ಮನೆಗಳ್ಳತನ, ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಮನೆಗೆ ನುಗ್ಗಿ ಚಿನ್ನಾಭರಣ, ನಗದು ದೋಚುತ್ತಿದ್ದ ಹಾಗೂ ಬೈಕ್ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ನಗರದ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮನೆಗಳವು, ದರೋಡೆ, ಡಕಾಯಿತಿ, ಮಾದಕವಸ್ತು ಮಾರಾಟ ಸೇರಿದಂತೆ ಒಟ್ಟು ಎಂಟು ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು.
ಬೆಂಗಳೂರು, ಸೆ.8: ಮನೆಗೆ ನುಗ್ಗಿ ಚಿನ್ನಾಭರಣ, ನಗದು ದೋಚುತ್ತಿದ್ದ ಹಾಗೂ ಬೈಕ್ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು (Bengaluru) ನಗರದ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮನೆಗಳವು, ದರೋಡೆ, ಡಕಾಯಿತಿ, ಮಾದಕವಸ್ತು ಮಾರಾಟ ಸೇರಿದಂತೆ ಒಟ್ಟು ಎಂಟು ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು.
ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದ ವಿನೋದ್ ಹಾಗೂ ಪ್ರಶಾಂತ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ 5.39 ಲಕ್ಷ ನಗದು, ಮೂರು ದ್ವಿಚಕ್ರ ವಾಹನ, 50 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಪ್ರಯಾಣಿಕನ ಬ್ಯಾಗ್ನಲ್ಲಿ ಜೀವಂತ 55 ಹೆಬ್ಬಾವು, 17 ಕಾಳಿಂಗ ಸರ್ಪದ ಮರಿಗಳು ಪತ್ತೆ: ಓರ್ವ ವ್ಯಕ್ತಿ ವಶಕ್ಕೆ
ಮನೆಗಳವು, ದರೋಡೆ, ಡಕಾಯಿತಿ, ಮಾದಕವಸ್ತು ಮಾರಾಟ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ನ್ಯಾಯಾಲಯದ ವಾರೆಂಟ್ ಇದ್ದರೂ ಆರೋಪಿಗಳು ತಲೆಮರೆಸಿಕೊಂಡಿದ್ದರು. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ