ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ (electric Shock) ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು(ಡಿಸೆಂಬರ್ 01) ಸಂಜೆ ಬೆಂಗಳೂರಿನ ನಂದಿನಿ ಲೇಔಟ್ನ ವಿಜಯಾನಂದನಗರದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಚಂದ್ರು(10), ಸುಪ್ರೀತ್(12) ಎನ್ನುವ ಬಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಂದ್ರು ಹಾಗೂ ಸುಪ್ರೀತ್ ಎನ್ನುವ ಬಾಲಕರು ಕಬ್ಬಿಣದ ರಾಡ್ನಿಂದ ಹೈಟೆನ್ಷನ್ ವೈರ್ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಯತ್ನಿಸಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದು, ಬಾಲಕರ ಸ್ಥಿತಿ ಗಂಭೀರವಾಗಿದೆ.
ವಿದ್ಯುತ್ ಹೈಟೆನ್ಶನ್ ವೈರ್ ತಾಗಿದ್ದರಿಂದ ಸುಪ್ರೀತ್ ಹಾಗೂ ಚಂದನ್ ಮೈಮೇಲೆ ಸುಟ್ಟ ಗಾಯಗಳಾಗಿವೆ. ಸದ್ಯ ಮಕ್ಕಳಿಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಚಿವ ಗೋಪಾಲಯ್ಯ ಭೇಟಿ ನೀಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ