ಕಂಟೇನರ್ ಮತ್ತು ಬೈಕ್ ನಡುವೆ ಡಿಕ್ಕಿ; ಚಿಕಿತ್ಸೆ ಫಲಿಸದೆ ಯುವಕ-ಯುವತಿ ಸಾವು
ಎಎಂಸಿ ಕಾಲೇಜಿನ ಬಿಎಂಹೆಚ್ ವಿದ್ಯಾರ್ಥಿ ಕೌಶಿಕ್ ಹಾಗು ಸುಷ್ಮಾ ಮೃತ ದುರ್ದೈವಿಗಳು. ಮೃತ ಕೌಶಿಕ್ ಹಾಗು ಸುಷ್ಮಾ ಬೆಂಗಳೂರಿನ ಸಾರಕ್ಕಿ ನಿವಾಸಿಗಳು. ಬನ್ನೇರುಘಟದಲ್ಲಿ ಊಟಕ್ಕೆಂದು ಹೋಗಿದ್ದರು. ಊಟ ಮುಗಿಸಿ ವಾಪಸ್ ಬರುವ ವೇಳೆ ಕಂಟೇನರ್ ಡಿಕ್ಕಿಯಾಗಿ ಘಟನೆ ನಡೆದಿದೆ.
ಬೆಂಗಳೂರು: ಕಂಟೇನರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬನ್ನೇರುಘಟ್ಟ ಸಮೀಪದ ಕೆಂಪನಾಯಕನಹಳ್ಳಿ ಅಕ್ವೇರಲ್ ಗಾರ್ಮೆಂಟ್ಸ್ ಬಳಿ ನಿನ್ನೆ ಸಂಜೆ ನಡೆದಿದೆ. ಅಪಘಾತದಲ್ಲಿ ಯುವಕ-ಯುವತಿ ಮೃತಪಟ್ಟಿದ್ದಾರೆ.
ಎಎಂಸಿ ಕಾಲೇಜಿನ ಬಿಎಂಹೆಚ್ ವಿದ್ಯಾರ್ಥಿ ಕೌಶಿಕ್ ಹಾಗು ಸುಷ್ಮಾ ಮೃತ ದುರ್ದೈವಿಗಳು. ಮೃತ ಕೌಶಿಕ್ ಹಾಗು ಸುಷ್ಮಾ ಬೆಂಗಳೂರಿನ ಸಾರಕ್ಕಿ ನಿವಾಸಿಗಳು. ಬನ್ನೇರುಘಟದಲ್ಲಿ ಊಟಕ್ಕೆಂದು ಹೋಗಿದ್ದರು. ಊಟ ಮುಗಿಸಿ ವಾಪಸ್ ಬರುವ ವೇಳೆ ಕಂಟೇನರ್ ಡಿಕ್ಕಿಯಾಗಿ ಘಟನೆ ನಡೆದಿದೆ. ತಕ್ಷಣವೇ ಸಾರ್ವಜನಿಕರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಯುವಕ-ಯುವತಿ ಇಬ್ಬರೂ ಮೃತಪಟ್ಟಿದ್ದಾರೆ. ಅಪಘಾತ ನಂತರ ಕಂಟೇನರ್ ಚಾಲಕ ಪರಾರಿಯಾಗಿದ್ದು ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿ ಸೆರೆ ರಾಮನಗರ: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಸುಣವಾಡಿ ಗ್ರಾಮದ ಆರೋಪಿ ನರಸಿಂಹಮೂರ್ತಿಯನ್ನು ಮಾಗಡಿ ಠಾಣೆ ಪೊಲೀಸರು ಬಂಧಿಸಿದ್ದು ಆತನಿಂದ 18 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ನಕಲಿ ಕೀ ಗಳನ್ನ ಬಳಸಿ ಕಳ್ಳತನ ಮಾಡುತ್ತಿದ್ದ ಆರೋಪಿ ಇತ್ತೀಚೆಗೆ ಮಾಗಡಿ ಪಟ್ಟಣದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಈ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಒಂದೂವರೆ ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶಕ್ಕೆ ವಿಜಯನಗರ ಜಿಲ್ಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದವರನ್ನು ಬಂಧಿಸಿ ಒಂದೂವರೆ ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶಕ್ಕೆ ಪಡೆದಿದ್ದಾರೆ. ಹೊಸಪೇಟೆ ಪಟ್ಟಣ ಪೊಲೀಸರು, ಕೊಪ್ಪಳದ ವೆಂಕಟೇಶ್, ಅಬ್ದುಲ್ ವಹಾಬ್, ಮಹೇಶ್, ಭಟ್ಕಳದ ಗಣಪತಿ, ಹುಬ್ಬಳ್ಳಿಯ ಪುಂಡಲೀಕ, ವಿಜಯಪುರದ ಶ್ರೀಧರ್ ಸೇರಿದಂತೆ 6 ಜನರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಲಸಿಕೆ ಪಡೆದ ಬಳಿಕ ಕೊರೊನಾ ಸೋಂಕಿಗೆ ಒಳಗಾದ ಟೆಕ್ಕಿ ಸಾವನ್ನೆ ಗೆದ್ದು ಬಂದಿದ್ದು ಹೇಗೆ?