AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಗೆ ವರದಿಗಾರ ವಿಜಯಕುಮಾರ್ ಚಂದರಗಿ ಆಯ್ಕೆ

ಉದಯವಾಣಿ ಪತ್ರಿಕೆಯ ಬೆಂಗಳೂರು ವರದಿಗಾರ ವಿಜಯಕುಮಾರ್ ಚಂದರಗಿ ಅವರಿಗೆ ಈ ವರ್ಷದ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ ಲಭಿಸಿದೆ. ಐದು ಸಾವಿರ ರೂ. ನಗದು ಮತ್ತು ಫಲಕವನ್ನು ಒಳಗೊಂಡ ಈ ಪ್ರಶಸ್ತಿಯನ್ನು ಜುಲೈ 5 ರಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರದಾನ ಮಾಡಲಿದ್ದಾರೆ.

ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಗೆ ವರದಿಗಾರ ವಿಜಯಕುಮಾರ್ ಚಂದರಗಿ ಆಯ್ಕೆ
ವಿಜಯಕುಮಾರ್ ಚಂದರಗಿ
ಗಂಗಾಧರ​ ಬ. ಸಾಬೋಜಿ
|

Updated on: Jun 26, 2025 | 2:39 PM

Share

ಬೆಂಗಳೂರು, ಜೂನ್​​ 26: ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಉದಯವಾಣಿ ಪತ್ರಿಕೆಯ (Udayavani) ಬೆಂಗಳೂರಿನ ವರದಿಗಾರ ವಿಜಯಕುಮಾರ್ ಚಂದರಗಿ (Vijaykumar Chandragi) ಅವರು ಆಯ್ಕೆ ಆಗಿದ್ದಾರೆ. ಈ ಪ್ರಶಸ್ತಿ ಐದು ಸಾವಿರ ರೂಪಾಯಿ ನಗದು, ಫಲಕವನ್ನು ಒಳಗೊಂಡಿದೆ. ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ಜುಲೈ 5 ರಂದು ಸಮಾರಂಭ ನಡೆಯಲಿದ್ದು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ವಿಜಯಕುಮಾರ ಚಂದರಗಿ ಮೂಲತಃ ಧಾರವಾಡ ಜಿಲ್ಲೆಯವರು. ಉತ್ಸಾಹಿ ಪತ್ರಕರ್ತ. ಶಿವಮೊಗ್ಗ ಸೇರಿದಂತೆ ಹಲವು ಕಡೆ ಕೆಲಸ ಮಾಡಿ ಈಗ ಬೆಂಗಳೂರಿನಲ್ಲಿ ‘ಉದಯವಾಣಿ’ ಪತ್ರಿಕೆಯಲ್ಲಿ ವರದಿಗಾರರಾಗಿ ಉತ್ತಮ ವರದಿಗಳನ್ನು ಬರೆದು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಗಗನಕ್ಕೇರಿದ ಕೊಬ್ಬರಿ ಎಣ್ಣೆ ದರ: ಕೊಬ್ಬರಿಗೆ ಬೇಡಿಕೆ ಗಣನೀಯ ಹೆಚ್ಚಳ

ರೋಹಿತ್ ಮೂಲತಃ ತುಮಕೂರು ಜಿಲ್ಲೆ ಗ್ರಾಮೀಣ ಪ್ರದೇಶದಿಂದ ಬಂದ ಅತ್ಯಂತ ಪ್ರತಿಭಾವಂತ ಯುವ ಪತ್ರಕರ್ತ. ಚಿಕ್ಕವಯಸ್ಸಿನಲ್ಲೇ ‘ಟೈಮ್ಸ್ ಆಫ್ ಇಂಡಿಯಾ’ ಸೇರಿದಂತೆ ಹಲವು ಆಂಗ್ಲ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: Karnataka Rains: ಕೊಡಗಿಗೆ ರೆಡ್ ಅಲರ್ಟ್​, ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ ಜೋರು

ದುರ್ದೈವದಿಂದ ಅವರ ತೋಟದ ಬಾವಿಯಲ್ಲಿ ಈಜಲು ಹೋಗಿ ಅಕಾಲ ಮರಣಕ್ಕೆ ತುತ್ತಾದರು. ಅವರ ತಂದೆ-ತಾಯಿ ಶ್ರೀ ರಾಜಣ್ಣ ಮತ್ತು ಶ್ರೀಮತಿ ಲಲಿತಾ ಅವರು ತಮ್ಮ ಮಗನ ಹೆಸರಿನಲ್ಲಿ ಪ್ರತಿ ವರ್ಷ ಪತ್ರಿಕೋದ್ಯಮ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಬ್ಬರು ಯುವ ಪತ್ರಕರ್ತರಿಗೆ ಈ ಪ್ರಶಸ್ತಿ ಕೊಡ ಮಾಡಲಾಗಿದೆ ಎಂದು ಇನ್‌ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಅಂಡ್ ರಿಸರ್ಚ್ ಸಂಸ್ಥೆಯ ಪರವಾಗಿ ಹಿರಿಯ ಪತ್ರಕರ್ತ ಎಚ್.ಆರ್. ಶ್ರೀಶ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ