AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವೀಟ್ ವಾರ್: ಹೈಕಮಾಂಡ್​ನ ಕಲೆಕ್ಷನ್​ ಏಜೆಂಟ್​ಗಳು ಆಗಮಿಸಿದ್ದರು ಎಂದ ಬಿಜೆಪಿಗೆ ದೃಷ್ಟಿ ದೋಷ: ಕಾಂಗ್ರೆಸ್ ತಿರುಗೇಟು

ಬಿಜೆಪಿ ಎಕ್ಸ್ ಖಾತೆಯಲ್ಲಿ ಸರಣಿ ಪೋಸ್ಟ್ ಗಳನ್ನು ಮಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಇದಕ್ಕೆ ಕಾಂಗ್ರೆಸ್ ಕೂಡ ತಿರುಗೇಟು ನೀಡಿದೆ. ಇಷ್ಟೇ ಅಲ್ಲದೆ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದೆ. ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್ ಎಂಬ ಪೋಸ್ಟರ್ ಬಿಡುಗಡೆ ಮಾಡಿದೆ.

ಟ್ವೀಟ್ ವಾರ್: ಹೈಕಮಾಂಡ್​ನ ಕಲೆಕ್ಷನ್​ ಏಜೆಂಟ್​ಗಳು ಆಗಮಿಸಿದ್ದರು ಎಂದ ಬಿಜೆಪಿಗೆ ದೃಷ್ಟಿ ದೋಷ: ಕಾಂಗ್ರೆಸ್ ತಿರುಗೇಟು
ಬಿಜೆಪಿ ಟ್ವೀಟ್
TV9 Web
| Edited By: |

Updated on:Oct 20, 2023 | 12:24 PM

Share

ಬೆಂಗಳೂರು, ಅ.20: ಲೋಕಸಭೆ ಚುನಾವಣೆ ಸಮೀಪವಿರುವಾಗಲೇ ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿದ್ದು ಕೋಟಿ ಕೋಟಿ ಹಣ ಪತ್ತೆಯಾಗಿದೆ. ಮತ್ತೊಂದೆಡೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಹಿರಿಯ ಮುಖಂಡ ಕೆ.ಸಿ. ವೇಣುಗೋಪಾಲ್‌ ಅವರು ರಾಜ್ಯಕ್ಕೆ ಭೇಟಿ ನೀಡಿ ಸಭೆ ನಡೆಸಿ ಹಿಂತಿರುಗಿದ್ದಾರೆ. ಇದರ ಬೆನ್ನಲ್ಲೆ ಬಿಜೆಪಿ ಪಕ್ಷ ಕಾಂಗ್ರೆಸ್ ವಿರುದ್ಧ ಆರೋಪಗಳ ಸುರಿಮಳೆಗೈದಿದೆ. ರಾಜ್ಯ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದೆ.

ಹೌದು ಬಿಜೆಪಿ ಎಕ್ಸ್ ಖಾತೆಯಲ್ಲಿ ಸರಣಿ ಪೋಸ್ಟ್ ಗಳನ್ನು ಮಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಇದಕ್ಕೆ ಕಾಂಗ್ರೆಸ್ ಕೂಡ ತಿರುಗೇಟು ನೀಡಿದೆ. ಇಷ್ಟೇ ಅಲ್ಲದೆ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದೆ. ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್ ಎಂಬ ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸದ ಡಿ.ವಿ.ಸದಾನಂದಗೌಡ, ಶಾಸಕ ರವಿಸುಬ್ರಹ್ಮಣ್ಯ, MLCಗಳಾದ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಅವರು ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ಬಿಜೆಪಿ ಟ್ವೀಟ್ ಹೀಗಿದೆ

ರಾಜ್ಯಕ್ಕೆ ಹೈಕಮಾಂಡ್​ನ ಕಲೆಕ್ಷನ್​ ಏಜೆಂಟ್​ಗಳಾದ ಸುರ್ಜೇವಾಲ, ವೇಣುಗೋಪಾಲ್‌ ಬಂದಿದ್ದರು. ಅವರು ನಿಗಮ ಮಂಡಳಿ ನೇಮಕಕ್ಕೆ ರೇಟ್‌ ಕಾರ್ಡ್‌ ಫಿಕ್ಸ್‌ ಮಾಡಿದ್ದಾರೆ.ಕಾಂಗ್ರೆಸ್​ ಸ್ನೇಹಿತರು ಕೊಟ್ಟ ನಿಗಮ ಮಂಡಳಿಗಳ ರೇಟ್‌ ಕಾರ್ಡ್ ಇಂತಿದೆ ಎಂದು ಟ್ವೀಟ್​ನಲ್ಲಿ ಬಿಜೆಪಿ ಪಟ್ಟಿ ನೀಡಿದೆ. ಬಿಡಿಎಗೆ 50 ಕೋಟಿ ರೂಪಾಯಿ, BWSSBಗೆ 45 ಕೋಟಿ ರೂಪಾಯಿ, ಕೆಆರ್‌ಐಡಿಎಲ್​ಗೆ 20 ಕೋಟಿ ರೂಪಾಯಿ, ಕಿಯೋನಿಕ್ಸ್​-₹15 ಕೋಟಿ, ಕರ್ನಾಟಕ ಉಗ್ರಾಣ ನಿಗಮ-₹12 ಕೋಟಿ, ಬಿಎಂಟಿಸಿಗೆ 10 ಕೋಟಿ ರೂ. ಎಂದು ಟ್ವೀಟ್​ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ನಿರಪರಾಧಿ ಅಂತ ಸಾಬೀತಾಗುವವರೆಗೆ ಶಿವಕುಮಾರ್ ಸಂಪುಟದಲ್ಲಿರಬಾರದು: ಕೆಎಸ್ ಈಶ್ವರಪ್ಪ, ಬಿಜೆಪಿ ನಾಯಕ

ಹತ್ತು ಹಲವು ನಿಗಮಗಳಿಗೆ ಕಲೆಕ್ಷನ್‌ ಮಾಸ್ಟರ್ಸ್‌ಗಳಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಸಿ ಹರಾಜು ಪ್ರಕ್ರಿಯೆಯಲ್ಲಿ ಹೆಚ್ಚು ಮೊತ್ತದ ಕಲೆಕ್ಷನ್‌ ಸಾಧ್ಯತೆ ಇದೆಯಂತೆ. ಜನರ ಶ್ರಮದ ದುಡಿಮೆಯ ಹಣವನ್ನು ವಲಯವಾರು ಲೂಟಿ ಮಾಡಿ ಹೈಕಮಾಂಡ್‌‌ಗೆ ತಲುಪಿಸುತ್ತಿರುವ ಕಲೆಕ್ಷನ್‌ ಮಾಸ್ಟರ್​ಗಳು ಎಂದು ಬಿಜೆಪಿ ಕಿಡಿಕಾರಿದೆ.

ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ಬಿಜೆಪಿ ಟ್ವೀಟ್​ಗೆ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಸೋಲಿನ ಹತಾಶೆ, ಶೂನ್ಯ ನಾಯಕತ್ವದಿಂದಾಗಿ ಬಿಜೆಪಿಗೆ ದೃಷ್ಟಿ ದೋಷ ಉಂಟಾಗಿದೆ. ಕಣ್ಣು ಕುರುಡಾದ ಕಾರಣ ಬೇರೆಯವರನ್ನ ಕಾಣೆಯಾಗಿದ್ದಾರೆ ಎನ್ನುತ್ತಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕುರುಡುತನ ಸರಿಪಡಿಸಿಕೊಳ್ಳಲಿ. ಶೀಘ್ರವೇ ಅಧಿಕಾರ ಕಳೆದುಕೊಂಡ ಹತಾಶೆಯಿಂದ ಹೊರಬರಲಿ. ದೃಷ್ಟಿ ದೋಷ ಸರಿಹೋಗಲಿ ಎಂದು ಹಾರೈಸುತ್ತೇವೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿರುಗೇಟಿ ನೀಡಿದೆ.

ನಿಮ್ಮ ಅಧ್ಯಕ್ಷರಿಗೆ ಅಹಂಕಾರದ ಮದ ಏರಿ ಕಣ್ಣು ಕಾಣಿಸದಿರಬಹುದು. ಡಿಕೆಯನ್ನು ಜೈಲಿಗೆ ಕಳಿಸಲು ನಿಮ್ಮಲ್ಲೇ ಪ್ಲಾನ್ ಬಿ ರೆಡಿ ಇದೆಯಂತೆ? ಕಣ್ಣು ಬಿಟ್ಟು ನೋಡಿ, ಕಾಣದಿದ್ರೆ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ. ಮಿಂಟೋ ಆಸ್ಪತ್ರೆಯಲ್ಲಿ ಗುಣವಾಗಲಿಲ್ಲ ಅಂದರೆ ನನ್ನ ಕಚೇರಿಗೆ ಬನ್ನಿ. ನಿಮ್ಮ ಕಣ್ಣಿಗೆ ಉಚಿತ ಖಚಿತ ಹಾಗೂ ನಿಶ್ಚಿತವಾಗಿ ಚಿಕಿತ್ಸೆ ಕೊಡಿಸುತ್ತೇನೆ ಎಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:17 pm, Fri, 20 October 23