ಉಡುಪಿ: ಇಷ್ಟು ದಿನ ಕಾಲೇಜಿಗೆ ಬರದೆ ಶಿಕ್ಷಣಕ್ಕೆ ಸಮಸ್ಯೆ ಆಗಿದೆ; ಅಂಥವರಿಗೆ ಪ್ರತ್ಯೇಕ ನೋಟ್ಸ್ ನೀಡಲಾಗುವುದು: ರಘುಪತಿ ಭಟ್
ಯಾರಿಂದಲೂ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುವುದಿಲ್ಲ. ಅವರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಹೋದರೆ ಅಲ್ಲಿಯೂ ನಮಗೆ ಜಯ ಸಿಗುವ ನಂಬಿಕೆ ಇದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿ ವಜಾಗೊಳಿಸಲಾಗಿದೆ. ಈ ಬಗ್ಗೆ ಹೈಕೋರ್ಟ್ ತೀರ್ಪಿನ ಬಗ್ಗೆ ಉಡುಪಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. 6 ವಿದ್ಯಾರ್ಥಿನಿಯರು ಹಠ ಮಾಡದೆ ಕಾಲೇಜಿಗೆ ಬರಬೇಕು. ಇಷ್ಟು ದಿನ ಕಾಲೇಜಿಗೆ ಬರದೆ ಶಿಕ್ಷಣಕ್ಕೆ ಸಮಸ್ಯೆಯಾಗಿದೆ. ಅಂತಹವರಿಗೆ ಪ್ರತ್ಯೇಕ ನೋಟ್ಸ್ ಕೂಡ ನೀಡಲಾಗುವುದು ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದಿದೆ. ಸಮವಸ್ತ್ರ ಇಲ್ಲದ ಶಾಲೆಗಳಲ್ಲೂ ಹಿಜಾಬ್ ಧರಿಸಬಾರದು. ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ. ಮುಸಲ್ಮಾನರು ಆದೇಶ ಪಾಲಿಸುತ್ತಾರೆಂಬ ನಂಬಿಕೆ ಇದೆ. ನಾನು ಮುಸ್ಲಿಂ ಒಕ್ಕೂಟದ ಜೊತೆಯೂ ಮಾತನಾಡಿದ್ದೇನೆ. ಹೈಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಆದೇಶ ಬಂದ ಹಿನ್ನೆಲೆ ವಿದ್ಯಾರ್ಥಿಗಳ ಬಳಿ ಮಾತನಾಡುತ್ತೇನೆ. ಇಷ್ಟೆಲ್ಲ ಆದ ಮೇಲೆ ಕಾಲೇಜಿಗೆ ಬರಲು ಭಯಬೇಡ. ಯಾರಿಂದಲೂ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುವುದಿಲ್ಲ. ಅವರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಹೋದರೆ ಅಲ್ಲಿಯೂ ನಮಗೆ ಜಯ ಸಿಗುವ ನಂಬಿಕೆ ಇದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ.
ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿ ವಜಾ ಆಗಿದೆ. ಹೈಕೋರ್ಟ್ ತೀರ್ಪಿನ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ರಾಜ್ಯದ ಪ್ರತಿಯೊಬ್ಬರೂ ಹೈಕೋರ್ಟ್ ತೀರ್ಪು ಪಾಲಿಸಬೇಕು. ಎಲ್ಲರೂ ಕೋರ್ಟ್ ತೀರ್ಪು ಶಾಂತಿ, ಸುವ್ಯವಸ್ಥೆ ಕಾಪಾಡಬೇಕು. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಜೋಶಿ ಮನವಿ ಮಾಡಿದ್ದಾರೆ.
ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿ ವಜಾಗೊಳಿಸಿರುವ ಹಿನ್ನೆಲೆ ಹೈಕೋರ್ಟ್ ತೀರ್ಪಿನ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಹಿಜಾಬ್ ಕಡ್ಡಾಯವಲ್ಲ ಎಂದು ಕೋರ್ಟ್ ಹೇಳಿದೆ. ಜ್ಯಾತ್ಯತೀತ ತತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಸಾಕಷ್ಟು ಚರ್ಚೆ ಬಳಿಕ ಕೋರ್ಟ್ ತೀರ್ಪು ನೀಡಿದೆ. ಮೂಲಭೂತವಾದಿಗಳಿಂದ ದೇಶ ಒಡೆಯಲು ಯತ್ನಿಸಲಾಗುತ್ತಿದೆ. ಇಸ್ಲಾಂ ಹೆಸರಲ್ಲಿ ಆಂತರಿಕ ಭಯೋತ್ಪಾದನೆ ಸೃಷ್ಟಿಸಿದ್ದಾರೆ. ನ್ಯಾಯಾಲಯ ಸಂವಿಧಾನಾತ್ಮಕ ವ್ಯವಸ್ಥೆ ಎತ್ತಿ ಹಿಡಿದಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ.
ಇದನ್ನೂ ಓದಿ: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು
ಇದನ್ನೂ ಓದಿ: ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ: ಹೈಕೋರ್ಟ್
Published On - 11:43 am, Tue, 15 March 22