AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ನ್ಯೂ ಇಂಡಿಯನ್ ಟೈಮ್ಸ್ ದಕ್ಷಿಣ ಭಾರತ ಮಾಧ್ಯಮ ಪ್ರಶಸ್ತಿ: ಟಿವಿ9 ಕನ್ನಡ ವಾಹಿನಿಗೆ ಬಹುಮಾನಗಳ ಮಹಾಪೂರ!

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರತಿಷ್ಠಿತ TNIT ದಕ್ಷಿಣ ಭಾರತ ಮಾಧ್ಯಮ ಪ್ರಶಸ್ತಿ ಸಮಾರಂಭದಲ್ಲಿ ಟಿವಿ9 ಕನ್ನಡ ವಾಹಿನಿಗೆ ಪ್ರಶಸ್ತಿಗಳ ಮಹಾಪೂರವೇ ಹರಿದುಬಂದಿದೆ. ವಾಹಿನಿಯ ಕ್ರೈಂ ಮುಖ್ಯಸ್ಥ ಹೆಚ್.ವಿ. ಕಿರಣ್, ಸುನೀಲ್, ಶಿವಪ್ರಸಾದ್ ಹಾಗೂ ರವೀಂದ್ರ ಮುದ್ದಿ ಅವರು ವಿಶಿಷ್ಟ ಸಾಧನೆಗಾಗಿ ಪ್ರಶಸ್ತಿ ಸ್ವೀಕರಿಸಿ ಗೌರವಕ್ಕೆ ಪಾತ್ರರಾಗಿದ್ದಾರೆ.

ದಿ ನ್ಯೂ ಇಂಡಿಯನ್ ಟೈಮ್ಸ್ ದಕ್ಷಿಣ ಭಾರತ ಮಾಧ್ಯಮ ಪ್ರಶಸ್ತಿ: ಟಿವಿ9 ಕನ್ನಡ ವಾಹಿನಿಗೆ ಬಹುಮಾನಗಳ ಮಹಾಪೂರ!
ಹೆಚ್‌ವಿ ಕಿರಣ್, ಸುನೀಲ್, ಶಿವಪ್ರಸಾದ್ ಹಾಗೂ ರವೀಂದ್ರ ಮುದ್ದಿಗೆ ಸನ್ಮಾನ
ರಾಚಪ್ಪಾಜಿ ನಾಯ್ಕ್
| Edited By: |

Updated on:Oct 24, 2026 | 10:12 AM

Share

ಮುಖ್ಯಾಂಶಗಳು

  • ಅರಮನೆ ಮೈದಾನದಲ್ಲಿ ನಡೆದ ಪ್ರತಿಷ್ಠಿತ TNIT ಮಾಧ್ಯಮ ಪ್ರಶಸ್ತಿ ಪ್ರದಾನ.
  • ಟಿವಿ9 ಕನ್ನಡ ಸುದ್ದಿ ವಾಹಿನಿಗೆ ಒಲಿದುಬಂದ ಹಲವು ಪ್ರಶಸ್ತಿಗಳ ಮಹಾಪೂರ.
  • ಹೆಚ್‌ವಿ ಕಿರಣ್, ಸುನೀಲ್, ಶಿವಪ್ರಸಾದ್ ಹಾಗೂ ರವೀಂದ್ರ ಮುದ್ದಿಗೆ ಸನ್ಮಾನ.

ಬೆಂಗಳೂರು, ಅಕ್ಟೋಬರ್ 24: ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿ ಹಗಲಿರುಳು ಶ್ರಮಿಸುವ ಪತ್ರಕರ್ತರು ಮತ್ತು ಮಾಧ್ಯಮ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುವ ಪ್ರತಿಷ್ಠಿತ ‘ಟಿಎನ್‌ಐಟಿ ಅಕಾಡೆಮಿ’ ವತಿಯಿಂದ ದಕ್ಷಿಣ ಭಾರತ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಜೃಂಭಣೆಯಿಂದ ನಡೆದ ಈ ಕಾರ್ಯಕ್ರಮದಲ್ಲಿ, ವಿವಿಧ ರಾಜ್ಯಗಳ ಹಾಗೂ ಭಾಷೆಗಳ ನುರಿತ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರಲ್ಲಿ ಪ್ರಮುಖವಾಗಿ ಟಿವಿ9 ಕನ್ನಡ ವಾಹಿನಿಯ ದಿಗ್ಗಜರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಹಲವು ಪ್ರಶಸ್ತಿ ಬಾಚಿಕೊಂಡ ಟಿವಿ9 ದಿಗ್ಗಜರು!

ಈ ಬಾರಿಯ ಪ್ರಶಸ್ತಿ ಸಮಾರಂಭದಲ್ಲಿ‘ಟಿವಿ9 ಕನ್ನಡ’ದ ವಿವಿಧ ವಿಭಾಗಗಳಲ್ಲಿ ಹಲವು ಪ್ರಶಸ್ತಿಗಳನ್ನು ಬಾಚಿಕೊಳ್ಳುವ ಮೂಲಕ ತನ್ನ ಪ್ರಾಬಲ್ಯ ಮೆರೆದಿದೆ. ವಾಹಿನಿಯ ಕ್ರೈಂ ವಿಭಾಗದ ಮುಖ್ಯಸ್ಥರಾದ ಹೆಚ್.ವಿ. ಕಿರಣ್ ಅವರಿಗೆ ‘ಎಕ್ಸಲೆನ್ಸ್ ಇನ್ ಕ್ರೈಮ್ ಜರ್ನಲಿಸಂ’ ವಿಭಾಗದಲ್ಲಿ ಪ್ರತಿಷ್ಠಿತ TNIT ಪ್ರಶಸ್ತಿ ಲಭಿಸಿದೆ. ಇದರೊಂದಿಗೆ ಟಿವಿ9 ನುರಿತ ಸಿಬ್ಬಂದಿಯಾದ ಸುನೀಲ್ ಅವರಿಗೆ ‘ಉತ್ತಮ ರಾಜಕೀಯ ವರದಿಗಾರಿಕೆ’ ಪ್ರಶಸ್ತಿ, ಹಾಗೂ ಶಿವಪ್ರಸಾದ್ ಬಿ ಅವರಿಗೆ ‘ಉತ್ತಮ ಅಪರಾಧ ವರದಿಗಾರ’ ಪ್ರಶಸ್ತಿ ಒಲಿದು ಬಂದಿದೆ.

ಇದಲ್ಲದೆ, ಟಿವಿ9 ನ ಹಿರಿಯ ನಿರ್ಮಾಪಕ ಹಾಗೂ ಲೇಖಕರಾದ ರವೀಂದ್ರ ಮುದ್ದಿ ಅವರಿಗೆ ‘ಬೆಸ್ಟ್ ಮೀಡಿಯಾ ಮಾಸ್ಟರ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಈ ದಿಗ್ಗಜರು ಸಲ್ಲಿಸಿರುವ ವಿಶಿಷ್ಟ ಸೇವೆ ಹಾಗೂ ಕಠಿಣ ಪರಿಶ್ರಮವನ್ನು ಗುರುತಿಸಿ ಈ ಗೌರವ ನೀಡಲಾಗಿದ್ದು, ಟಿವಿ9 ಕನ್ನಡ ವಾಹಿನಿಗೆ ಒಟ್ಟಾರೆಯಾಗಿ ಪ್ರಶಸ್ತಿಗಳ ಮಹಾಪೂರವೇ ಹರಿದುಬಂದಿದೆ.

ಟಿಎನ್​ಐಟಿ ಪುರಸ್ಕಾರ ಕಾರ್ಯಕ್ರಮಕ್ಕೆ 9 ವರ್ಷ

ಸುದ್ದಿ ಸಂಗ್ರಹಿಸಲು ಮತ್ತು ತಲುಪಿಸಲು ಮಳೆ, ಗಾಳಿ ಹಾಗೂ ಕಠಿಣ ಸವಾಲುಗಳನ್ನು ಲೆಕ್ಕಿಸದೆ ಕ್ಯಾಮೆರಾದ ಮುಂದೆ ಹಾಗೂ ಹಿಂದೆ ಕಾರ್ಯನಿರ್ವಹಿಸುವ ಕ್ಯಾಮೆರಾಮೆನ್‌ಗಳು, ಸಿನಿಮಾ, ರಾಜಕೀಯ, ಮೆಟ್ರೋ ಮತ್ತು ಕ್ರೈಮ್ ವಿಭಾಗದ ರಿಪೋರ್ಟರ್‌ಗಳ ಪರಿಶ್ರಮಕ್ಕೆ ಗೌರವ ಸಲ್ಲಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ಈ ಪುರಸ್ಕಾರವನ್ನು ನೀಡಲಾಗುತ್ತಿದ್ದು, ಪ್ರಸ್ತುತ ಒಂಬತ್ತನೇ ವರ್ಷಕ್ಕೆ ಯಶಸ್ವಿಯಾಗಿ ಪಾದರ್ಪಣೆ ಮಾಡಿದೆ. ಈ ಬಾರಿಯ ‘ಮಾಧ್ಯಮ ಹಬ್ಬ’ದಲ್ಲಿ ದಕ್ಷಿಣ ಭಾರತದ 5 ರಾಜ್ಯಗಳು ಹಾಗೂ 4 ಭಾಷೆಗಳಿಗೆ ಸೇರಿದ ಪತ್ರಕರ್ತರು ಭಾಗವಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಒಟ್ಟು 80ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ವಿತರಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 am, Sat, 24 October 26

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಬಿಗ್ ಬಾಸ್: ನಾಮಿನೇಟ್ ಆದವರಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?
ಬಿಗ್ ಬಾಸ್: ನಾಮಿನೇಟ್ ಆದವರಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ