AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರ ಬಗ್ಗೆ ಕಠಿಣತೆ ಏಕೆ?- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಬೇಸರ

ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ - ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ.

ಕನ್ನಡಿಗರ ಬಗ್ಗೆ ಕಠಿಣತೆ ಏಕೆ?- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಬೇಸರ
ಎಚ್ ​ಡಿ ಕುಮಾರಸ್ವಾಮಿ
TV9 Web
| Edited By: |

Updated on:Dec 27, 2021 | 10:34 AM

Share

ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಿನ್ನೆ (ಡಿ.26) ನಡೆಸಿದ ಯುಜಿಸಿ- ಎನ್ಇಟಿ ಕನ್ನಡ ಐಚ್ಛಿಕ ಭಾಷೆಯ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕನ್ನಡ ಭಾಷೆಗಿಂತ ಹೆಚ್ಚು ಹಿಂದಿ ಭಾಷೆಯಿಂದ ಕೂಡಿತ್ತು. ಪ್ರಶ್ನೆ ಪತ್ರಿಕೆಯಲ್ಲಿ ಶೇ.90 ರಷ್ಟು ಪ್ರಶ್ನೆಗಳು ಹಿಂದಿ ಭಾಷೆಯಿಂದ ಕೂಡಿದ್ದವು. ರಾಜ್ಯದಾದ್ಯಂತ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಅಂತ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ – ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ ಅಂತ ಟ್ವೀಟ್ ಮಾಡಿರುವ ಎಚ್​ಡಿಕೆ, ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ ಅಂತ ಆರೋಪಿಸಿದ್ದಾರೆ.

ಮರು ಪರೀಕ್ಷೆ ನಡೆಸಲು ಆಗ್ರಹ ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ. ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಮರು ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು ಅಂತ ಆಗ್ರಹಿಸಿದ್ದಾರೆ.

ಇದನ್ನೂ ಓದಿ

ಕದ್ದ ಬೈಕ್​ಗಳನ್ನ ವಿದ್ಯಾರಣ್ಯಪುರ ಕಾನ್ಸ್​ಟೇಬಲ್​ ಏನ್ ಮಾಡುತ್ತಿದ್ದ ಗೊತ್ತಾ? ವಿಡಿಯೋ ನೋಡಿ

ನಾಗರಬಾವಿಯಲ್ಲಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು, ಕಾರು ನಿಲ್ಲಿಸದೇ ಎಸ್ಕೇಪ್ ಆದ ಚಾಲಕ

Published On - 10:30 am, Mon, 27 December 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು