AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳ ಖಾಸಗಿ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್​ ಮೇಲ್, ರೂಮ್ ಕೊಟ್ಟು ಬಲೆ ಬೀಸಿದ್ದ ಹೋಟೆಲ್​ ಒಡತಿ ಅಂದರ್

ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಅವರೇ ರೂಮ್ ಕೊಟ್ಟು ಅವರೆ ಖೆಡ್ಡಾಕ್ಕೆ ಕೆಡವಿದ್ದಾರೆ. ಅವರೇ ರೂಮ್​ ಕೊಟ್ಟು ಅವರಿಂದಲೇ ವಿಡಿಯೋ.... ಹಾಗಾದ್ರೆ ಇಡೀ ಬ್ಲ್ಯಾಕ್​ ಮೇಲ್​ನ ಅಸಲಿ ಕಥೆ ಇಲ್ಲಿದೆ ನೋಡಿ.

ಪ್ರೇಮಿಗಳ ಖಾಸಗಿ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್​ ಮೇಲ್, ರೂಮ್ ಕೊಟ್ಟು ಬಲೆ ಬೀಸಿದ್ದ ಹೋಟೆಲ್​ ಒಡತಿ ಅಂದರ್
ನಯನಾ, ಕಿರಣ್(ಆರೋಪಿಗಳು)
ರಾಚಪ್ಪಾಜಿ ನಾಯ್ಕ್
| Edited By: |

Updated on:Sep 15, 2023 | 8:19 AM

Share

ಬೆಂಗಳೂರು, (ಸೆಪ್ಟೆಂಬರ್ 15): ಪ್ರೇಮಿಗಳ(Lovers) ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್(blackmailing)  ಮಾಡುತ್ತಿದ್ದವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬೆಂಗಳೂರಿನ (Bengaluru) ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್​ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪ್ರೇಮಿಗಳ ವಿಡಿಯೋ ಸೆರೆ ಹಿಡಿದು ಬಳಿಕ ಬ್ಲ್ಯಾಕ್​ ಮೇಲ್​ ಮಾಡುತ್ತಿದ್ದ ನಯನಾ ಹಾಗೂ ಪಾರ್ಟರ್ ಕಿರಣ್ ಎನ್ನವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರೇಮಿಗಳಿಗೆ ರೂಮ್​ ವ್ಯವಸ್ಥೆ ಮಾಡಿಕೊಟ್ಟು ಇದೀಗ ಅವರೇ ಲವರ್ಸ್​ ಖಾಸಗಿ ವಿಡಿಯೋ ಇಟ್ಟುಕೊಂಡು ಲಕ್ಷ ಲಕ್ಷಣ ಹಣ ನೀಡುವಂತೆ ಬ್ಲ್ಯಾಕ್​​ ಮೇಲ್​ಗೆ ಇಳಿದಿದ್ದರು.

ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಶೆಟ್ಟಿ ಲಂಚ್ ಹೋಮ್ ಹೋಟೆಲ್ ನಲ್ಲಿ ಪ್ರೇಮಿಗಳಿಗೆ ರೂಮ್​ ನೀಡಲಾಗಿತ್ತು. ಆದ್ರೆ, ರೂಮ್​ನಲ್ಲಿ ರಹಸ್ಯವಾಗಿ‌ ಕ್ಯಾಮೆರಾ ಅಡಗಿಸಿ ಇಟ್ಟಿದ್ದರು. ಬಳಿಕ ನಯನಾ ಹಾಗೂ ಪಾರ್ಟರ್ ಕಿರಣ್ ಎನ್ನುವರು ಯುವತಿಗೆ ಬ್ಲ್ಯಾಕ್​ ಮೇಲ್ ಮಾಡಿ ಹಣಕ್ಕೆ ಪೀಡಿಸುತ್ತಿದ್ದರು. ಒಂದು ಲಕ್ಷ ಹಣಕ್ಕೆ ನೀಡಬೇಕು. ಹಣ ಕೊಡದಿದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡ್ತೀನಿ. ನಿಮ್ಮ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಕಳುಹಿಸುತ್ತೇನೆ ಎಂದು ಕಿರಣ್ ಬೆದರಿಕೆ ಹಾಕಿದ್ದ.

ಇದನ್ನೂ ಓದಿ: ಲವರ್​​ ಜೊತೆ ಮದುವೆಯಾಗಿದ್ದರೆ ರಾಣಿಯಂತೆ ಇರ್ತಿದ್ದೆ, ಹಳ್ಳಿಗುಗ್ಗುನ್ನ ಮದುವೆಯಾಗಿಬಿಟ್ಟೆ ಎಂದು ಟಾರ್ಚರ್​, ಮೆಟ್ರೋ ಇಂಜಿನಿಯರ್ ಸಾವಿಗೆ ಶರಣು!

ಹಾಗಾದ್ರೆ ಇಡೀ ಬ್ಲ್ಯಾಕ್​ ಮೇಲ್​ನ ಅಸಲಿ ಕಥೆ ಏನು?

ನಯನಾ ಹಾಗೂ ಕಿರಣ್ ಜೊತೆಯಾಗಿ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿ ಶೆಟ್ಟಿ ಲಂಚ್ ಹೋಮ್ ಹೋಟೆಲ್ ಆರಂಭಿಸಿದ್ದರು. ಅದೇ ಹೋಟೆಲ್​ಗೆ ನಯನಾ ಸಂಬಂಧಿ ಯುವತಿ(ಬ್ಲ್ಯಾಕ್​ ಮೇಲ್​ ಪ್ರಕರಣದ ಸಂತ್ರಸ್ಥೆ) ಆಗಾಗ ತನ್ನ ಪ್ರಿಯಕರ ಜೊತೆ ಬರುತ್ತಿದ್ದಳು. ಈ ವೇಳೆ ಹೋಟೆಲ್ ರೂಮ್ ನಲ್ಲಿ ಇರುವಂತೆ ಹೇಳಿದ್ದ ನಯನಾ, ಬಳಿಕ ಇಬ್ಬರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಳು. ನಂತರ ಅವರೇ ರೂಮ್ ಕೊಟ್ಟು ಅವರೆ ಬೀಸಿದ್ದು, ಅಶ್ಲೀಲವಾಗಿ ಎಡಿಟ್ ಮಾಡಿ‌ ಯುವತಿಗೆ ಆರೋಪಿ ಕಿರಣ್, ವಾಟ್ಸಪ್​ ಮಾಡಿ ಒಂದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕೋದಾಗಿ ಬೆದರಿಸುತ್ತಿದ್ದ. ಇದರಿಂದ ಯುವತಿ ಹೆದರಿಕೊಂಡು ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಇದೀಗ ಈ ದೂರಿನ ಆಧಾರ ಮೇಲೆ ಪೊಲೀಸರು ನಯನಾ ಹಾಗೂ ಕಿರಣ್​ನನ್ನು ಬಂಧಿಸಿದ್ದಾರೆ. ಅಲ್ಲದೇ ಮೊಬೈಲ್ ವಶಕ್ಕೆ ಪಡೆದು ಯುವತಿಯ ವಿಡಿಯೋ ಡಿಲೀಟ್ ಮಾಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:16 am, Fri, 15 September 23

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ