ಬೆಂಗಳೂರು: ದ್ವಿಚಕ್ರ ಸವಾರನಿಗೆ ಮಾರಕಾಸ್ತ್ರ ತೋರಿಸಿ ದರೋಡೆ! ಭೀತಿಗೊಳಿಸುವ ವಿಡಿಯೋ ಇಲ್ಲಿದೆ

ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಸವಾರನಿಂದ ಮೊಬೈಲ್ ದರೋಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದೆ. ಘಟನೆಯ ದೃಶ್ಯಗಳನ್ನು ನೆಟ್ಟಿಗರು ಟ್ವೀಟ್ ಮಾಡಿ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಬೆಂಗಳೂರು: ದ್ವಿಚಕ್ರ ಸವಾರನಿಗೆ ಮಾರಕಾಸ್ತ್ರ ತೋರಿಸಿ ದರೋಡೆ! ಭೀತಿಗೊಳಿಸುವ ವಿಡಿಯೋ ಇಲ್ಲಿದೆ
ದ್ವಿಚಕ್ರ ವಾಹನ ಅಡ್ಡಗಟ್ಟಿ ದರೋಡೆ ಮಾಡುತ್ತಿರುವ ದೃಶ್ಯ
Rakesh Nayak Manchi

Updated on: Aug 03, 2023 | 7:56 PM

ಬೆಂಗಳೂರು, ಆಗಸ್ಟ್ 3: ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಸವಾರನ ಮೊಬೈಲ್ ದರೋಡೆ (Robbery) ನಡೆಸಿದ ಘಟನೆ ನಗರದ ಬೆನ್ಸನ್ ಟೌನ್‌ನ ಉಪ-ಪ್ರದೇಶವಾದ ವಿಲಿಯಮ್ಸ್ ಟೌನ್‌ನಲ್ಲಿರುವ ಮುಬೀನ್ ತಾಜ್ ಅಪಾರ್ಟ್‌ಮೆಂಟ್ ಸಂಕೀರ್ಣದ ಬಳಿ ನಡೆದಿದೆ. ಬುಧವಾರ (ಆಗಸ್ಟ್ 2) ನಡೆದ ಘಟನೆ ಸಂಬಂಧ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದರೋಡೆಕೋರರು ದರೋಡೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು maxdudes ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಲಾಗಿದೆ.

ಇದನ್ನೂ ಓದಿ: Insta Love: ಇನ್ಸ್​​​ಟಾಗ್ರಾಮ್​​​ನಲ್ಲಿ ಪರಿಚಯವಾಗಿದ್ದ ಯುವಕನ ಭೇಟಿಗೆ ಬಂದ ವಿವಾಹಿತ ಮಹಿಳೆ, ದರೋಡೆಗೆ ತುತ್ತಾದರು!

ವಿಡಿಯೋದಲ್ಲಿರುವ ಸಮಯದ ಪ್ರಕಾರ, ಈ ಘಟನೆ ಮಧ್ಯಾಹ್ನ 2.35 ರ ಸುಮಾರಿಗೆ ನಡೆದಿದೆ. ದೃಶ್ಯಾವಳಿಯಲ್ಲಿ ಇರುವಂತೆ, ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುತ್ತಾರೆ. ಈ ವೇಳೆ ಹೆಲ್ಮೆಟ್ ಧರಿಸಿದ ಇಬ್ಬರು ದರೋಡೆಕೋರರು ಬಂದ ಅಡ್ಡಗಟ್ಟಿದ್ದಾರೆ. ನಂತರ ಓರ್ವ ಮಾರಕಾಸ್ತ್ರ ತೋರಿಸಿ ದರೋಡೆಗೆ ಇಳಿದಿದ್ದಾನೆ. ಇದಕ್ಕೆ ಪ್ರತಿರೋಧ ಒಡ್ಡಿದಾಗ ಮಾರಕಾಸ್ತ್ರದಿಂದ ಹಲ್ಲೆಗೆ ಮುಂದಾಗುತ್ತಾನೆ. ಕೊನೆಗೆ ಮೊಬೈಲ್ ಕಸಿದು ಇಬ್ಬರು ಸ್ಥಳದಿಂದ ಪರಾರಿಯಾಗುತ್ತಾರೆ.

ಟ್ವೀಟ್​ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.”

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us