AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 4 ಅಂತಸ್ತಿನ ಕಟ್ಟಡ ಮೇಲಿಂದ ವಾಟರ್​ ಟ್ಯಾಂಕ್​ ಬಿದ್ದು ,ಮೂವರು ದುರ್ಮರಣ; ಓರ್ವನಿಗೆ ಗಂಭೀರ ಗಾಯ

ಬೆಂಗಳೂರಿನ ಶಿವಾಜಿನಗರದ ಬಸ್​ ನಿಲ್ದಾಣದ ಬಳಿ ಎಗ್ ರೈಸ್ ಮಾರಾಟ ಮಾಡುತ್ತಿದ್ದ ಹಾಗೂ ತಿನ್ನಲು ಬಂದಿದ್ದ ವ್ಯಕ್ತಿಯ ಮೇಲೆ ನಾಲ್ಕು ಅಂತಸ್ತಿನ ಮೇಲಿದ್ದ ವಾಟರ್ ಟ್ಯಾಂಕ್ ಬಿದ್ದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ 4 ಅಂತಸ್ತಿನ ಕಟ್ಟಡ ಮೇಲಿಂದ ವಾಟರ್​ ಟ್ಯಾಂಕ್​ ಬಿದ್ದು ,ಮೂವರು ದುರ್ಮರಣ; ಓರ್ವನಿಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Aug 03, 2023 | 2:42 PM

Share

ಬೆಂಗಳೂರು,ಆ.3: ಬೆಂಗಳೂರಿನ ಶಿವಾಜಿನಗರ(Shivajinagara)ದ ಬಸ್​ ನಿಲ್ದಾಣದ ಬಳಿ ಎಗ್ ರೈಸ್ ಮಾರಾಟ ಮಾಡುತ್ತಿದ್ದವನ ಸೇರಿ ತಿನ್ನಲು ಬಂದಿದ್ದ ವ್ಯಕ್ತಿಯ ಮೇಲೂ ನಾಲ್ಕು ಅಂತಸ್ತಿನ ಮೇಲಿದ್ದ ವಾಟರ್ ಟ್ಯಾಂಕ್(Water Tank) ಬಿದ್ದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇನ್ನುಳಿದಂತೆ ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದು , ಸಾವಿನ ಸಂಖ್ಯೆ ಮೂರಕ್ಕೆ ಏರಿದೆ. ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಿಂದ ಬಚಾವ್​ ಆಗಿದ್ದಾರೆ. ಕೂಡಲೇ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೀರು ತುಂಬಿದ್ದ ಸಿಂಟ್ಯಾಕ್ಸ್​ನಿಂದ ನೀರು ಲೀಕ್​ ಆಗಿ ಗೋಡೆ ವೀಕ್ ಆಗಿದೆ. ಈ ಹಿನ್ನಲೆ ಗೋಡೆ ಹಾಗೂ ಟ್ಯಾಂಕ್ ಎರಡೂ ಕುಸಿದು, ಕೆಳಗಡೆ ಎಗ್​ರೈಸ್​​ ವ್ಯಾಪಾರ ಮಾಡುತ್ತಿದ್ದವನ ಜೊತೆಗೆ ಅಂಗಡಿಗೆ ಬಂದಿದ್ದ ಗಿರಾಕಿಯ ಮೇಲೂ ಬಿದ್ದು ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಶಿವಾಜಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ವಾಟರ್​ ಟ್ಯಾಂಕ್​​​​​​​ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಬೆಂಗಳೂರಿನಲ್ಲಿ ಡಿಸಿಪಿ ಭೀಮಾಶಂಕರ್ ಗುಳೇದ್​ ‘ ಬೆಂಗಳೂರಿನ ಶಿವಾಜಿನಗರ ಬಸ್​ ನಿಲ್ದಾಣದ ಬಳಿಯಿರುವ ಓಕ್ ಫರ್ನಿಚರ್​​ ಮಳಿಗೆಯ ಮೇಲಿದ್ದ ವಾಟರ್​ ಟ್ಯಾಂಕ್​ ಬಿದ್ದು ಎಗ್​​ರೈಸ್​ ಅಂಗಡಿ ಮಾಲೀಕ ಹಾಗೂ ಎಗ್​​ರೈಸ್ ತಿನ್ನುತ್ತಿದ್ದ ಗ್ರಾಹಕ ಸಾವನ್ನಪ್ಪಿದ್ದು, ಮೃತರಲ್ಲಿ ಎಗ್​ರೈಸ್ ಅಂಗಡಿ ಮಾಲೀಕ ಅರುಳ್ ಎಂದು ಗುರುತಿಸಲಾಗಿದೆ. ಮೃತಪಟ್ಟ ಮತ್ತೊಬ್ಬರ ಹೆಸರು ಗುರುತು ಪತ್ತೆಯಾಗಿಲ್ಲ ಎಂದರು.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಉಡುಪಿಯಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ, ಕಾರವಾರದಲ್ಲಿ ವಿದ್ಯುತ್​ ಪ್ರವಹಿಸಿ ಎಂಟು ತಿಂಗಳ​ ಮಗು ಸಾವು

ಇನ್ನು ಈ ಘಟನೆಯಲ್ಲಿ ಕಮಲ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೇಲ್ನೋಟಕ್ಕೆ ಟ್ಯಾಂಕ್​ನ ಗೋಡೆ ಅವೈಜ್ಞಾನಿಕವಾಗಿ ನಿರ್ಮಿಸಿರುವ ಮಾಹಿತಿ ಇದ್ದು, ಬಿಬಿಎಂಪಿ ಪರೀಶೀಲನೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಬೆಂಗಳೂರು ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್​ ಹೇಳಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:21 am, Thu, 3 August 23