ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು
ನೈಸ್ ರಸ್ತೆಯಲ್ಲಿ ತೆರಳುವಾಗ ಲಾರಿಯ ಹಿಂಬದಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮಂಜುನಾಥ್ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹೇಮಲತಾ, ಕೃತಿಕಾ, ಪ್ರಜ್ವಲ್ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ನೆಲಮಂಗಲ, ಡಿ.26: ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ (Road Accident). ಚುಂಚಘಟ್ಟ ನಿವಾಸಿ ಮಂಜುನಾಥ್(52) ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಹೇಮಲತಾ, ಕೃತಿಕಾ, ಪ್ರಜ್ವಲ್ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೈಸ್ ರಸ್ತೆಯಲ್ಲಿ ತೆರಳುವಾಗ ಲಾರಿಯ ಹಿಂಬದಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮಂಜುನಾಥ್ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಮಂಜುನಾಥ್ ಪತ್ನಿ ಹೇಮಲತಾ,ಮಗಳು ಕೃತಿಕಾ(20), ಮಗ ಪ್ರಜ್ವಲ್(14)ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಬಳಿಕ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ.
ಇದನ್ನೂ ಓದಿ: ಹೆಚ್ಚಾದ ಟ್ರಾಫಿಕ್ ಕಿರಿಕಿರಿ; ಮಾಲ್ ಆಫ್ ಏಷ್ಯಾ ವಿರುದ್ಧ ಬ್ಯಾಟರಾಯನಪುರ ನಿವಾಸಿಗಳ ಆಕ್ರೋಶ
ಅಂಕೋಲಾದ ಅವರ್ಸಾ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಅವರ್ಸಾ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ವಾಕಿಂಗ್ಗೆ ತೆರಳಿದ್ದಾಗ ಕಾರು ಡಿಕ್ಕಿಯಾಗಿ ದೀಪಾ(55) ಮೃತಪಟ್ಟಿದ್ದಾರೆ. ಕಾರು ಗೋವಾದಿಂದ ಕೋಲಾರ ಕಡೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರವಾಸಕ್ಕೆ ಹೊರಟಿದ್ದ ಬಸ್ ಅಪಘಾತ, ನಾಲ್ಕು ಮಕ್ಕಳಿಗೆ ಗಾಯ
ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿದೆ. ಈ ಪರಿಣಾಮ ನಾಲ್ಕು ಮಕ್ಕಳಿಗೆ ಗಂಭೀರವಾಗಿ ಗಾಯಗಳಾಗಿದ್ದು 45 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಶಾಲೆ ವತಿಯಿಂದ ಪ್ರವಾಸಕ್ಕೆ ಹೊರಟಿದ್ದಾಗ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಣ್ಣಪುಟ್ಟ ಗಾಯಗೊಂಡ ಮಕ್ಕಳನ್ನ ಸವಣೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಚೂರು ರಿಂದ ಪ್ರವಾಸಕ್ಕೆ ಆಗಮಿಸಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಸವಣೂರು ಉಪವಿಭಾಗಧಿಕಾರಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ