Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕೆಲಸ ಕೊಡಿಸುವುದಾಗಿ ಸಿಐಡಿ ಅಧಿಕಾರಿಗಳಿಂದಲೇ 40 ಲಕ್ಷ ರೂ. ವಂಚನೆ: ಕಾಂಗ್ರೆಸ್​ನ ಪಾಲು ಎಷ್ಟು ಎಂದ ಬಿಜೆಪಿ

ಬೇಲಿಯೇ ಎದ್ದು ಹೊಲ ಮೇಯ್ದಂತೆ ಕಾನೂನು ಸಂರಕ್ಷಣೆ, ಅಪರಾಧ ಪ್ರಕರಣಗಳನ್ನು ಭೇದಿಸುವ, ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕಾದ ಸಿಐಡಿ ಪೊಲೀಸ್ ಅಧಿಕಾರಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಆಸೆ ತೋರಿಸಿ ಲಕ್ಷ ಲಕ್ಷ ವಂಚನೆ ಮಾಡಿರುವ ಘಟನೆ ಕರ್ನಾಟಕದಲ್ಲಿ ಬೆಳಕಿಗೆ ಬಂದಿದೆ. ಇನ್ನು ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ವಿರುದ್ಧ ಕಿಡಿಕಾರಿದೆ.

ಸರ್ಕಾರಿ ಕೆಲಸ ಕೊಡಿಸುವುದಾಗಿ ಸಿಐಡಿ ಅಧಿಕಾರಿಗಳಿಂದಲೇ 40 ಲಕ್ಷ ರೂ. ವಂಚನೆ: ಕಾಂಗ್ರೆಸ್​ನ ಪಾಲು ಎಷ್ಟು ಎಂದ ಬಿಜೆಪಿ
ಅನಿತಾ.ಬಿ.ಎಸ್, ರಾಮಚಂದ್ರ ಭಟ್
Follow us
ರಮೇಶ್ ಬಿ. ಜವಳಗೇರಾ
|

Updated on: May 15, 2024 | 3:48 PM

ಬೆಂಗಳೂರು, (ಮೇ 15): ಅಪರಾಧ ಕೃತ್ಯದ ಪ್ರಕರಣಗಳನ್ನು ತನಿಖೆ ನಡೆಸಿ ಸತ್ಯಾಂಶಯವನ್ನು ಪತ್ತೆ ಮಾಡುವ ಅಪರಾಧ ತನಿಖಾ ಇಲಾಖೆಯ(ಸಿಐಡಿ) ಅಧಿಕಾರಿಯೇ ಸರ್ಕಾರಿ ಕೆಲಸ (government job) ಕೊಡಿಸುವುದಾಗಿ 40 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಸರ್ಕಾರಿ ಅಧಿಕಾರಿಯಿಂದ ಲಕ್ಷಾಂತರ ಹಣ ವಂಚನೆ ಆರೋಪ ಕೇಳಿ ಬಂದಿದೆ. ಸದ್ಯ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ ಸಿಐಡಿಯ ಮಹಿಳಾ ಪೊಲೀಸ್ ಅಧಿಕಾರಿ ಸೇರಿ ಇಬ್ಬರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಐಡಿ ಘಟಕದಲ್ಲಿ ಸೆಕ್ಷನ್ ಸೂಪರಿಂಟೆಂಡೆಂಟ್ ಆಗಿದ್ದ ಅನಿತಾ.ಬಿ.ಎಸ್ ಹಾಗೂ ರಾಮಚಂದ್ರ ಭಟ್ ಬಂಧಿತರು.

ಬಂಧಿತ ಆರೋಪಿಗಳು ಚಿಕ್ಕಮಗಳೂರಿನ ಕಲ್ಯಾಣನಗರದ ನಿವಾಸಿ ಸುನಿಲ್ ಎಂಬುವವರಿಗೆ ಬರೋಬ್ಬರಿ 40 ಲಕ್ಷ ರೂ. ವಂಚನೆ ಮಾಡಿದ್ದಾರೆ. ರಾಮಚಂದ್ರಭಟ್ ಎನ್ನುವವರು ಸಿಐಡಿ ಇಲಾಖೆ ಅಧಿಕಾರಿ ಅನಿತಾ ಅವರನ್ನು ಭೇಟಿ ಮಾಡಿಸಿ ಪರಿಚಯ ಮಾಡಿಕೊಟ್ಟಿದ್ದಾರೆ. ಈ ವೇಳೆ ನಿರುದ್ಯೋಗಿ ಯುವಕ ಸುನೀಲ್‌ಗೆ ಕೆಪಿಎಸ್‌ಸಿ ನೇಮಕಾತಿಯ ಮೂಲಕ ಲೋಕೋಪಯೋಗಿ (ಪಿಡಬ್ಲ್ಯೂಡಿ) ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಹುದ್ದೆಯನ್ನು ಕೊಡಿಸುದಾಗಿ ನಂಬಿಸಿದ್ದರು. ಇದಕ್ಕೆ ಹಂತ ಹಂತವಾಗಿ ನೀನು ಹಣ ಕೊಟ್ಟರೆ ಕೆಲಸ ಕೊಡಿಸುವುದಾಗಿ ತಿಳಿಸಿ ನಲವತ್ತು ಲಕ್ಷ ರೂ.ವರೆಗೆ ಹಣ ಪಡೆದಿದ್ದಾರೆ. ಆದರೆ, ಕೆಲಸ ಮಾತ್ರ ಸಿಕ್ಕೇ ಇಲ್ಲ.

ಇದನನ್ನೂ ಓದಿ: ಬೆಂಗಳೂರು: ದೂರಸಂಪರ್ಕ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ಮಹಿಳೆಗೆ 30 ಲಕ್ಷ ವಂಚನೆ

ರಾಜ್ಯದಲ್ಲಿ ವಿದ್ಯಾಭ್ಯಾಸ, ಶೈಕ್ಷಣಿಕ ಅರ್ಹತೆ ಅನುಗುಣವಾಗಿ ಕೆಲಸ ಸಿಗದೇ ಲಕ್ಷಾಂತರ ನಿರುದ್ಯೋಗಿಗಳು ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕುತ್ತಾರೆ. ಸಾವಿರಾರು ಅಭ್ಯರ್ಥಿಗಳು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಓದಿ ಪರೀಕ್ಷೆ ಬರೆಯುತ್ತಾರೆ. ಆದ್ರೆ, ಇದ್ಯಾವುದನ್ನೂ ಮಾಡದೇ ವಾಮಮಾರ್ಗ ಮೂಲಕ ಹಣ ಕೊಟ್ಟು ಕೆಲಸ ಪಡೆಯಬಹುದು ಎಂಬುವವರಿಗೆ ಸರ್ಕಾರದಿಂದ ಸರಿಯಾಗಿ ಬುದ್ಧಿ ಕಲಿಸಬೇಕು. ಆದರೆ, ಭ್ರಷ್ಟಾಚಾರಿಗಳನ್ನು ಹಿಡಿದು ಶಿಕ್ಷೆಗೆ ಗುರಿ ಪಡಿಸಬೇಕಾದ ಸಿಐಡಿ ಇಲಾಖೆ ಅಧಿಕಾರಿಗಳೇ ಹೀಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ 40 ಲಕ್ಷ ರೂ. ಪಡೆದು ವಂಚನೆ ಮಾಡಿರುವುದು ದುರಂತ.

ಯುವಕನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ಹಣ ಹಿಂತಿರುಗಿಸುವಂತೆ ಕೇಳಿದ್ದಾನೆ. ಆಗ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಉದ್ಯೋಗಕ್ಕೆ ವಾಮಮಾರ್ಗದಲ್ಲಿ ಹಣ ಕೊಟ್ಟು ಭ್ರಷ್ಟಾಚಾರ ಮಾಡಿದ ಆರೋಪದಡಿ ನಿನ್ನನ್ನು ಜೈಲಿಗೆ ಹಾಕಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಯುವಕ ಸುನೀಲ್ ಕೊನೆಗೆ ಮನೆಯವರ ಒತ್ತಾಸೆ ಮೇರೆಗೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದಾನೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ಇದರಲ್ಲಿ ಕಾಂಗ್ರೆಸ್​ನ ಪಾಲು ಎಷ್ಟು ಎಂದ ಬಿಜೆಪಿ

ಇನ್ನು ಈ ಪ್ರಕರಣದ ಬಗ್ಗೆ ಕರ್ನಾಟಕ ಬಿಜೆಪಿ ತನ್ನ ಸಾಮಾಜಿಕ ಜಾಲತಾಣಗಳ ಪೇಜ್​ನಲ್ಲಿ ಪ್ರತಿಕ್ರಿಯಿಸಿದ್ದು, ಕಾಸಿಗಾಗಿ ಪೋಸ್ಟಿಂಗ್ ದಂಧೆ ಶುರು ಮಾಡಿದ್ದ ಕಾಂಗ್ರೆಸ್ ಸರ್ಕಾರ, ಕಲೆಕ್ಷನ್, ಕಮಿಷನ್ ದಂಧೆಯನ್ನು ಭರ್ಜರಿಯಾಗಿ ನಡೆಸುತ್ತಿದೆ. ಇದರ ನಡುವೆ ಬೇಲಿಯೇ ಎದ್ದು ಹೊಲ ಮೇಯುತ್ತಿರುವುದು ಕನ್ನಡಿಗರ ದುರಂತ. ಸಿಐಡಿ ಅಧಿಕಾರಿಗಳೇ ಸರ್ಕಾರಿ ಹುದ್ದೆ ಕೊಡಿಸುವುದಾಗಿ ನಂಬಿಸಿ ₹40 ಲಕ್ಷಗಳನ್ನು ಪೀಕಿ ಯುವಕನಿಗೆ ಪಂಗನಾಮ ಹಾಕಿದ್ದಾರೆ. ಇದರಲ್ಲಿ ಕಾಂಗ್ರೆಸ್​​ನ ಪಾಲು ಎಷ್ಟು ಎಂದು ಪ್ರಶ್ನಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!