AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬಕ್ಕೆಂದು ಊರಿಗೆ ತೆರಳುವವರಿಗೆ ಗುಡ್​​ನ್ಯೂಸ್​​: ಕೆಎಸ್​​ಆರ್​​ಟಿಸಿಯಿಂದ 2,000 ಹೆಚ್ಚುವರಿ ಬಸ್​​ ವ್ಯವಸ್ಥೆ

ಯುಗಾದಿ ಮತ್ತು ಈದ್ ಹಬ್ಬಗಳ ನಿಮಿತ್ತ ಬೆಂಗಳೂರಿನಿಂದ ರಾಜ್ಯಾದ್ಯಂತ ಹಾಗೂ ಅಂತಾರಾಜ್ಯಗಳಿಗೆ ಒಟ್ಟು 2,000 ಹೆಚ್ಚುವರಿ KSRTC ಬಸ್‌ಗಳು ಸಂಚಾರ ನಡೆಸಲಿವೆ. ಮಾರ್ಚ್ 18-20ರ ವರೆಗೆ ತೆರಳಲು ಮತ್ತು ಮಾರ್ಚ್ 22ರಂದು ವಾಪಸ್ ಬರಲು ವಿಶೇಷ ಬಸ್​​ ಸೇವೆ ಲಭ್ಯವಿರಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ವ್ಯವಸ್ಥೆ ಮಾಡಲಾಗಿದ್ದು, ಆನ್‌ಲೈನ್‌ನಲ್ಲಿ ಅಥವಾ ಕೌಂಟರ್‌ಗಳಲ್ಲಿ ಮುಂಗಡ ಬುಕ್ಕಿಂಗ್ ಮಾಡಬಹುದು. ವಿಶೇಷ ರಿಯಾಯಿತಿ ಸಹ ಪ್ರಯಾಣಿಕರಿಗೆ ಸಿಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಹಬ್ಬಕ್ಕೆಂದು ಊರಿಗೆ ತೆರಳುವವರಿಗೆ ಗುಡ್​​ನ್ಯೂಸ್​​: ಕೆಎಸ್​​ಆರ್​​ಟಿಸಿಯಿಂದ 2,000 ಹೆಚ್ಚುವರಿ ಬಸ್​​ ವ್ಯವಸ್ಥೆ
KSRTC ಬಸ್​​ಗಳು (ಸಾಂದರ್ಭಿಕ ಚಿತ್ರ)Image Credit source: Google
ಪ್ರಸನ್ನ ಹೆಗಡೆ
|

Updated on: Mar 15, 2026 | 8:58 PM

Share

ಬೆಂಗಳೂರು, ಮಾರ್ಚ್​​ 15: ಯುಗಾದಿ ಮತ್ತು ಈದ್-ಉಲ್-ಫಿತ್ರ್ ಹಬ್ಬಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳು ಮತ್ತು ಅಂತಾರಾಜ್ಯಗಳ ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಹೀಗಾಗಿ ಹಬ್ಬಗಳ ವೇಳೆ ಪ್ರಯಾಣಿಕರಿಗೆ ಯಾವುದೇ ಅನಾನುಕೂಲತೆ ಆಗಬಾರದೆಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಈ ಸಂದರ್ಭ ರಾಜ್ಯದಾದ್ಯಂತ 2,000 ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ನಿರ್ಧರಿಸಿರೋದಾಗಿ ಪ್ರಕಟಣೆ ಮೂಲಕ KSRTC ತಿಳಿಸಿದೆ.

ಯಾವೆಲ್ಲ ದಿನ ಹೆಚ್ಚುವರಿ ಬಸ್​​ ಸಂಚಾರ?

ಸಾರಿಗೆ ನಿಗಮದ ಮಾಹಿತಿ ಪ್ರಕಾರ, ಮಾರ್ಚ್ 19ರಂದು ಯುಗಾದಿ ಹಾಗೂ ಮಾರ್ಚ್ 21ರಂದು ಈದ್-ಉಲ್-ಫಿತ್ರ್ ಹಬ್ಬಗಳಿರುವ ಹಿನ್ನೆಲೆಯಲ್ಲಿ ಮಾರ್ಚ್ 18, 19 ಮತ್ತು 20ರಂದು ವಿಶೇಷ ಬಸ್ ಸೇವೆಗಳು ಇರಲಿವೆ. ಇದೇ ವೇಳೆ ವಿವಿಧ ರಾಜ್ಯ ಮತ್ತು ಅಂತಾರಾಜ್ಯಗಳಿಂದ ಮಾರ್ಚ್ 22ರಂದು ಬೆಂಗಳೂರಿಗೆ ಹಿಂದಿರುಗಲೂ ಈ ವಿಶೇಷ ಬಸ್ ಸೇವೆಗಳು ಇರಲಿವೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ ಮತ್ತು ಬಳ್ಳಾರಿ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್ಸುಗಳು ಸಂಚರಿಸಲಿವೆ. ಇದಲ್ಲದೆ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಕುಶಾಲನಗರ ಹಾಗೂ ಮಡಿಕೇರಿ ಕಡೆಗೂ ಹೆಚ್ಚುವರಿ ಬಸ್ ಸೇವೆಗಳು ಲಭ್ಯವಿರಲಿವೆ. ಪ್ರಯಾಣಿಕರು KSRTC ವೆಬ್‌ಸೈಟ್ ಹಾಗೂ ಕರ್ನಾಟಕ ಮತ್ತು ನೆರೆ ರಾಜ್ಯಗಳಲ್ಲಿನ ರಿಸರ್ವೇಶನ್ ಕೌಂಟರ್‌ಗಳ ಮೂಲಕ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬಹುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

ವಿಶೇಷ ರಿಯಾಯಿತಿ

ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಮಂದಿ ಒಟ್ಟಿಗೆ ಟಿಕೆಟ್ ಬುಕ್ ಮಾಡಿದರೆ ಶೇ.5 ರಿಯಾಯಿತಿ ಹಾಗೂ ಹೋಗಿ-ಬರುವ (ರಿಟರ್ನ್) ಪ್ರಯಾಣದ ಟಿಕೆಟ್ ಒಂದೇ ವೇಳೆ ಬುಕ್ ಮಾಡಿದರೆ ಶೇ. 10ರಷ್ಟು ರಿಯಾಯಿತಿಯನ್ನು ಪ್ರಯಾಣಿಕರಿಗೆ ನೀಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?