ಉಡುಪಿಯಲ್ಲಿ ಕುಟುಂಬದ ನಾಲ್ವರ ಹತ್ಯೆ ಮಾಡಿದ್ದ ಆರೋಪಿ ಪರಪ್ಪನ ಜೈಲಿನಲ್ಲಿ ಉಪವಾಸ ಕುಳಿತುಬಿಟ್ಟಿದ್ದಾನೆ! ಯಾಕೆ?

2023ರಲ್ಲಿ ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಇಂಡಿಯಾ ಎಕ್ಸ್‌ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ ಸದ್ಯ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾನೆ. ಆರೋಪಿ ಪ್ರವೀಣ್ ಉಪವಾಸ ಕುಳಿತಿದ್ದಾನೆ. ಬೆಳಗ್ಗಿನ ತಿಂಡಿ ಮಧ್ಯಾಹ್ನ ಊಟ ಮಾಡದೆ ಹಠ ಮಾಡುತ್ತಿದ್ದಾನೆ.

ಉಡುಪಿಯಲ್ಲಿ ಕುಟುಂಬದ ನಾಲ್ವರ ಹತ್ಯೆ ಮಾಡಿದ್ದ ಆರೋಪಿ ಪರಪ್ಪನ ಜೈಲಿನಲ್ಲಿ ಉಪವಾಸ ಕುಳಿತುಬಿಟ್ಟಿದ್ದಾನೆ! ಯಾಕೆ?
ಬೆಂಗಳೂರು ಕೇಂದ್ರ ಕಾರಾಗೃಹ
Follow us
| Updated By: ಆಯೇಷಾ ಬಾನು

Updated on: Sep 11, 2024 | 10:32 AM

ಉಡುಪಿ, ಸೆ.11: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ (Murder) ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಅನ್ನ, ನೀರು ಸ್ವೀಕರಿಸಲು ನಿರಾಕರಸಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರು ಸೆಂಟ್ರಲ್ ಜೈಲ್ ನಲ್ಲಿ ಆರೋಪಿ ಪ್ರವೀಣ್ ಉಪವಾಸ ಕುಳಿತಿದ್ದಾನೆ. ಬೆಳಗ್ಗಿನ ತಿಂಡಿ ಮಧ್ಯಾಹ್ನ ಊಟ ಮಾಡದೆ ಹಠ ಮಾಡುತ್ತಿದ್ದಾನೆ.

2023ರಲ್ಲಿ ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ನಡೆದಿತ್ತು. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ ಉಡುಪಿಯಲ್ಲಿನ ಮನೆಗೆ ನುಗ್ಗಿ ಹಸೀನಾ(48) ಮತ್ತು ಆಕೆಯ ಮಕ್ಕಳಾದ ಅಫ್ಸಾನ್(23), ಅಸೀಮ್ (12) ಮತ್ತು ಅಯ್ನಾಜ್ (21) ಕೊಲೆ ಮಾಡಿದ್ದ. ಸದ್ಯ ಈಗ ಆರೋಪಿ ಪ್ರವೀಣ್ ಸೆಂಟ್ರಲ್ ಜೈಲ್​ನ ಪ್ರತ್ಯೇಕ ಸೆಲ್ ನಲ್ಲಿ ಜೈಲುವಾಸ ಅನುಭವಿಸುತ್ತಿದ್ದಾನೆ. ಆದರೆ ಇದೀಗ ಬೆಳಗ್ಗಿನ ತಿಂಡಿ, ಮಧ್ಯಾಹ್ನ ಊಟ ಮಾಡದೆ ಉಪವಾಸ ಮಾಡುತ್ತಿದ್ದು ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್​ಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾನೆ.

ಜೀವ ಬೆದೆರಿಕೆ ಹಿನ್ನೆಲೆ ಪ್ರತ್ಯೇಕ ಸೆಲ್​ನಲ್ಲಿ ಇಟ್ಟಿರುವ ಬಗ್ಗೆ ಕೋರ್ಟ್​ಗೆ ಮನವಿ ಮಾಡಿದ್ದಾನೆ. ಸೆಂಟ್ರಲ್ ಜೈಲ್ ನ ಪ್ರಧಾನ ಬ್ಲಾಕ್ ಗೆ ತನ್ನನ್ನು ಶಿಫ್ಟ್ ಮಾಡುವಂತೆ ಆರೋಪಿ ಪ್ರವೀಣ್ ಮನವಿ ಮಾಡಿದ್ದಾನೆ. ಆದರೆ ಪ್ರವೀಣ್ ಚೌಗುಲೆಗೆ ಜೀವ ಬೆದರಿಕೆ ಇರುವುದರಿಂದ ಪ್ರತ್ಯೇಕ ಸೆಲ್ ನ ಅಗತ್ಯ ಇದೆ ಎಂದು ಜೈಲ್​ನ ಸಹಾಯಕ ಅಧೀಕ್ಷಕರು ಕೋರ್ಟ್ ಗೆ ಸ್ಪಷ್ಟನೆ ನೀಡಿದ್ದಾರೆ. ನವೆಂಬರ್ 12, 202ರ ರಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅರುಣ್ ಚೌಗುಲೆ ಕೊಲೆ ಮಾಡಿದ್ದ. ಜೊತೆಗೆ ಕುಟುಂಬದ ವೃದ್ಧೆ ಹಾಜಿರಾ ಹತ್ಯೆಗೆ ಯತ್ನಿಸಿದ್ದ. ಜೀವ ಬೆದರಿಕೆ ಹಿನ್ನೆಲೆ ನವೆಂಬರ್ 27ರಂದು ಉಡುಪಿಯಿಂದ ಬೆಂಗಳೂರಿಗೆ ಆರೋಪಿಯನ್ನು ಪೊಲೀಸರು ಶಿಫ್ಟ್ ಮಾಡಿದ್ದರು.

ಇದನ್ನೂ ಓದಿ: ಕೊಲೆ ಆರೋಪಿಗಳಿಂದ ಸರಳವಾಸ್ತು ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ

ಏನಿದು ಪ್ರಕರಣ?

2023ರ ನವೆಂಬರ್ 12ರ ಭಾನುವಾರದಂದು ಏಕಾಏಕಿ ಮನೆಗೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಆರೋಪಿ ಅರುಣ್ ಚೌಗುಲೆ ಭೀಕರವಾಗಿ ಹತ್ಯೆ ಮಾಡಿದ್ದ. ಕೇವಲ 15 ನಿಮಿಷಗಳಲ್ಲಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದ. ಮೂಲತಃ ಕೋಡಿಬೆಂಗ್ರೆಯ ಪ್ರಸ್ತುತ ನೇಜಾರು ನಿವಾಸಿಗಳಾದ ಹಸೀನಾ (48) ಅವರ ಮಕ್ಕಳಾದ ಮಂಗಳೂರಿನಲ್ಲಿ ಲಾಜಿಸ್ಟಿಕ್ಸ್ ಒಂದರಲ್ಲಿ ಕೆಲಸದಲ್ಲಿರುವ ಅಫ್ನಾನ್ (23), ಏರ್ ಇಂಡಿಯಾದಲ್ಲಿ ಉದ್ಯೋಗಿಯಾಗಿರುವ ಅಯ್ನಾಝ್ (21) ಹಾಗೂ 8 ನೇ ತರಗತಿಯ ಅಸೀಮ್(12) ಕೊಲೆಯಾದವರು. ಹತ್ಯೆಗೀಡಾದ ಯುವತಿ ಅಫ್ನಾನ್ ಹಾಗೂ ಕೊಲೆ ಮಾಡಿದ ಆರೋಪಿ ಇಬ್ಬರೂ ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಕೊಲೆಯಾದ ಯುವತಿಗೂ ಆರೋಪಿಗೂ ಪರಿಚಯವಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ