ನೀರಿನ ಸಂಪ್ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರ ಸಾವು, ಹೊಟ್ಟೆಪಾಡಿಗಾಗಿ ಬೆಂಗ್ಳೂರಿಗೆ ಬಂದಿದ್ದ ಸಹೋದರರು ದುರಂತ ಅಂತ್ಯ

ಸಹೋದರರಿಬ್ಬರು ಹೊಟ್ಟೆ ಪಾಡಿಗಾಗಿ ದೂರದ ಬಿಹಾರದಿಂದ ಬೆಂಗಳೂರಿಗೆ ಬಂದಿದ್ದಾರೆ. ಆದ್ರೆ, ನೀರಿನ ಸಂಪ್ ಸ್ವಚ್ಛ ಮಾಡುವಾಗ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ತುತ್ತಿನ ಚೀಲ ತುಂಬಿಸುಕೊಳ್ಳುವುದಕ್ಕೆ ಬಂದಿದ್ದ ಸಹೋದರರು ಇದೀಗ ಒಟ್ಟಿಗೆ ದುರಂತ ಅಂತ್ಯಕಂಡಿದ್ದಾರೆ.

ನೀರಿನ ಸಂಪ್ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರ ಸಾವು, ಹೊಟ್ಟೆಪಾಡಿಗಾಗಿ ಬೆಂಗ್ಳೂರಿಗೆ ಬಂದಿದ್ದ ಸಹೋದರರು ದುರಂತ ಅಂತ್ಯ
ನೀರಿನ ಸಂಪ್
Follow us
ರಾಮು, ಆನೇಕಲ್​
| Updated By: ರಮೇಶ್ ಬಿ. ಜವಳಗೇರಾ

Updated on: Nov 23, 2023 | 10:56 AM

ಆನೇಕಲ್(ಬೆಂಗಳೂರು), (ನವೆಂಬರ್ 23): ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಮೃತಪಟ್ಟ ಘಟನೆ ಬೆಂಗಳೂರಿನ (Bengaluru)ಆನೇಕಲ್ ತಾಲೂಕಿನ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ. ಇದೇ ವೇಳೆ ಕಾರ್ಮಿಕರನ್ನು ರಕ್ಷಣೆ ಮಾಡಲು ಹೋಗಿ ಅಸ್ವಸ್ಥಗೊಂಡ ಕಂಪನಿ ಮಾಲೀಕ ಹಾಗೂ ಮತ್ತೊಬ್ಬ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಹಾರ ಮೂಲದ ಕಾರ್ಮಿಕರಾದ ಚಂದನ್ ರಜ್ ಬನ್ ಸಿಂಗ್(31), ಪಿಂಟು ರಜ್ ಬನ್ ಸಿಂಗ್(22) ಮೃತರು. ಶ್ರೀನಿವಾಸ್ ರೆಡ್ಡಿ ಎಂಬುವವರ ಸನ್ ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ದುರ್ಘಟನೆ ನಡೆದಿದೆ. ಸಂಜೆ ಸಂಪ್‌ನಲ್ಲಿ ಕ್ಲೀನ್‌ ಮಾಡಲು ಕಾರ್ಮಿಕರು ಇಳಿದಿದ್ದರು. ಆ್ಯಸಿಡ್ ಹಾಕಿ ಸ್ವಚ್ಛಗೊಳಿಸುತ್ತಿದ್ದಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತರು ಸಹೋದರರಾಗಿದ್ದು, ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಇವರನ್ನು ಉಳಿಸಲು ಮುಂದಾಗಿದ್ದ ಜಗದೀಶ್ ಹಾಗೂ ಮಾಲೀಕ ಶ್ರೀನಿವಾಸ್ ರೆಡ್ಡಿ ಅಸ್ವಸ್ಥಗೊಂಡಿದ್ದು, ಸದ್ಯ ಅವರನ್ನು ಜಿಗಣಿ ವಿಜಯಶ್ರೀ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!