ಬೆಂಗಳೂರಿನ ಬ್ಯಾಟರಾಯನಪುರ ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಕಾರು ಬೈಕ್ ಮಧ್ಯೆ ಡಿಕ್ಕಿ, ಇಬ್ಬರು ಸವಾರರು ದುರ್ಮರಣ

ತಡರಾತ್ರಿ ಬ್ಯಾಟರಾಯನಪುರ ಜಂಕ್ಷನ್ ಬಳಿ ಘಟನೆ ನಡೆದಿದೆ. ಬುಲೆಟ್ ಬೈಕಿನಲ್ಲಿದ್ದ ಕಿರಣ್ ಹಾಗೂ ಮತ್ತೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ಬ್ಯಾಟರಾಯನಪುರ ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಕಾರು ಬೈಕ್ ಮಧ್ಯೆ ಡಿಕ್ಕಿ, ಇಬ್ಬರು ಸವಾರರು ದುರ್ಮರಣ
ಬೆಂಗಳೂರಿನ ಬ್ಯಾಟರಾಯನಪುರ ಜಂಕ್ಷನ್‌ನಲ್ಲಿ ಭೀಕರ ಅಪಘಾತ
Follow us
TV9 Web
| Updated By: ಆಯೇಷಾ ಬಾನು

Updated on:Feb 27, 2022 | 11:49 AM

ಬೆಂಗಳೂರು: ಕಾರು, ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಮೃತಪಟ್ಟ(Death) ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಜಂಕ್ಷನ್‌ನಲ್ಲಿ(Byatarayanapura Junction) ನಡೆದಿದೆ. ಬೈಕ್ ಸವಾರ ಕಿರಣ್, ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಡರಾತ್ರಿ ಬ್ಯಾಟರಾಯನಪುರ ಜಂಕ್ಷನ್ ಬಳಿ ಘಟನೆ ನಡೆದಿದೆ. ಬುಲೆಟ್ ಬೈಕಿನಲ್ಲಿದ್ದ ಕಿರಣ್ ಹಾಗೂ ಮತ್ತೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರು ಚಾಲಕನ ಬೇಜವಾಬ್ದಾರಿ ಚಾಲನೆಗೆ ಇಬ್ಬರು ಬಲಿಯಾಗಿದ್ದಾರೆ. ಮೃತ ಕಿರಣ್ ಹಾಗೂ ಯತೀಶ್ ಇಬ್ಬರು ಟೆಕ್ಕಿಗಳು. ಕಳೆದ ವರ್ಷವಷ್ಟೆ ವಿದ್ಯಾಭ್ಯಾಸ ಮುಗಿಸಿ ಕೆಲಸಕ್ಕೆ ಸೇರಿದ್ದರು. ಮೂಲತಃ ಚಿತ್ರದುರ್ಗದವರಾದ ಇಬ್ಬರು ಸಂಬಂಧಿಕರು. ಕಿರಣ್ ಅತ್ತೆ ಮಗ ಯತೀಶ್ ಮನೆಯಲ್ಲೇ ಇಬ್ಬರು ವಾಸವಾಗಿದ್ದರು. ನಿನ್ನೆ ವೀಕೆಂಡ್ ಹಿನ್ನಲೆ ತಡರಾತ್ರಿ ಬೈಕ್​ನಲ್ಲಿ ಹೊರ ಬಂದಿದ್ದರು. ಬ್ಯಾಟರಾಯನಪುರ ಬಳಿ ಬಂದಾಗ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಬೈಕ್​ನಲ್ಲಿದ್ದ ಇಬ್ಬರೂ 20 ಅಡಿ ಹಾರಿ ಬಿದ್ದಿದ್ದಾರೆ. ಕಾರು ಚಾಲಕ ಪರಾರಿಯಾಗಿದ್ದಾನೆ. ಸದ್ಯ ನಾಪತ್ತೆಯಾದ ಚಾಲಕನಿಗಾಗಿ ಪೊಲೀಸರು ಶೋಧ ಕಾರ್ಯ ಶುರು ಮಾಡಿದ್ದಾರೆ.

ಆಟೋ-ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ, ಮೃತರ ಸಂಖ್ಯೆ 3ಕ್ಕೆ ಏರಿಕೆ ದಾವಣಗೆರೆ: ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿ ಹಗನವಾಡಿ ಬಳಿ ನಿನ್ನೆ ಸಂಜೆ ಭೀಕರ ಅಪಘಾತ ಸಂಭವಿಸಿತ್ತು. ಪ್ಯಾಸೆಂಜರ್ ಅಪ್ಪೆ ಆಟೋಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದ್ದು ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಫಲಿಸದೇ ಇಬ್ಬರು ವಿದ್ಯಾರ್ಥಿಗಳು ತಡರಾತ್ರಿ ಮೃತಪಟ್ಟಿದ್ದಾರೆ. ಎಳು ಜನರ ಸ್ಥಿತಿ ಗಂಭೀರವಾಗಿದ್ದು ದಾವಣಗೆರೆ ಖಾಸಗಿ ಆಸ್ಪತ್ರೆ ಹರಿಹರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗೇನಹಳ್ಳಿ ಚಂದ್ರಮ್ಮ (65), ಬೆಳ್ಳೂಡಿಯ ಅನಿಲ್ ಕುಮಾರ (19), ಬಸವರಾಜ್ (19) ಸಾವನ್ನಪ್ಪಿದವರು. ಹರಿಹರದಿಂದ ಭಾನುವಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ಆಟೋ‌‌ರಿಕ್ಷಾಗೆ ಪಕ್ಕದ ರಸ್ತೆಯಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಯಸ್ಸಾದವರು ಪ್ರಯಾಣಿಸುತ್ತಿದ್ದ ಅಪ್ಪೆ ಆಟೋ ಅಪಘಾತಕ್ಕೀಡಾಗಿದೆ.

ಬೆಂಗಳೂರು: ನಗರದಲ್ಲಿ ಮಗನಿಂದಲೇ ತಾಯಿಯ (Mother) ಕೊಲೆ (Murder) ನಡೆದಿದೆ. ರಾತ್ರಿ ಮಾರತಹಳ್ಳಿ ಸಮೀಪದ ದೇವರ ಬಿಸನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಯಮುನಮ್ಮ (70) ಕೊಲೆಯಾದ ದುರ್ದೈವಿ. ಕುಡಿದ ಅಮಲಿನಲ್ಲಿ ಜಗಳ ತೆಗೆದು ಮಗ ಅಂಬರೀಶ್ ತನ್ನ ಹೆತ್ತ ತಾಯಿಯನ್ನು ಕೊಲೆ ಮಾಡಿದ್ದಾನೆ. ಕುಡಿಯಲು ಹಣ ನೀಡುವಂತೆ ತಾಯಿ ಬಳಿ ಮಗ ಗಲಾಟೆ ಮಾಡಿದ್ದ. ಹಣ ನೀಡದ ಕೋಪಕ್ಕೆ ತಾಯಿಯ ಕೆನ್ನೆಗೆ ಮಗ ಅಂಬರೀಶ್ ಹೊಡೆದಿದ್ದಾನೆ. ತೀವ್ರ ಸ್ವರೂಪದ ಏಟು ಬಿದ್ದ ಕಾರಣ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಆರೋಪಿಯನ್ನ ಪೊಲೀಸರು ಬಂಧಿಸಿದ್ದು, ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಿನ ಟ್ಯಾಂಕ್​ಗೆ ಬಿದ್ದು ಬಾಲಕಿ ಸಾವು: ಆಟವಾಡುವಾಗ ನೀರಿನ ಟ್ಯಾಂಕ್​ಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್​ನಲ್ಲಿ ಸಂಭವಿಸಿದೆ. ಏಳು ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ  ಕೊನೆಯುಸಿರೆಳೆದಿದ್ದಾಳೆ. ಗೀತಾ-ಶೇಷಪ್ಪ ದಂಪತಿ ಪುತ್ರಿ ಪ್ರಾರ್ಥನಾ ಮೃತ ಮಗು. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: School Bus Accident: ರಾಜಸ್ಥಾನದಲ್ಲಿ ಶಾಲಾ ಬಸ್ ಅಪಘಾತ; ಇಬ್ಬರು ಮಕ್ಕಳು ಸಾವು, 40 ಜನರಿಗೆ ಗಾಯ

BS Yediyurappa: ರೈಸ್ ಮಿಲ್​ ಕೆಲಸದಿಂದ ಮುಖ್ಯಮಂತ್ರಿವರೆಗೆ; ಬಿಎಸ್ ಯಡಿಯೂರಪ್ಪ ಬಗ್ಗೆ ಕುತೂಹಲಕಾರಿ ಮಾಹಿತಿ ಇಲ್ಲಿದೆ

Published On - 8:25 am, Sun, 27 February 22

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ