ಬೆಂಗಳೂರಲ್ಲಿ ಕ್ಯಾಂಟರ್​​ ಡಿಕ್ಕಿಯಾಗಿ ​ಇಬ್ಬರು ಬೈಕ್ ಸವಾರರು ಸಾವು

ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಂಜನಾನಗರ ಬಸ್ ನಿಲ್ದಾಣ ಬಳಿ ಪಲ್ಸರ್ ಬೈಕ್​ನಲ್ಲಿ ಹೋಗುತ್ತಿದ್ದ ಯುವಕರು ಹಿಂಬದಿಯಿಂದ ಕ್ಯಾಂಟರ್​ಗೆ ಗುದ್ದಿದ್ದಾರೆ.

ಬೆಂಗಳೂರಲ್ಲಿ ಕ್ಯಾಂಟರ್​​ ಡಿಕ್ಕಿಯಾಗಿ ​ಇಬ್ಬರು ಬೈಕ್ ಸವಾರರು ಸಾವು
ರವಿ
Follow us
TV9 Web
| Updated By: ಆಯೇಷಾ ಬಾನು

Updated on:Jan 17, 2023 | 12:58 PM

ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್​​ ನಡುವೆ ಡಿಕ್ಕಿ ಸಂಭವಿಸಿ ​ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಅಂಜನಾನಗರ ಬಸ್​​ ನಿಲ್ದಾಣದ ಬಳಿ ನಡೆದಿದೆ. ರವಿ(22), ವಿಕಾಸ್(20) ಮೃತ ಬೈಕ್ ಸವಾರರು. ನಿನ್ನೆ ರಾತ್ರಿ 8 ಗಂಟೆಗೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಂಜನಾನಗರ ಬಸ್ ನಿಲ್ದಾಣ ಬಳಿ ಪಲ್ಸರ್ ಬೈಕ್​ನಲ್ಲಿ ಹೋಗುತ್ತಿದ್ದ ಯುವಕರು ಹಿಂಬದಿಯಿಂದ ಕ್ಯಾಂಟರ್​ಗೆ ಗುದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಯುವಕರು ಕೆಳಗೆ ಬಿದ್ದಿದ್ದು ಯುವಕರ ಮೇಲೆ ಕ್ಯಾಂಟರ್​ ಹರಿದಿದೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ತೀವ್ರ ರಕ್ತಸ್ರಾವವಾಗಿ ಯುವಕರು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಂಡನ್ ಮೆಟ್ರೋಪಾಲಿಟನ್ ವ್ಯವಸ್ಥೆಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ಡೇವಿಡ್ ಕ್ಯಾರಿಕ್ ವಿರುದ್ಧ 45ಕ್ಕೂ ಹೆಚ್ಚು ಲೈಂಗಿಕ ಅತ್ಯಾಚಾರದ ಪ್ರಕರಣಗಳು!

ಬೈಕ್ ಮತ್ತು ಬೊಲೇರೋ ವಾಹನದ ನಡುವೆ ಅಪಘಾತ ಸವಾರ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮುಂಡಾರದಲ್ಲಿ ಬೊಲೆರೋ ವಾಹನ-ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್​ನಲ್ಲಿದ್ದ ಹಳಗೇರಿ ನಿವಾಸಿ ಸುಬ್ರಹ್ಮಣ್ಯ ರಾಮಗೌಡ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಬಳಿಕ ಬೊಲೆರೋ ವಾಹನ ಚಾಲಕ ಪರಾರಿಯಾಗಿದ್ದು ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆರೆಯಲ್ಲಿ ಗೃಹಿಣಿ ಶವ ಪತ್ತೆ

ಮೈಸೂರು: ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದ ಕೆರೆಯಲ್ಲಿ ಭಾಗ್ಯ ಎಂಬ ಗೃಹಿಣಿ ಶವ ಪತ್ತೆಯಾಗಿದೆ. ಪತಿ ಶಂಕರ್, ಅತ್ತೆ ಸಿದ್ದಮ್ಮ, ಅತ್ತಿಗೆ ನೀಲ, ಅತ್ತಿಗೆ ಗಂಡ ಸಿದ್ದಪ್ಪ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮೃತ ಭಾಗ್ಯ ಪೋಷಕರು ತಲಕಾಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

15 ವರ್ಷದ ಹಿಂದೆ ಶಂಕರ್ ಜೊತೆ ಭಾಗ್ಯ ವಿವಾಹವಾಗಿತ್ತು. ಮದುವೆಯಾದ ದಿನದಿಂದ ಭಾಗ್ಯಗೆ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ರಾಜಿ ಪಂಚಾಯತಿ ಮಾಡಲಾಗಿತ್ತು. ಆದರೂ ಭಾಗ್ಯಳಿಗೆ ಮಾನಸಿಕ ದೈಹಿಕ ಕಿರುಕುಳ‌ ನೀಡಿದ್ದಾರಂತೆ. ಸದ್ಯ ಎಲ್ಲಾ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

ಕಲಬುರಗಿಯಲ್ಲಿ ಗುಂಡಿನ ದಾಳಿ ನಡೆಸಿದ್ದ ಆರೋಪಿ ಅರೆಸ್ಟ್

ಕಲಬುರಗಿ ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿ ನಗರದ ಸಬ್​ ಅರ್ಬನ್ ಠಾಣೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದ ಆರೋಪಿ ಬಸಯ್ಯ ಗುತ್ತೇದಾರ್​ನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಆರೋಪಿ ಬಸಯ್ಯನನ್ನು ಪೊಲೀಸರು ಬಂಧಿಸಇದ್ದಾರೆ. ಜಾಗದ ವಿಚಾರವಾಗಿ ಗಲಾಟೆ ವೇಳೆ ಆರೋಪಿ ಬಸಯ್ಯ ಜ.7ರಂದು ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ದಾಳಿ ವೇಳೆ ಚನ್ನವೀರ ಪಾಟೀಲ್, ಅಬೂಬಕರ್​​​ ಗಾಯಗೊಂಡಿದ್ದರು. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಬಸಯ್ಯ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:56 am, Tue, 17 January 23

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ