ಬೆಂಗಳೂರು: ಮೋಸ್ಟ್ ವಾಂಟೆಡ್ ಪೆಡ್ಲರ್ಗಳಿಂದ ಗಾಂಜಾ ತರಿಸಿಕೊಂಡು, ಮಾರಾಟ ಮಾಡ್ತಿದ್ದ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಂದಹಾಗೆ ಇವರಿಬ್ಬರೂ ಕಾನ್ಸ್ಟೇಬಲ್ಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಭದ್ರತಾ ಕಾರ್ಯದಲ್ಲಿದ್ದರು. ಶಿವಕುಮಾರ್ ಹಾಗೂ ಸಂತೋಷ್ ಗಾಂಜಾ ತರಿಸಿ ಮಾರಾಟ ಮಾಡ್ತಿದ್ದ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳು. ಇಬ್ಬರೂ ಕಾನ್ಸ್ಟೇಬಲ್ಗಳು ಕೋರಮಂಗಲ ಪೊಲೀಸ್ ಠಾಣೆಯ ಸಿಬ್ಬಂದಿ.
ಈ ಶಿವಕುಮಾರ್ ಮತ್ತು ಸಂತೋಷ್ ಕಾನ್ಸ್ಟೇಬಲ್ ಜೋಡಿಯು ಮೋಸ್ಟ್ ವಾಂಟೆಡ್ ಪೆಡ್ಲರ್ ಬಳಿ ಗಾಂಜಾ ಖರೀದಿಸಿ, ಮಾರಾಟಕ್ಕೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಪೊಲೀಸ್ ಸಿಬ್ಬಂದಿಗಳು ಮುಖ್ಯಮಂತ್ರಿಗಳ ಮನೆ ಇರುವ ಆರ್. ಟಿ. ನಗರದ 80 ಅಡಿ ರಸ್ತೆ ಬಳಿ ಡೀಲ್ ಮಾಡುತ್ತಿದ್ದರು. ಸಿಎಂ ಮನೆಯ ಬಳಿ ಗಸ್ತಿನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಸತ್ಯ ಹೊರಬಂದಿದೆ. ಸದ್ಯ ಆರ್.ಟಿ. ನಗರ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ.
ಬಾಬ್ರಿ ಮಸೀದಿಯಂತೆ ಶ್ರೀರಂಗಪಟ್ಟಣ ಮಸೀದಿ ಕೆಡವಬೇಕೆಂದು ವಿಡಿಯೋ ಬಿಡುಗಡೆ- ಕಾಳಿ ಸ್ವಾಮೀಜಿ ಬೆಳಗಿನ ಜಾವ ಅರೆಸ್ಟ್
ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ (Srirangapatna Masjid) ಕೆಡವುವಂತೆ ಕಾಳಿ ಸ್ವಾಮೀಜಿ ಬಿಡುಗಡೆ ಮಾಡಿದ್ದ ವಿವಾದಾತ್ಮಕ ವಿಡಿಯೋ ಹಿನ್ನೆಲೆಯಲ್ಲಿ ಸಮಾಜದಲ್ಲಿ ಕೋಮು ಸೌಹಾರ್ದತೆ ಹಾನಿ ಆಗುವ ನಿಟ್ಟಿನಲ್ಲಿ ಚಿಕ್ಕಮಗಳೂರು ಪೊಲೀಸರು (chikkamagalur police) ಸ್ವಾಮೀಜಿಯನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ರಿಷಿ ಕುಮಾರ್ ಸ್ವಾಮೀಜಿ ಮಸೀದಿ ಮುಂದೆ ನಿಂತು ವಿಡಿಯೋ ಮಾಡಿ ಹಿಂದೂಗಳಿಗೆ ಕರೆ ನೀಡಿದ್ದರು. ಶ್ರೀರಂಗಪಟ್ಟಣದ ದೇವಾಲಯವನ್ನು ಕೆಡವಿ ಮಸೀದಿ ಮಾಡಿದ್ದಾರೆ. ಇದು ಮೊದಲು ದೇವಾಲಯವಿತ್ತು. ಇದನ್ನು ಕೆಡವಿದ್ದಾರೆ ಅಂತಾ ಆರೋಪಿಸಿ, ಇದನ್ನು ಆದಷ್ಟು ಬೇಗ ಬಾಬ್ರಿ ಮಸೀದಿ ರೀತಿಯಲ್ಲಿ ಕೆಡವಬೇಕೆಂದು ರಿಷಿ ಕುಮಾರ್ ಸ್ವಾಮೀಜಿ (Kali Mutt Rishi Kumar Swami) ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.
ಹಿಂದೂಗಳು ಅತಿ ಬೇಗ ಜಾಗೃತರಾಗಿ ಹೊಡೆಯಬೇಕಾದ ಮಸೀದಿಯಲ್ಲಿ ಇದೂ ಒಂದು ಎಂದು ವಿಡಿಯೋ ಮಾಡಿದ್ದರು. ಇಂದು ಬೆಳಿಗನ ಜಾವ 4-30ಕ್ಕೆ ಚಿಕ್ಕಮಗಳೂರು ಮಠದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ರಿಷಿ ಕುಮಾರ್ ಸ್ವಾಮೀಜಿಯನ್ನು ಪೊಲೀಸರು ಶ್ರೀರಂಗಪಟ್ಟಣ ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗ್ತಿದ್ದಾರೆ.
ಇದನ್ನೂ ಓದಿ:
ಬಾಬ್ರಿ ಮಸೀದಿಯಂತೆ ಶ್ರೀರಂಗಪಟ್ಟಣ ಮಸೀದಿ ಕೆಡವಬೇಕೆಂದು ವಿಡಿಯೋ ಬಿಡುಗಡೆ- ಕಾಳಿ ಸ್ವಾಮೀಜಿ ಬೆಳಗಿನ ಜಾವ ಅರೆಸ್ಟ್
Radhika Kumaraswamy: ಹಿಂದಿ ಹಾಡಿಗೆ ರಾಧಿಕಾ ಮಸ್ತ್ ಡಾನ್ಸ್; ವಿಡಿಯೋ ವೈರಲ್
Published On - 10:56 am, Tue, 18 January 22