AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ರಿಯಾಲಿಟಿ ಚೆಕ್: ಬೆಂಗಳೂರಿನ ಹಲವೆಡೆ ಇನ್ನೂ ನಿಂತಿಲ್ಲ ಇಡ್ಲಿ ತಯಾರಿಗೆ ಪ್ಲಾಸ್ಟಿಕ್ ಬಳಕೆ

ಬೆಂಗಳೂರಿನ ಹೋಟೆಲ್​, ದರ್ಶಿನಿಗಳಲ್ಲಿ ತಯಾರಾಗುವ ಇಡ್ಲಿಗಳ ಸ್ಯಾಂಪಲ್​ಗಳು ಅಸುರಕ್ಷಿತ ಎಂಬ ಆಹಾರ ಇಲಾಖೆಯ ವರದಿಯ ಬೆನ್ನಲ್ಲೇ ಅನೇಕ ಹೋಟೆಲ್ ಮಾಲೀಕರು ಎಚ್ಚೆತ್ತುಕೊಂಡಿದ್ದು, ಪ್ಲಾಸ್ಟಿಕ್ ಬಳಕೆ ತ್ಯಜಿಸಿದ್ದಾರೆ. ಅತ್ತ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಸರ್ಕಾರವೂ ಆದೇಶ ಹೊರಡಿಸಿದೆ. ಆದರೆ, ಹಲವೆಡೆ ಪ್ಲಾಸ್ಟಿಕ್ ಬಳಕೆ ಮುಂದುವರಿದಿದೆ. ‘ಟಿವಿ9’ ರಿಯಾಲಿಟಿ ಚೆಕ್ ವೇಳೆ ಕಾಣಿಸಿದ್ದೇನು? ತಿಳಿಯಲು ಮುಂದೆ ಓದಿ.

ಟಿವಿ9 ರಿಯಾಲಿಟಿ ಚೆಕ್: ಬೆಂಗಳೂರಿನ ಹಲವೆಡೆ ಇನ್ನೂ ನಿಂತಿಲ್ಲ ಇಡ್ಲಿ ತಯಾರಿಗೆ  ಪ್ಲಾಸ್ಟಿಕ್ ಬಳಕೆ
ಬೆಂಗಳೂರು, ಕೋಲಾರ ಸೇರಿ ರಾಜ್ಯದ ಹಲವೆಡೆ ಇಡ್ಲಿ ತಯಾರಿಕೆ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳು ಶನಿವಾರ ಪರಿಶೀಲನೆ ನಡೆಸಿದ್ದಾರೆ
Vinay Kashappanavar
| Updated By: Ganapathi Sharma|

Updated on:Mar 01, 2025 | 5:26 PM

Share

ಬೆಂಗಳೂರು, ಮಾರ್ಚ್ 1: ಬೆಳಗ್ಗಿನ ಉಪಾಹಾರಕ್ಕೆ ಬಹುತೇಕರ ಆಯ್ಕೆಯಾಗಿರುವ ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಆದರೆ, ಬೆಂಗಳೂರಿನ ಹಲವೆಡೆ ಇನ್ನೂ ಕೂಡ ಇಡ್ಲಿ ತಯಾರಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಂತಿಲ್ಲ. ಮೆಜೆಸ್ಟಿಕ್ ಸುತ್ತಮುತ್ತ ಸೇರಿದಂತೆ ಹಲವೆಡೆ ಇನ್ನೂ ಕೂಡ ಕೆಲವರು ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆ ಬಳಕೆ ಮಾಡುತ್ತಿರುವುದು ‘ಟಿವಿ9’ ರಿಯಾಲಿಟಿ ಚೆಕ್ ವೇಳೆ ಬಯಲಾಗಿದೆ. ಪ್ಲಾಸ್ಟಿಕ್ ಬ್ಯಾನ್ ಬಗ್ಗೆ ಕೇಳಿದರೆ, ವ್ಯಾಪಾರಿಗಳು ಕಿರಿಕ್ ಮಾಡಿದ ಘಟನೆಯೂ ಕೆಲವೆಡೆ ನಡೆದಿದೆ.

ಇಡ್ಲಿ ತಯಾರಿಯಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದ್ದರೂ ಇನ್ನೂ ಕೆಲವು ಬೀದಿ ಬದಿ ವ್ಯಾಪಾರಸ್ಥರು ಎಚ್ಚೆತ್ತುಕೊಂಡಿಲ್ಲ.

‘ಟಿವಿ9’ ವರದಿಯ ಫಲಶ್ರುತಿ: ಪ್ಲಾಸ್ಟಿಕ್ ತ್ಯಜಿಸಿದ ಇಡ್ಲಿ ತಯಾರಕರು

ಇನ್ನು ‘ಟಿವಿ9’ ವರದಿಯಿಂದ ಎಚ್ಚೆತ್ತಿರುವ ಕೆಲ ವ್ಯಾಪಾರಿಗಳು ಪ್ಲಾಸ್ಟಿಕ್ ಬಳಕೆಗೆ ಬ್ರೇಕ್ ಹಾಕಿದ್ದಾರೆ. ಬಾಳೆ ಎಲೆ, ಪೇಪರ್ ಪ್ಲೇಟ್, ಸ್ಟೀಲ್ ಪ್ಲೇಟ್ ಬಳಕೆ ಮಾಡುತ್ತಿದ್ದಾರೆ. ಆರೋಗ್ಯ ಇಲಾಖೆ ಆದೇಶಕ್ಕೆ ಜನರು ಪ್ರತಿಕ್ರಿಯೆ ನೀಡಿದ್ದು, ಪ್ಲಾಸ್ಟಿಕ್ ನಿಷೇಧಿಸಿರುವುದು ಉತ್ತಮ ನಿರ್ಧಾರ. ಮೊದಲು ಪ್ಲಾಸ್ಟಿಕ್ ಕಂಪನಿಗಳನ್ನು ಬ್ಯಾನ್ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ
Image
ಟ್ಯಾಟೂನಿಂದ ಎಚ್​ಐವಿ, ಕ್ಯಾನ್ಸರ್: ರಾಜ್ಯದಿಂದ ಹೊಸ ಕಾನೂನಿನ ಸುಳಿವು
Image
ಬೆಂಗಳೂರಿನಲ್ಲಿ ಆಪರೇಷನ್​ ಇಡ್ಲಿ: ಹೋಟೆಲ್​ಗಳ ಮೇಲೆ ಅಧಿಕಾರಿಗಳ ರೇಡ್​
Image
ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
Image
ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!

ಪರ್ಯಾಯ ವ್ಯವಸ್ಥೆಗೆ ಹೋಟೆಲ್ ಮಾಲೀಕರ ಆಗ್ರಹ

ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಬಳಿಯೂ ಇಡ್ಲಿ ತಯಾರಿಕೆಗೆ ಬಟ್ಟೆ ಬಳಸಲಾಗುತ್ತಿದೆ. ಸರ್ಕಾರ ಪ್ಲಾಸ್ಟಿಕ್ ಬ್ಯಾನ್ ಮಾಡಿರೋದು ಸ್ವಾಗತಾರ್ಹ ಎಂದು ಹೋಟೆಲ್ ಮಾಲೀಕರು ಹೇಳಿದ್ದಾರೆ. ಪ್ಲಾಸ್ಟಿಕ್ ಬ್ಯಾನ್ ಮಾಡಲಿ ಅದಕ್ಕೆ ಪರ್ಯಾಯ ವ್ಯವಸ್ಥೆಯನ್ನೂ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಟ್ಯಾಟೂನಿಂದ ಬರುತ್ತೆ ಹೆಚ್​ಐವಿ, ಕ್ಯಾನ್ಸರ್​: ಆರೋಗ್ಯ ಇಲಾಖೆ ಅಲರ್ಟ್

ಇನ್ನು ಬೆಂಗಳೂರಿನ ಹಲವು ಹೋಟೆಲ್​ಗಳಲ್ಲಿ ಬಟ್ಟೆಯನ್ನೇ ಬಳಸಿ ಇಡ್ಲಿ ತಯಾರಿಸಲಾಗುತ್ತಿದ್ದು, ಸರ್ಕಾರದ ಆದೇಶವನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಈ ರೀತಿಯ ವಿಚಾರ ಚರ್ಚೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ.

ಸದ್ಯ ಹಲವು ಹೋಟೆಲ್​ಗಳಲ್ಲಿ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲಾಗಿದೆ. ಆದರೆ ಇನ್ನೂ ಕೆಲವಡೆಗೆ ಪ್ಲಾಸ್ಟಿಕ್ ಹಾಳೆ ಬಳಸಿಯೇ ಇಡ್ಲಿ ತಯಾರಿಸುತ್ತಿದ್ದು, ಅಧಿಕಾರಿಗಳು ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Sat, 1 March 25

VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್