Hit And Run: ಹಿಟ್ ಆ್ಯಂಡ್ ರನ್ಗೆ ಹೆಬ್ಬಾಳ ರಿಂಗ್ ರಸ್ತೆ ದಾಟುತ್ತಿದ್ದ ಯುವಕ ಬಲಿ, ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಆಕ್ರೋಶದ ಟ್ವೀಟ್
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಬಾಪಿ ಕುಮಾರ್, ನಿನ್ನೆ ರಾತ್ರಿ 11 ಗಂಟೆಗೆ ಹೆಬ್ಬಾಳ ರಿಂಗ್ ರಸ್ತೆಯನ್ನು ದಾಟುತ್ತಿದ್ದ. ಈ ವೇಳೆ ಹೆಬ್ಬಾಳದ ಕಡೆಯಿಂದ ಕೆ.ಆರ್. ಪುರಂ ಕಡೆಗೆ ಬರುತ್ತಿದ್ದ ಕ್ಯಾಂಟರ್ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ(Hit And Run) ಬಾಪಿ ಕುಮಾರ್ ಎಂಬ 23 ವರ್ಷದ ಯುವಕ ಬಲಿಯಾಗಿದ್ದಾನೆ. ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ ನಗರದಲ್ಲಿ ನಿನ್ನೆ (ನ.11) ರಾತ್ರಿ 11 ಗಂಟೆ ಸುಮಾರಿಗೆ ಯುವಕನ ಮೇಲೆ ಕ್ಯಾಂಟರ್ ಹರಿದು ಯುವಕ ಸಾವನಪ್ಪಿದ್ದಾನೆ. ಈ ಸಂಬಂಧ ಸ್ಥಳೀಯರು ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಬಾಪಿ ಕುಮಾರ್, ನಿನ್ನೆ ರಾತ್ರಿ 11 ಗಂಟೆಗೆ ಹೆಬ್ಬಾಳ ರಿಂಗ್ ರಸ್ತೆಯನ್ನು ದಾಟುತ್ತಿದ್ದ. ಈ ವೇಳೆ ಹೆಬ್ಬಾಳದ ಕಡೆಯಿಂದ ಕೆ.ಆರ್. ಪುರಂ ಕಡೆಗೆ ಬರುತ್ತಿದ್ದ ಕ್ಯಾಂಟರ್ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಯ ಮೇಲೆ ಬಿದ್ದು ಬೆನ್ನಿನ ಹಿಂಭಾಗ, ಸೊಂಟ ಮತ್ತು ಹೊಟ್ಟೆಗೆ ಬಲವಾದ ಗಾಯವಾಗಿದೆ. ಅಪಘಾತ ಮಾಡಿದ ವಾಹನ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದು ಸಾರ್ವಜನಿಕರ ಸಹಾಯದಿಂದ ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಿಸದೆ ಬಾಪಿ ರಾತ್ರಿ 11.50 ಕ್ಕೆ ಮೃತಪಟ್ಟಿರೋದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಮಾಡಿದ ವಾಹನ ಪತ್ತೆಯಾಗಿ ಪೊಲೀಸರು ಮುಂದಾಗಿದ್ದಾರೆ. ಇನ್ನು ಅಪಘಾತದ ವೇಳೆ ಕ್ಯಾಂಟರ್ ಹಿಂದೆ ಬರುತ್ತಿದ್ದ ಕಾರಿನ ಕ್ಯಾಮರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.
@BlrCityPolice Hit and Run incident witnessed in Kalyan Nagar pic.twitter.com/X4J1g6x2kY
— Anshuman Gaurav (@AnshumanGaurav2) November 11, 2022
ಪೋಷಕರು ಬೈದಿದ್ದಕ್ಕೆ ಮನನೊಂದು ಬಾಲಕ ನೇಣಿಗೆ ಶರಣು
ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಷಕರು ಬೈದಿದ್ದಕ್ಕೆ ಮನನೊಂದು ಬಾಲಕ ನೇಣಿಗೆ ಶರಣಾದ ಘಟನೆ ನಡೆದಿದೆ. 7ನೇ ತರಗತಿ ವಿದ್ಯಾರ್ಥಿ ಸಾಯಿಕುಮಾರ್(13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೆಯಲ್ಲಿ ಹೇಳುವ ಕೆಲಸ ಮಾಡದಿದ್ದಕ್ಕೆ ಬಾಲಕನನ್ನು ಪೋಷಕರು ಬೈದಿದ್ದರು. ಅಷ್ಟಕ್ಕೆ ಕೋಪಗೊಂಡು ಮನೆಯ ಟೆರಸ್ ಮೇಲೆ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ಸಂಜೆ 7 ಗಂಟೆಗೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತೆ.
Published On - 10:25 am, Sat, 12 November 22