ಕಂಠೀರವ ಸ್ಟುಡಿಯೋ ಬಳಿ ಭೀಕರ ಅಪಘಾತ; ಕ್ಯಾಂಟರ್‌ಗೆ ಹಿಂದಿನಿಂದ ದ್ವಿಚಕ್ರವಾಹನ ಡಿಕ್ಕಿ, ಇಬ್ಬರ ಸಾವು

ರಾಜ್ ಕುಮಾರ್ ಸಮಾದಿ ಬಳಿಯ ರಸ್ತೆಯಲ್ಲಿ ತಡರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ಲಗ್ಗೇರೆ ಕಡೆಯಿಂದ ಗೊರಗುಂಟೆ ಪಾಳ್ಯ ಕಡೆಗೆ ತೆರಳುತಿದ್ದಾಗ ಅಪಘಾತ ನಡೆದಿದೆ. ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಸ್ಕೂಟರ್ ನಲ್ಲಿ ತೆರಳುತಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಕಂಠೀರವ ಸ್ಟುಡಿಯೋ ಬಳಿ ಭೀಕರ ಅಪಘಾತ; ಕ್ಯಾಂಟರ್‌ಗೆ ಹಿಂದಿನಿಂದ ದ್ವಿಚಕ್ರವಾಹನ ಡಿಕ್ಕಿ, ಇಬ್ಬರ ಸಾವು
ಕಂಠೀರವ ಸ್ಟುಡಿಯೋ ಬಳಿ ಭೀಕರ ಅಪಘಾತ; ಕ್ಯಾಂಟರ್‌ಗೆ ಹಿಂದಿನಿಂದ ದ್ವಿಚಕ್ರವಾಹನ ಡಿಕ್ಕಿ, ಇಬ್ಬರ ಸಾವು
Follow us
| Updated By: ಆಯೇಷಾ ಬಾನು

Updated on:Jan 24, 2022 | 11:37 AM

ಬೆಂಗಳೂರು: ನಗರದ ಕಂಠೀರವ ಸ್ಟುಡಿಯೋ ಬಳಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಕ್ಯಾಂಟರ್‌ಗೆ ಹಿಂದಿನಿಂದ ದ್ವಿಚಕ್ರವಾಹನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಚಲಿಸುತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.

ರಾಜ್ ಕುಮಾರ್ ಸಮಾದಿ ಬಳಿಯ ರಸ್ತೆಯಲ್ಲಿ ತಡರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ಲಗ್ಗೇರೆ ಕಡೆಯಿಂದ ಗೊರಗುಂಟೆ ಪಾಳ್ಯ ಕಡೆಗೆ ತೆರಳುತಿದ್ದಾಗ ಅಪಘಾತ ನಡೆದಿದೆ. ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಸ್ಕೂಟರ್ ನಲ್ಲಿ ತೆರಳುತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅಸ್ಸಾಂ ಮೂಲದ ಕುಮಾರ್ ಲಿಂಬೂ ಮತ್ತು ಸುನಿಲ್ ಸ್ಕೂಟರ್ ನಲ್ಲಿ ತೆರಳುತಿದ್ದವರು. ಅಪಘಾತದಲ್ಲಿ ಕುಮಾರ್ ಲಿಂಬು ಸ್ಥಳದಲ್ಲೇ ಮೃತಪಟ್ಟಿದ್ದು ಸುನಿಲ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದವು. ಹೀಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸುನಿಲ್ ಸಹ ಮೃತಪಟ್ಟಿದ್ದಾರೆ.

ಮಂದಗತಿಯಲ್ಲಿ ಸಾಗುತಿದ್ದ ಲೋಡೆಡ್ ಕ್ಯಾಂಟರ್ಗೆ ವೇಗವಾಗಿ ಹಿಂದಿನಿಂದ ಬಂದು ಸ್ಕೂಟರ್ ಡಿಕ್ಕಿ ಹೊಡೆದಿದೆ. ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕ್ಯಾಂಟರ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಟೈರ್ ಬ್ಲಾಸ್ಟ್ ಆಗಿ ಡಿವೈಡರ್​ಗೆ ಡಿಕ್ಕಿ ಹೊಡೆದ BMTC ಬಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ನೆರಳೂರಿನಲ್ಲಿ ಟೈರ್ ಬ್ಲಾಸ್ಟ್ ಆಗಿ ಬಿಎಂಟಿಸಿ ಬಸ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಿಎಂಟಿಸಿ ಬಸ್ ಚಾಲಕನ ಕಾಲು ಮುರಿದಿದೆ. ಬಸ್​ನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಸ್ ನಿಧಾನ ಗತಿಯಲ್ಲಿದ್ದ ಕಾರಣ ಭಾರೀ ಅನಾಹುತ ತಪ್ಪಿದೆ. ಸ್ಥಳೀಯರ ಸಹಾಯದಿಂದ ಬಸ್ ಚಾಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣ ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆ ಬಳಿ ಅಪಘಾತ ಸಂಭವಿಸಿದ್ದು ಲಕ್ಷ್ಮೀದೇವಿನಗರ ನಿವಾಸಿ ಸುರೇಶ್ ಬಾಬು ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿ ಬೈಕ್​ಗೆ ಬಿಎಂಟಿಸಿ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್​ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲ್ಲೇಶ್ವರಂ ಸಂಚಾರಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಲಾರಿ ಮೈಸೂರಿನ ಹೂಟಗಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಮನೆಗೆ ನುಗ್ಗಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ್ದು ಮನೆ ಹೊರಗಿದ್ದ ಕಾರು ಜಖಂ ಆಗಿದೆ ಕಾಂಪೌಂಡ್‌ಗೂ ಹಾನಿಯಾಗಿದೆ. ವಿ.ವಿ.ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಲಾರಿ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Petrol and Diesel Rate Today: ಬೆಂಗಳೂರು ಹಾಗೂ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ವಿವರ

Published On - 7:52 am, Mon, 24 January 22

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!