

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್